ಕೋಗಿಲು ಬಡಾವಣೆ ಅಕ್ರಮ ನಿವಾಸಿಗಳ ತನಿಖೆ NIAಗೆ ವಹಿಸಿ – ಆರ್  ಅಶೋಕ್

ಕೋಗಿಲು ಫಕೀರ್‌ ಬಡಾವಣೆಗೆ ಆರ್ ಅಶೋಕ, ಚಲವಾದಿ ನಾರಾಯಣಸ್ವಾಮಿ, ಅಶ್ವತ್ಥ ನಾರಾಯಣ್  ಭೇಟಿ; ಅಕ್ರಮ ನಿವಾಸಿಗಳ ಪೌರತ್ವ ಪರಿಶೀಲನೆಗೆ ಒತ್ತಾಯ

ಕೋಗಿಲು ಕ್ರಾಸ್‌ನ ಫಕೀರ್‌ ಬಡಾವಣೆ ಕ್ರಮೇಣ ಸ್ಲೀಪರ್‌ ಸೆಲ್‌ಗಳ ಕೇಂದ್ರವಾಗುವ ಅಪಾಯವಿದೆ. ಆದ್ದರಿಂದ ಅಕ್ರಮ ನಿವಾಸಿಗಳ ಪೌರತ್ವವನ್ನು ಸರ್ಕಾರ ಪರಿಶೀಲಿಸಬೇಕು. ಹೀಗಾಗಿ ಇದನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.

ಕೋಗಿಲು ಕ್ರಾಸ್‌ನಲ್ಲಿ ಒತ್ತುವರಿ ತೆರವು ಮಾಡಿದ ವಿವಾದಿತ ಸ್ಥಳಕ್ಕೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಅವರು ಇಂದು ಬಿಜೆಪಿ ಮುಖಂಡರೊಂದಿಗೆ ಭೇಟಿ ನೀಡಿದರು. ಸ್ಥಳದಲ್ಲೇ ಇದ್ದ ನಿವಾಸಿಗಳ ಜೊತೆ ಮಾತನಾಡಿದ ಅವರು, ಗುರುತಿನ ಚೀಟಿ ಹಾಗೂ ಇತರೆ ದಾಖಲೆಗಳನ್ನು ಕೇಳಿ ಪರಿಶೀಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಮನೆ ಕಟ್ಟಿಕೊಡುವುದೇ ಮಾನದಂಡವಾದರೆ ಇನ್ನು ಮುಂದೆ ಸರ್ಕಾರ ಯಾವ ಮುಖ ಇಟ್ಟುಕೊಂಡು ಒತ್ತುವರಿ ತೆರವು ಮಾಡಲಿದೆ? ಬೆಂಗಳೂರಿನಲ್ಲಿ 40 ಕಡೆ 150-200 ಎಕರೆ ಒತ್ತುವರಿ ತೆರವು ಮಾಡಲಾಗಿದೆ. ಇವರೆಲ್ಲರಿಗೂ ಮನೆ ನಿರ್ಮಿಸಿಕೊಡಲು ಸಾಧ್ಯವೇ?ಎಂದು ಪ್ರಶ್ನಿಸಿದ್ದಾರೆ.

  • Related Posts

    ಮಾರ್ಟಳ್ಳಿ: ಅರಣ್ಯ ಅಂಚಿನ ಗ್ರಾಮದಲ್ಲಿ ನೀರಿನ ಹಾಹಾಕಾರ; ಟ್ಯಾಂಕರ್ ನೀರಿಗಾಗಿ ಶಾಲಾ ಮಕ್ಕಳ ಹಕ್ಕೊತ್ತಾಯ

    ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಟು ಕೊವಿಲ್ ಭಾಗದ ನಿವಾಸಿಗಳು ಭೀಕರ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದು, ಜನ ಮತ್ತು ಜಾನುವಾರುಗಳು ಬಿಸಿಲಿನ ಬೇಗೆಗೆ ತತ್ತರಿಸಿ ಹೋಗಿವೆ. ಅರಣ್ಯ ಸಮೀಪದ ಈ ಗ್ರಾಮದಲ್ಲಿ ನೀರಿನ…

    Continue reading
    NH-44 ಕಾಮಗಾರಿಗಳ ಶೀಘ್ರ ಪೂರ್ಣಕ್ಕೆ ಸಂಸದ ಡಾ. ಸಿ.ಎನ್. ಮಂಜುನಾಥ್ ಸೂಚನೆ: ಹೈವೇ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ

    ಬೆಂಗಳೂರು: ಬೆಂಗಳೂರು–ಚಂದಾಪುರ–ಅತ್ತಿಬೆಲೆ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಸಂಚಾರ ದಟ್ಟಣೆ ನಿವಾರಣೆ ಹಾಗೂ ಸಾರ್ವಜನಿಕರ ಸುರಕ್ಷತೆಗಾಗಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸಂಸದರಾದ ಡಾ. ಸಿ.ಎನ್. ಮಂಜುನಾಥ್ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.Contentsಪರಿಶೀಲನೆ ನಡೆಸಿದ ಪ್ರಮುಖ ಕಾಮಗಾರಿಗಳು:ಸಂಸದರ ಹೇಳಿಕೆ: ರಾಷ್ಟ್ರೀಯ ಹೆದ್ದಾರಿ…

    Continue reading

    Leave a Reply

    Your email address will not be published. Required fields are marked *