ಸರ್ಕಾರಿ ಜಾಗದಲ್ಲಿನ ಅನಧಿಕೃತ ನಿರ್ಮಾಣಗಳ ತೆರವು ಕಾರ್ಯಾಚರಣೆ ಅಧಿಕಾರಿಗಳೊಂದಿಗೆ ಪರಿಶೀಲನೆ

ಕೋಗಿಲು ಗ್ರಾಮದ ಬಳಿಯ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸೇರಿದ ಸರ್ಕಾರಿ ಜಾಗದಲ್ಲಿನ ಅನಧಿಕೃತ ನಿರ್ಮಾಣಗಳ ತೆರವು ಕಾರ್ಯಾಚರಣೆಯ ಪ್ರದೇಶವನ್ನು ಇಂದು ಅಧಿಕಾರಿಗಳೊಂದಿಗೆ ಪರಿಶೀಲಿಸಿ, ನಂತರ ಮಾಧ್ಯಮದವರೊಂದಿಗೆ  ಡಿಕೆ ಶಿವಕುಮಾರ್ ಮಾತನಾಡಿದರು.

ಈ ಜಾಗವನ್ನು ಸರ್ಕಾರವು ಸುಮಾರು 9-10 ವರ್ಷಗಳ ಹಿಂದೆಯೇ ಘನತ್ಯಾಜ್ಯ ವಿಲೇವಾರಿ ಘಟಕಕ್ಕಾಗಿ ಮಂಜೂರು ಮಾಡಿತ್ತು. ಆದರೆ, ಕೆಲವರು ಈ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಿ ಗುಡಿಸಲುಗಳನ್ನು ನಿರ್ಮಿಸಿದ್ದರು, ಹಲವಾರು ಬಾರಿ ಸಹ ನೋಟಿಸ್‌ ನೀಡಲಾಗಿತ್ತು. ನಂತರ ನಮ್ಮ ಅಧಿಕಾರಿಗಳು ತೆರವು ಕಾರ್ಯಾಚರಣೆ ಕೈಗೊಂಡಿದ್ದರು. ಈ ವಿಷಯ ಈಗಾಗಲೇ ಸ್ಥಳೀಯ ಶಾಸಕರ ಗಮನದಲ್ಲಿದ್ದು, ಅವರು ಈ ಬಗ್ಗೆ ಮಾತನಾಡಿದ್ದಾರೆ.

ದುರದೃಷ್ಟವಶಾತ್, ಈ ವಿಚಾರದಲ್ಲಿ ಕೆಲವರು ಅನಗತ್ಯವಾಗಿ ರಾಜಕೀಯ ಬೆರೆಸುತ್ತಿದ್ದಾರೆ. ಕೇರಳದ ಮುಖ್ಯಮಂತ್ರಿಗಳು ಸೇರಿದಂತೆ ಕಮ್ಯುನಿಸ್ಟ್ ಪಕ್ಷದ ನಾಯಕರು ಮುಂಬರುವ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಅಲ್ಪಸಂಖ್ಯಾತರ ಓಲೈಕೆಗಾಗಿ ಸುಳ್ಳು ಸಹಾನುಭೂತಿ ತೋರುತ್ತಿದ್ದಾರೆ.

ಇನ್ನು ಕೆಲವು ವ್ಯಕ್ತಿಗಳು ಬಡವರಿಂದ ಹಣ ಪಡೆದು ಸರ್ಕಾರಿ ಜಾಗವನ್ನು ಅಕ್ರಮವಾಗಿ ಪರಭಾರೆ ಮಾಡಿದ್ದಾರೆ. ಅರ್ಹ ಫಲಾನುಭವಿಗಳಿಗೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳು ಈಗಾಗಲೇ ಸಭೆ ಕರೆದಿದ್ದು, ಅಲ್ಲಿ ಈ ಬಗ್ಗೆ ವಿಸ್ತಾರವಾಗಿ ಚರ್ಚಿಸಲಾಗುವುದು. ಅರ್ಹ ಬಡವರಿಗೆ ಯಾವುದೇ ಅನ್ಯಾಯವಾಗದಂತೆ ನಾವು ಕ್ರಮ ಕೈಗೊಳ್ಳುತ್ತೇವೆ. ಹಾಗೆಯೇ, ಸರ್ಕಾರಿ ಜಾಗವನ್ನು ಅಕ್ರಮವಾಗಿ ಮಾರಾಟ ಮಾಡಿದ ಅಥವಾ ನೀಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದು ನಿಶ್ಚಿತ ಎಂದ ಡಿ ಸಿಎಂ ಡಿಕೆ ಶಿವಕುಮಾರ್.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *