ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆ ಶೀಘ್ರ ನಡೆಸಲು ಸರ್ಕಾರ ಬದ್ಧ: ಡಿಕೆ ಶಿವಕುಮಾರ್

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗಳು ಮುಂದಿನ 2 ರಿಂದ 3 ತಿಂಗಳೊಳಗೆ ನಡೆಯಲಿವೆ. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ. ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಈಗಿನಿಂದಲೇ ತಯಾರಿ ಆರಂಭಿಸಬೇಕು. ಬೂತ್ ಮಟ್ಟದಲ್ಲಿ ಕೆಲಸ ಮಾಡುವವರಿಗೆ ಅವಕಾಶ ನೀಡಲಾಗುವುದು. ರಾಜ್ಯದಾದ್ಯಂತ 100 ಕಾಂಗ್ರೆಸ್ ಕಚೇರಿಗಳ ನಿರ್ಮಾಣ ಕಾರ್ಯವೂ ನಡೆಯುತ್ತಿದೆ.

ಬೆಂಗಳೂರು: ಜಿಲ್ಲಾ- ತಾಲ್ಲೂಕು ಪಂಚಾಯತಿ ಚುನಾವಣೆ ಎದುರು ನೋಡುತ್ತಿರುವವರಿಗೆ ಗುಡ್‌ನ್ಯೂಸ್‌. ಈ ಬಗ್ಗೆ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆಗೆ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಸೂಚನೆ ನೀಡಿದ್ದಾರೆ. 2 ರಿಂದ 3 ತಿಂಗಳೊಳಗೆ ಚುನಾವಣೆ ನಡೆಸಬೇಕು ಎಂದು ಡಿಕೆಶಿ ಹೇಳಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಎರಡು ಮೂರು ತಿಂಗಳಿನಲ್ಲಿ ಜಿಲ್ಲಾ ಪಂಚಾಯತಿ‌ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಗಳನ್ನು ನಡೆಸಬೇಕಿದೆ.‌‌ ಅದಕ್ಕೂ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ ಎಂದರು.

ಪ್ರಿಯಾಂಕ್ ಖರ್ಗೆ ಅವರಿಗೂ ಇದರ ಬಗ್ಗೆ ತಿಳಿಸಿದ್ದು, ಮೀಸಲಾತಿ ವಿಚಾರವಾಗಿ ನ್ಯಾಯಾಲಯಗಳಲ್ಲಿ ಇರುವ ಕಂಟಕಗಳನ್ನು ಬಗೆಹರಿಸಿ ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ ಎಂದು ಹೇಳಿದರು.

ಬೂತ್‌ ಮಟ್ಟದಲ್ಲಿ ಕೆಲಸ ಮಾಡುವವರಿಗೆ ಅವಕಾಶ

“ಯಾರು ಬೂತ್ ಮಟ್ಟದಲ್ಲಿ ಕೆಲಸ ಮಾಡುತ್ತಾರೋ ಅವರಿಗೆ ಅವಕಾಶ. ಸಿದ್ದರಾಮಯ್ಯ, ಶಿವಕುಮಾರ್ ಹಿಂದೆ ತಿರುಗಿದರೆ ಅವಕಾಶವಿಲ್ಲ‌. ಕೆಲಸ ಮಾಡಿದವರಿಗೆ ಹೆಚ್ಚು ಆದ್ಯತೆ” ಎಂದು ಹೇಳಿದರು.

  • Related Posts

    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading
    ಮಳೆಗಾಲದ ಮುನ್ನೆಚ್ಚರಿಕೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪರಾಮರ್ಶೆ: ಪಶ್ಚಿಮ ವಲಯ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯದ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ. ಅವರು ಇಂದು ಪಾಲಿಕೆಯ ಆಯವ್ಯಯ ಕ್ರಿಯಾಯೋಜನೆ ಹಾಗೂ ಮುಂಬರುವ ಮಳೆಗಾಲದ ಸಿದ್ಧತೆಗಳ ಕುರಿತು ಎಲ್ಲಾ ಇಲಾಖಾ ಮುಖ್ಯಸ್ಥರೊಂದಿಗೆ ಮಹತ್ವದ ಪರಾಮರ್ಶನಾ ಸಭೆ ನಡೆಸಿದರು.Contentsಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗಳು ಮುಂದಿನ…

    Continue reading

    Leave a Reply

    Your email address will not be published. Required fields are marked *