ಬೆಂಗಳೂರಿನ ನ್ಯೂ ಇಯರ್ ಪಾರ್ಟಿಗೆ ಬಿಎಂಟಿಸಿ ಸಾಥ್! ತಡರಾತ್ರಿ 2 ಗಂಟೆಯವರೆಗೆ ಓಡಲಿವೆ ವಿಶೇಷ ಬಸ್ಸುಗಳು

ಬೆಂಗಳೂರು: ಈಗಾಗಲೇ ಹೊಸ ವರ್ಷದ ಸಂಭ್ರಮಾಚರಣೆಗೆ ಸಕಲ ಸಿದ್ಧತೆಯೂ ನೆರವೇರುತ್ತಿದೆ. ಎಂಜಿ ರೋಡ್‌, ಬ್ರಿಗೇಡ್‌ ರಸ್ತೆ, ಕೋರಮಂಗಲ ಸೇರಿದಂತೆ ನಾನಾ ಕಡೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಇನ್ನು ಮಧ್ಯ ರಾತ್ರಿಯವರೆಗೂ ಸೆಲಬ್ರೇಷನ್‌ ಇರುವ ಕಾರಣ, ಪ್ರಯಾಣಿಕರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ, ಅನುಕೂಲಕರವಾಗಿರಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ತಡರಾತ್ರಿ 2ಗಂಟೆಯವರೆಗೂ ಬಸ್‌ ಸೇವೆ ಒದಗಿಸಲು ನಿರ್ಧರಿಸಿದೆ.

ಹೊಸ ವರ್ಷ ಸಂಭ್ರಮದಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಡಿಸೆಂಬರ್ 31ರಂದು ನಗರದ ವಿವಿಧೆಡೆ ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುವ ಜನರಿಗಾಗಿ ತಡರಾತ್ರಿಯವರೆಗೆ ವಿಶೇಷ ಬಸ್ ಸೌಲಭ್ಯವನ್ನು ಕಲ್ಪಿಸಿದೆ.

ಹೊಸವರ್ಷದ ಹಬ್ಬದ ದಿನದಂದು ಒಟ್ಟು 70 ಬಸ್‌ಗಳು ಸಂಚರಿಸಲಿದೆ ಎಂದು ಬಿಎಂಟಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೆ, ಜನದಟ್ಟಣೆ ಇರುವ ಪ್ರಮುಖ ಬಸ್ ನಿಲ್ದಾಣ/ಜಂಕ್ಷನ್ ಗಳಾದ ಕೆಂಪೇಗೌಡ ಬಸ್ ನಿಲ್ದಾಣ, ಕೆಆರ್‌ ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಬನಶಂಕರಿ, ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ಗಳಿಂದ ಪ್ರಯಾಣಿಕರ ದಟ್ಟಣೆ/ಬೇಡಿಕೆಗನುಗುಣವಾಗಿ ಸಾರಿಗೆ ಸೌಲಭ್ಯವನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.

  • Related Posts

    ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಎಚ್ಚರವಹಿಸಿ: ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ

    ಕಲಬುರಗಿ: ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಮುಂಬರುವ ಎರಡು ತಿಂಗಳುಗಳಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.Contentsನೀರಿನ ಸರಬರಾಜಿಗೆ ಆದ್ಯತೆಜೆಜೆಎಂ…

    Continue reading
    ಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

    ಮೈಸೂರು: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಸನ್ನಿಧಿಗೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.Contentsನೀರಿನ ಸರಬರಾಜಿಗೆ ಆದ್ಯತೆಜೆಜೆಎಂ ಕಾಮಗಾರಿ ಹಾಗೂ ವಿದ್ಯುತ್ ಸಂಪರ್ಕಸ್ವಚ್ಛತೆ…

    Continue reading

    Leave a Reply

    Your email address will not be published. Required fields are marked *