ಆಂಧ್ರಪ್ರದೇಶದಲ್ಲಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ: ಓರ್ವ ಪ್ರಯಾಣಿಕ ದುರ್ಮರಣ.

ವಿಶಾಖಪಟ್ಟಣಂ(ಆಂಧ್ರ ಪ್ರದೇಶ): ವಿಶಾಖಪಟ್ಟಣಂನಿಂದ ಸುಮಾರು 66 ಕಿ.ಮೀ ದೂರದ ಯಲಮಂಚಿಲಿ ಎಂಬಲ್ಲಿ ಟಾಟಾನಗರ-ಎರ್ನಾಕುಲಂ ಜಂಕ್ಷನ್ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್‌ ರೈಲಿನ ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ವೃದ್ಧ ಪ್ರಯಾಣಿಕರೊಬ್ಬರು ಸುಟ್ಟು ಕರಕಲಾಗಿದ್ದಾರೆ. ಮೃತರನ್ನು ಚಂದ್ರಶೇಖರ್ ಸುಂದರಂ ಎಂದು ಗುರುತಿಸಲಾಗಿದೆ.

ಇಂದು ಬೆಳಿಗ್ಗೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈ ಕುರಿತು ಮಾಹಿತಿ ನೀಡಿದ್ದು, ಬೆಳಗಿನ ಜಾವ 12:45ರ ಸುಮಾರಿಗೆ ಅನಾಹುತ ಸಂಭವಿಸಿದ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು ಎಂದರು.

ಸೋಮವಾರ (ಡಿ.29) ಬೆಳಗ್ಗೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಯಲಮಂಚಿಲಿ ರೈಲು ನಿಲ್ದಾಣದ ಬಳಿ ರೈಲು ಸಂಖ್ಯೆ 18189 ಟಾಟಾನಗರ-ಎರ್ನಾಕುಲಂ ಜಂಕ್ಷನ್ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್‌ ರೈಲಿನ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿ ತಿಳಿಸಿದರು. ಎಕ್ಸ್‌ಪ್ರೆಸ್ ರೈಲಿನ ಎರಡು ಬೋಗಿಗಳು ಬೆಂಕಿಗೆ ಆಹುತಿಯಾಗಿವೆ. ರೈಲಿಗೆ ಬೆಂಕಿ ಹೊತ್ತಿಕೊಂಡಾಗ ಒಂದು ಬೋಗಿಯಲ್ಲಿ 82 ಪ್ರಯಾಣಿಕರು ಮತ್ತು ಇನ್ನೊಂದು ಬೋಗಿಯಲ್ಲಿ 76 ಪ್ರಯಾಣಿಕರು ಇದ್ದರು. ಬಿ1 ಬೋಗಿಯಲ್ಲಿ ಒಂದು ಮೃತದೇಹ ಪತ್ತೆಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬೆಂಕಿ ನಂದಿಸಿದ ನಂತರ ಹಾನಿಗೊಳಗಾದ ಎರಡು ಬೋಗಿಗಳನ್ನು ರೈಲಿನಿಂದ ಬೇರ್ಪಡಿಸಲಾಗಿದೆ. ನಂತರ ರೈಲು ಎರ್ನಾಕುಲಂ ಕಡೆಗೆ ತೆರಳಿದೆ. ಹಾನಿಗೊಳಗಾದ ಬೋಗಿಗಳಲ್ಲಿದ್ದ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತದೆ. ಬೆಂಕಿ ಅನಾಹುತಕ್ಕೆ ಕಾರಣ ಕಂಡುಹಿಡಿಯಲು ಎರಡು ವಿಧಿವಿಜ್ಞಾನ ತಂಡಗಳು ಕೆಲಸ ಮಾಡುತ್ತಿವೆ ಎಂದು ಅಧಿಕಾರಿ ತಿಳಿಸಿದರು.

ಎಲಮಂಚಿಲಿ ಬಳಿ ಎರ್ನಾಕುಲಂ ಎಕ್ಸ್‌ಪ್ರೆಸ್‌ನ M2 ಮತ್ತು B1 ಬೋಗಿಗಳಲ್ಲಿ ಅವಘಡ ಸಂಭವಿಸಿದೆ. ಪೊಲೀಸರಿಗೆ ಮಧ್ಯರಾತ್ರಿ 12:40ಕ್ಕೆ ಮಾಹಿತಿ ಸಿಕ್ಕಿತು. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿದ್ದರು. ಇದರಿಂದಾಗಿ ದೊಡ್ಡ ಅನಾಹುತ ತಪ್ಪಿದೆ. ಬೆಂಕಿ ನಿಯಂತ್ರಿಸಲು ಎರಡು ಗಂಟೆ ಬೇಕಾಯಿತು. ಅಪಘಾತದ ಕಾರಣಗಳು ತನಿಖೆಯಿಂದ ಗೊತ್ತಾಗಬೇಕಿದೆ. ರೈಲಿನ B1 ಬೋಗಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಇತರ ಪ್ರಯಾಣಿಕರ ಸಂಬಂಧಿಕರು ಭಯಪಡುವ ಅಗತ್ಯವಿಲ್ಲ. ಎರಡು ಬೋಗಿಗಳಿಂದ ಪ್ರಯಾಣಿಕರಿಗಾಗಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಅನಕಪಲ್ಲಿ ಎಸ್ಪಿ ತುಹಿನ್ ಸಿನ್ಹಾ ತಿಳಿಸಿದ್ದಾರೆ.

ಕೋಚ್ ಸಂಖ್ಯೆ ಬಿ-1 ಮತ್ತು ಎಂ-2 ಬೆಂಕಿಯಿಂದ ತೀವ್ರವಾಗಿ ಹಾನಿಗೊಳಗಾಗಿವೆ ಎಂದು ದಕ್ಷಿಣ ಮಧ್ಯ ರೈಲ್ವೆ ತಿಳಿಸಿದೆ.

  • Related Posts

    ನವದೆಹಲಿಯಲ್ಲಿ ನಿತಿನ್ ಗಡ್ಕರಿ ಭೇಟಿ: ಧಾರವಾಡ ಕ್ಷೇತ್ರದ ರಸ್ತೆ ಅಭಿವೃದ್ಧಿ ಕುರಿತು ಪ್ರಲ್ಹಾದ್ ಜೋಶಿ ಚರ್ಚೆ

    ನವದೆಹಲಿ: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಪ್ರಮುಖ ಮಾತುಕತೆ ನಡೆಸಿದರು.…

    Continue reading
    ರಾಜ್ಯ ಪಿಯುಸಿ ಇತಿಹಾಸದಲ್ಲೇ ಹೊಸ ದಾಖಲೆ: 86.48% ಅಭೂತಪೂರ್ವ ಫಲಿತಾಂಶ

    ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟಿಸಿರುವ ದ್ವಿತೀಯ ಪಿಯುಸಿ ಫಲಿತಾಂಶವು ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಈ ಬಾರಿ ದಾಖಲೆಯ 86.48% ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಕರ್ನಾಟಕದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಅಭೂತಪೂರ್ವ ಯಶಸ್ಸು…

    Continue reading

    Leave a Reply

    Your email address will not be published. Required fields are marked *