ಒಂದಷ್ಟು ಮಂದಿ ಮರ್ಯಾದೆ ಹತ್ಯೆ ತಡೆ ಕಾಯ್ದೆ ಜಾರಿಗೆ ಒತ್ತಾಯಿಸಿದ್ದಾರೆ. ಹುಬ್ಬಳ್ಳಿ, ಚಿತ್ರದುರ್ಗದಲ್ಲಿ ಅಂತಹ ಪ್ರಕಣಗಳು ನಡೆದಿವೆ. ಕಾಯ್ದೆ ತರೋದು ಮುಖ್ಯ ಅಲ್ಲ, ಅನುಷ್ಠಾನಕ್ಕೆ ತರಬೇಕು. ರಾಜ್ಯದಲ್ಲಿ ಮರ್ಯಾದೆ ಹತ್ಯೆ ವಿರೋಧಿ ಕಾಯ್ದೆ ಜಾರಿಗೆ ತರೋದಾಗಿ ಸಿಎಂ ಹೇಳಿದ್ದಾರೆ.
ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಾ ಹತ್ಯೆ ಪ್ರಕರಣ ಬೆನ್ನಲ್ಲೇ ಅದರ ವಿರುದ್ಧ ಹೊಸ ಕಾನೂನು ಜಾರಿಗೆ ತರಬೇಕು ಎಂಬ ಆಗ್ರಹ ಜೋರಾಗಿದೆ. ಇದೀಗ ಮರ್ಯಾದಾ ಹತ್ಯೆ ತಡೆ ಕಾನೂನು ತರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನ್ನಾಡಿದ್ದಾರೆ. ಒಂದಷ್ಟು ಮಂದಿ ಮರ್ಯಾದೆ ಹತ್ಯೆ ತಡೆ ಕಾಯ್ದೆ ಜಾರಿಗೆ ಒತ್ತಾಯಿಸಿದ್ದಾರೆ. ಹುಬ್ಬಳ್ಳಿ, ಚಿತ್ರದುರ್ಗದಲ್ಲಿ ಅಂತಹ ಪ್ರಕಣಗಳು ನಡೆದಿವೆ. ಕಾಯ್ದೆ ತರೋದು ಮುಖ್ಯ ಅಲ್ಲ, ಅನುಷ್ಠಾನಕ್ಕೆ ತರಬೇಕು.
ಆ ಕೆಲಸ ಮಾಡುತ್ತೇನೆ ಎಂದಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಮರ್ಯಾದೆ ಹತ್ಯೆ ವಿರೋಧಿ ಕಾಯ್ದೆ ಜಾರಿಗೆ ತರೋದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.







