ಹೊಸ ವರ್ಷಾಚರಣೆಯ ಹಿನ್ನೆಲೆ ಮುಂಜಾಗ್ರತಾ ಕ್ರಮಕ್ಕೆ ಸರ್ಕಾರ ಒತ್ತು 

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರು ನೀಡಿದ ಸೂಚನೆಗಳು;

• ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು.

• ಹೊಸ ವರ್ಷಾಚರಣೆ ಬಳಿಕ ಜನರು ಸುಲಭವಾಗಿ ಜನರು ತಮ್ಮ ಮನೆಗಳಿಗೆ ಹಿಂತಿರುಗಲು ಅನುಕೂಲವಾಗುವಂತೆ ಮಧ್ಯರಾತ್ರಿ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳ ವ್ಯವಸ್ಥೆಯನ್ನು ಮಾಡಬೇಕು.

• ಮಹಾತ್ಮ ಗಾಂಧಿ ರಸ್ತೆ, ಬ್ರಿಗೇಡ್‌ ರೋಡ್‌, ಚರ್ಚ್‌ ಸ್ಟ್ರೀಟ್‌, ಕೋರಮಂಗಲ, ಇಂದಿರಾನಗರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜನದಟ್ಟಣೆಯಾಗಿ ಯಾವುದೇ ಅನಾಹುತವಾಗದಂತೆ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕು.

• ಭದ್ರತೆಗಾಗಿ 20 ಸಾವಿರ ಪೊಲೀಸರನ್ನು ಬೆಂಗಳೂರು ನಗರದಲ್ಲಿ ನಿಯೋಜಿಸಲಾಗುತ್ತಿದ್ದು, ಬೇರೆ ಜಿಲ್ಲೆಗಳಿಂದ 1,200 ಪೊಲೀಸರನ್ನು ಈ ಬಾರಿ ನಿಯೋಜಿಸುತ್ತಿದ್ದೇವೆ. ಮಹಿಳಾ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಬೇಕು. ಚೆನ್ನಮ್ಮ ಪಡೆಗಳನ್ನು ಸಕ್ರಿಯವಾಗಿ ನಿಯೋಜಿಸಬೇಕು.

• ನಗರದಲ್ಲಿ ಹೊಸ ವರ್ಷಾಚರಣೆ ಸುಗಮವಾಗಿ ನಡೆಯಲು ಸಾಧ್ಯವಾಗುವಂತೆ 4 ಕಂಟ್ರೋಲ್‌ ರೂಂ, 78 ಕಾವಲು ಗೋಪುರ, 164 ಮಹಿಳಾ ಸಹಾಯ ಡೆಸ್ಕ್‌, 55 ಆ್ಯಂಬುಲೆನ್ಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಕಳೆದ ಮೂರು ದಿನಗಳಲ್ಲಿ 3,500 ಡ್ರಿಂಕ್‌ ಆಂಡ್‌ ಡ್ರೈವ್‌ ಪ್ರಕರಣಗಳನ್ನು ದಾಖಲಿಸಲಾಗಿದೆ.

• ನಗರದಲ್ಲಿರುವ 50 ಫ್ಲೈ ಓವರ್ಗಳಲ್ಲಿ ಹೊಸ ವರ್ಷಾಚರಣೆ ರಾತ್ರಿ ದ್ವಿಚಕ್ರ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗುವುದು.

• ಕಿಡಿಗೇಡಿಗಳ ಮೇಲೆ ನಿರಂತರ ನಿಗಾ ಇರಿಸಬೇಕು. ವ್ಹೀಲಿಂಗ್‌ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಮಾದಕ ದ್ರವ್ಯ ಚಟುವಟಿಕೆಗಳ ನಿಯಂತ್ರಣಕ್ಕೆ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕು. • ಹೊಸ ವರ್ಷವನ್ನು ಸಂಭ್ರಮದ ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬರಮಾಡಿಕೊಳ್ಳುವ ವ್ಯವಸ್ಥೆಯನ್ನು ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *