ಹೈಡ್ರೋಜನ್ ಸಿಲಿಂಡರ್ ಸ್ಫೋಟದ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸಮೀಪದ 50ಕ್ಕೂ ಹೆಚ್ಚು ಪೆಟ್ಟಿಗೆ ಅಂಗಡಿಗಳ ತೆರವು

ಮೈಸೂರು: ಹೈಡ್ರೋಜನ್‌ ಸಿಲಿಂಡರ್‌ ಸ್ಫೋಟದ ಬಳಿಕ ಎಚ್ಚೆತ್ತಿರುವ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಮೈಸೂರು ಅರಮನೆಯ ವರಹ ಗೇಟ್‌ ಬಳಿ ಅನಧಿಕೃತವಾಗಿ ತಲೆ ಎತ್ತಿದ್ದ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ. ಮತ್ತೆ ಆ ಅಂಗಡಿಗಳು ತಲೆ ಎತ್ತದಂತೆ ನಿಗಾವಹಿಸಲು ಪೊಲೀಸ್‌ ಕಮಾಂಡೋ ಪಡೆಯನ್ನು ನಿಯೋಜಿಸಲಾಗಿದೆ.

ಅರಮನೆಯ ಜಯಮಾರ್ತಾಂಡ ದ್ವಾರದ ಮುಂಭಾಗ ಬಿ.ಎನ್‌.ರಸ್ತೆಯಲ್ಲಿ ಡಿ. 25ರಂದು ಹೈಡ್ರೋಜನ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಅರಮನೆ ಸುತ್ತಮುತ್ತ ಸೇರಿದಂತೆ ಮೈಸೂರಿನ ಪ್ರಮುಖ ರಸ್ತೆ ಹಾಗೂ ಸ್ಥಳಗಳಲ್ಲಿರುವ ಅನಧಿಕೃತ ಬೀದಿ ಬದಿ ವ್ಯಾಪಾರಿ ಹಾಗೂ ಅಪಾಯಕಾರಿ ಸ್ಥಿತಿಯಲ್ಲಿರುವ ಅಂಗಡಿಗಳನ್ನು ತೆರವುಗೊಳಿಸಲು ಸಾರ್ವಜನಿಕ ವಲಯದಿಂದ ಒತ್ತಾಯ ಕೇಳಿ ಬಂದಿತ್ತು. ಹೊಸ ವರ್ಷದ ಸಂಭ್ರಮಾಚರಣೆಗಾಗಿ ಮೈಸೂರು ಅರಮನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹಾಗೂ ಸ್ಥಳೀಯರು ಆಗಮಿಸುವುದರಿಂದ ಸುರಕ್ಷತೆಗಾಗಿ ಅರಮನೆಯ ವರಹ (ಗನ್‌ಹೌಸ್‌) ಗೇಟ್‌ ಬಳಿ ಎರಡೂ ಬದಿಯಲ್ಲಿದ್ದ 50ಕ್ಕೂ ಹೆಚ್ಚು ಅಂಗಡಿಗಳನ್ನು ಎತ್ತಂಗಡಿ ಮಾಡಿಸಲಾಗಿದೆ.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *