ಪ್ರಗತಿ ಪರಿಶೀಲನಾ ಸಭೆಯಲ್ಲಿ  ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ ಸೂಚನೆಗಳು:

2023-24 ರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಲಾ ರೂ.25 ಕೋಟಿಯಂತೆ ಒಟ್ಟು ರೂ. 3,510 ಕೋಟಿ ಬಿಡುಗಡೆಗೆ ಅನುಮೋದನೆ ನೀಡಲಾಗಿತ್ತು.ಇದರಲ್ಲಿ ಈಗಾಗಲೇ ರೂ. 2,040 ಕೋಟಿ ಮೊತ್ತದಲ್ಲಿ ಶೇ.58ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ರೂ. 920 ಕೋಟಿ ವೆಚ್ಚ ಭರಿಸಲಾಗಿದೆ.

ಇನ್ನೂ ರೂ. 1,205 ಕೋಟಿ ಬಿಡುಗಡೆ ಮಾಡಲು ಬೆಳಗಾವಿ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಆದೇಶ ನೀಡಲಾಗಿದೆ. ಅನುಷ್ಠಾನ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು.

– 2024-25ರಲ್ಲಿ ಮಳೆ ಹಾನಿಯಿಂದ ಉಂಟಾದ ರಸ್ತೆ ದುರಸ್ತಿಗಾಗಿ ರೂ.1,890 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿದ್ದು, ರೂ.250 ಕೋಟಿ ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ ರೂ. 8,666.50 ಕೋಟಿ ಅನುಮೋದನೆ ನೀಡಲಾಗಿದ್ದು, ಈಗಾಗಲೇ ರೂ.1 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ.

ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ, ಅನುದಾನ ಪಾವತಿಸುವುದು ಆಯಾ ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದೆ.

ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಾ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಮಾಡಬೇಕು. 2024-25 ನೇ ಸಾಲಿನಲ್ಲಿ 205 ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ ಒಟ್ಟು ರೂ. 8,666.50 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ.

ಇನ್ನು ಬಾಕಿಯಿರುವ 19 ಕ್ಷೇತ್ರಗಳಿಂದ ಪ್ರಸ್ತಾವನೆಗಳನ್ನು ಪಡೆದ ಬಳಿಕ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಟೆಂಡರ್‌ ಪ್ರಕ್ರಿಯೆಗಳನ್ನು ಜನವರಿ 10ರೊಳಗಾಗಿ ಪೂರ್ಣಗೊಳಿಸಬೇಕು. ರೈಲ್ವೇ ಕಾಮಗಾರಿಗಳಿಗೆ ಬಾಕಿಯಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು.

ಕುಡಚಿ-ಬಾಗಲಕೋಟೆ, ತುಮಕೂರು-ದಾವಣಗೆರೆ, ಬೇಲೂರು-ಹಾಸನ, ಶಿವಮೊಗ್ಗ-ರಾಣೆಬೆನ್ನೂರು, ಧಾರವಾಡ-ಬೆಳಗಾವಿ ರೈಲ್ವೇ ಮಾರ್ಗಗಳ ನಿರ್ಮಾಣ ಕಾಮಗಾರಿ ನಿಗದಿತ ಅವಧಿಯೊಳಗಾಗಿ ಕೈಗೊಳ್ಳಲು ಎಲ್ಲಾ ಅಗತ್ಯ ಪ್ರಕ್ರಿಯೆಗಳನ್ನು ತ್ವರಿತಗೊಳಿಸಬೇಕು.

  • Related Posts

    NH-44 ಕಾಮಗಾರಿಗಳ ಶೀಘ್ರ ಪೂರ್ಣಕ್ಕೆ ಸಂಸದ ಡಾ. ಸಿ.ಎನ್. ಮಂಜುನಾಥ್ ಸೂಚನೆ: ಹೈವೇ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ

    ಬೆಂಗಳೂರು: ಬೆಂಗಳೂರು–ಚಂದಾಪುರ–ಅತ್ತಿಬೆಲೆ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಸಂಚಾರ ದಟ್ಟಣೆ ನಿವಾರಣೆ ಹಾಗೂ ಸಾರ್ವಜನಿಕರ ಸುರಕ್ಷತೆಗಾಗಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸಂಸದರಾದ ಡಾ. ಸಿ.ಎನ್. ಮಂಜುನಾಥ್ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.Contentsಪರಿಶೀಲನೆ ನಡೆಸಿದ ಪ್ರಮುಖ ಕಾಮಗಾರಿಗಳು:ಸಂಸದರ ಹೇಳಿಕೆ: ರಾಷ್ಟ್ರೀಯ ಹೆದ್ದಾರಿ…

    Continue reading
    ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ: ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ (CEO) ಕಟ್ಟುನಿಟ್ಟಿನ…

    Continue reading

    Leave a Reply

    Your email address will not be published. Required fields are marked *