ಪಾಪನಾಶ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ವೀಕ್ಷಣೆ: ಗುಣಮಟ್ಟಕ್ಕೆ ಆದ್ಯತೆ ನೀಡಲು ಭಗವಂತ್ ಖೂಬಾ ಸೂಚನೆ

ಬೀದರ್: ಜಿಲ್ಲೆಯ ಐತಿಹಾಸಿಕ ಮತ್ತು ಪವಿತ್ರ ಧಾರ್ಮಿಕ ಕೇಂದ್ರವಾದ ಪಾಪನಾಶ ದೇವಸ್ಥಾನವನ್ನು ಪ್ರವಾಸಿ ಮತ್ತು ಆಧ್ಯಾತ್ಮಿಕ ತಾಣವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾ ಅವರು ಇಂದು ವೀಕ್ಷಿಸಿದರು. ಕೇಂದ್ರ ಸರ್ಕಾರದ ‘ಪ್ರಸಾದ್’ (PRASHAD) ಯೋಜನೆಯಡಿ…

Continue reading
ಬೀದರ್ ಸುತ್ತಮುತ್ತ ಚಿರತೆ ಆತಂಕ: ಮುನ್ನೆಚ್ಚರಿಕಾ ಕ್ರಮಗಳಿಗೆ ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಬೀದರ್: ಜಿಲ್ಲೆಯ ಹೊನ್ನೆಕೇರಿ ಸೇರಿದಂತೆ ವಿವಿಧ ಅರಣ್ಯ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಇಂದು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…

Continue reading
ಕಮಲನಗರದಲ್ಲಿ ಸಂಚಾರಿ ನ್ಯಾಯಾಲಯ ಉದ್ಘಾಟನೆ: ಶೀಘ್ರವೇ ಖಾಯಂ ನ್ಯಾಯಾಲಯಕ್ಕೆ ಭೂಮಿಪೂಜೆ – ಸಚಿವ ಈಶ್ವರ ಖಂಡ್ರೆ ಭರವಸೆ

ಕಮಲನಗರ (ಬೀದರ್): ನೂತನ ತಾಲೂಕು ಕೇಂದ್ರವಾದ ಕಮಲನಗರದ ನಾಗರಿಕರಿಗೆ ನ್ಯಾಯಾಂಗ ವ್ಯವಸ್ಥೆಯನ್ನು ಸನಿಹಕ್ಕಾಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಪಟ್ಟಣದಲ್ಲಿ ಇಂದು ದಿವಾಣಿ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ದಂಡನೀಯ ನ್ಯಾಯಾಲಯ, ಔರಾದ್(ಬಿ) ಸಂಚಾರಿ ನ್ಯಾಯಾಲಯ ಕಚೇರಿಯನ್ನು ಅರಣ್ಯ ಹಾಗೂ ಜೀವಿಶಾಸ್ತ್ರ…

Continue reading
ಬೀದರ್‌ನಲ್ಲಿ ಪತ್ರಕರ್ತರ 40ನೇ ರಾಜ್ಯ ಸಮ್ಮೇಳನ: ಲೋಗೋ ಬಿಡುಗಡೆಗೊಳಿಸಿ ಸಮ್ಮೇಳನಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗಡಿ ಜಿಲ್ಲೆ ಬೀದರ್‌ನಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) 40ನೇ ರಾಜ್ಯ ಸಮ್ಮೇಳನದ ಲಾಂಛನವನ್ನು (Logo) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ಅಧಿಕೃತವಾಗಿ ಅನಾವರಣಗೊಳಿಸಿದರು. ಸಮ್ಮೇಳನದ ಲೋಗೋ ಬಿಡುಗಡೆಗೊಳಿಸಿ ಮಾತನಾಡಿದ ಮುಖ್ಯಮಂತ್ರಿಗಳು, “ಪತ್ರಿಕೋದ್ಯಮವು ಸಮಾಜದ ಕನ್ನಡಿಯಾಗಿದ್ದು,…

Continue reading
ಚೀನಾ ಮಾಂಜಾ(ದಾರ)ಗೆ ಬಲಿಯಾದ ಬೈಕ್ ಸವಾರ: ಮೃತರ ಕುಟುಂಬಕ್ಕೆ ಸಚಿವ ಈಶ್ವರ ಖಂಡ್ರೆ ಸಾಂತ್ವನ

ಬೀದರ್: ಮಕರ ಸಂಕ್ರಾಂತಿ ಹಬ್ಬದ ಸಂಭ್ರಮದ ನಡುವೆಯೇ ನಿಷೇಧಿತ ಚೀನಾ ಮಾಂಜಾ ದಾರ ಅಮಾಯಕ ಜೀವವೊಂದನ್ನು ಬಲಿ ಪಡೆದಿದೆ. ರಾಷ್ಟ್ರೀಯ ಹೆದ್ದಾರಿ–65ರ ನಿರ್ಣಾ ಕ್ರಾಸ್ ಸಮೀಪ ಗಾಳಿಪಟ ಹಾರಿಸುವ ವೇಳೆ ನಿಷೇಧಿತ ಚೀನಾ ತಯಾರಿಕೆಯ ಮಾಂಜಾ ದಾರ ಬಳಕೆಯಿಂದ ದ್ವಿಚಕ್ರ ವಾಹನ…

Continue reading
ಗಡಿನಾಡಿನ ಧೀಮಂತ ನಾಯಕ ಭೀಮಣ್ಣ ಖಂಡ್ರೆ ಇನ್ನಿಲ್ಲ: ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದ ಸಿಎಂ, ಡಿಸಿಎಂ ಹಾಗೂ ಗಣ್ಯರು

ಭಾಲ್ಕಿ (ಬೀದರ್): ಸ್ವಾತಂತ್ರ್ಯ ಹೋರಾಟಗಾರರು, ಮಾಜಿ ಸಚಿವರು ಹಾಗೂ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಮಾಜಿ ಅಧ್ಯಕ್ಷರಾದ ಶ್ರೀ ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಇಡೀ ರಾಜ್ಯ ಕಂಬನಿ ಮಿಡಿದಿದೆ. ಭಾಲ್ಕಿ ನಗರದ ಶಾಂತಿಧಾಮದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದ್ದ ಅವರ ಪಾರ್ಥಿವ…

Continue reading
ಬೀದರ್‌ನಲ್ಲಿ ಜನವರಿ 24ರಿಂದ 26ರವರೆಗೆ ರಾಜ್ಯ ಮಟ್ಟದ ‘ವೀರಲೋಕ ಪುಸ್ತಕ ಸಂತೆ’: ಲೋಗೋ ಬಿಡುಗಡೆ ಮಾಡಿದ ಸಚಿವ ಈಶ್ವರ ಖಂಡ್ರೆ

ಬೀದರ್: ಭಾಲ್ಕಿಯ ಹಿರೇಮಠ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಜನೆವರಿ 24, 25 ಮತ್ತು 26 ರಂದು ಬೀದರ್ ನಗರದ ಸಾಯಿ ಸ್ಕೂಲ್ ಮೈದಾನದಲ್ಲಿ ರಾಜ್ಯ ಮಟ್ಟದ ‘ವೀರಲೋಕ ಪುಸ್ತಕ ಸಂತೆ’ ಆಯೋಜಿಸಲಾಗಿದೆ ಎಂದು ಅರಣ್ಯ ಹಾಗೂ…

Continue reading
ಶ್ರಮಜೀವಿಗಳ ಸುರಕ್ಷತೆ ನಮ್ಮ ಸರ್ಕಾರದ ಆದ್ಯತೆ: ಭಾಲ್ಕಿಯಲ್ಲಿ ಸಚಿವ ಈಶ್ವರ್ ಖಂಡ್ರೆ ಘೋಷಣೆ

ಭಾಲ್ಕಿ: “ನಾಡಿನ ಅಭಿವೃದ್ಧಿಗೆ ಬೆನ್ನೆಲುಬಾಗಿ ನಿಲ್ಲುವ ಕಟ್ಟಡ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಗೆ ನಮ್ಮ ಸರ್ಕಾರ ಮೊದಲ ಆದ್ಯತೆ ನೀಡಿದೆ. ಶ್ರಮಜೀವಿಗಳು ಗೌರವಯುತ ಹಾಗೂ ಸುರಕ್ಷಿತ ಜೀವನ ನಡೆಸಬೇಕೆಂಬುದೇ ನಮ್ಮ ಆಶಯ,” ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್…

Continue reading
ಬೀದರ್‌ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ: ಶಾಸಕರ ಮೇಲಿನ ಹಲ್ಲೆ ಖಂಡಿಸಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ

ಬೀದರ್: ಜಿಲ್ಲೆಯ ಬಿಜೆಪಿ ಶಾಸಕರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಖಂಡಿಸಿ ಹಾಗೂ ಹಲ್ಲೆಕೋರರ ವಿರುದ್ಧ ಕ್ರಮ ಕೈಗೊಳ್ಳದ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಧೋರಣೆಯನ್ನು ವಿರೋಧಿಸಿ ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ನಾಯಕರು ಹಾಗೂ ಸಾವಿರಾರು…

Continue reading
ಬೀದರ್ ರೈಲ್ವೆ ನಿಲ್ದಾಣದ ಜನತೆಗೆ ಸಿಹಿಸುದ್ದಿ!

ಅಮೃತ ಭಾರತ್ ಯೋಜನೆಯಡಿಯಲ್ಲಿ ₹24.35 ಕೋಟಿ ವೆಚ್ಚದಲ್ಲಿ ಬೀದರ್ ನಿಲ್ದಾಣದ ಪುನರಾಭಿವೃದ್ಧಿ ಜೋರಾಗಿ ನಡೆಯುತ್ತಿದೆ. ರಾಜ್ಯದ ರೈಲ್ವೆ ಹಾಗೂ ಜಲಶಕ್ತಿ ಸಚಿವ ವಿ. ಸೋಮಣ್ಣ ಅವರು ನಿಲ್ದಾಣ ಪರಿಶೀಲನೆ ನಡೆಸಿ, ಕಾಮಗಾರಿ ನಿಗದಿತ ಅವಧಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ…

Continue reading