ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವರಾದ ಶ್ರೀ ವಿ ಸೋಮಣ್ಣ ಅವರೊಂದಿಗೆ ರಾಮನಗರ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ, ಅಮೃತ್ ಭಾರತ್ ಯೋಜನೆಯಡಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ಶ್ರೀ ಇಕ್ಬಾಲ್ ಹುಸೇನ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷರಾದ ಶ್ರೀ ಶಿವಲಿಂಗಯ್ಯ, ಬಿಜೆಪಿ ಮುಖಂಡರಾದ ಶ್ರೀ ಗೌತಮ್ ಗೌಡ ಸೇರಿದಂತೆ ಹಿರಿಯ ರೈಲ್ವೇ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಯಾಣಿಕರ ಅನುಕೂಲತೆ ಹೆಚ್ಚಿಸುವ ಹಾಗೂ ನಿಲ್ದಾಣದ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಸಮಗ್ರವಾಗಿ ಅವಲೋಕಿಸಲಾಯಿತು.







