ಸಾರಿಗೆ ನೌಕರರ ದಶಕದ ಕನಸು ನನಸು: ಜನವರಿ 1ರಿಂದ ಅಂತರ್‌ನಿಗಮ ವರ್ಗಾವಣೆ ಪ್ರಕ್ರಿಯೆ ಆರಂಭ!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಅಂತರ ನಿಗಮ ವರ್ಗಾವಣೆಗೆ ಸಂಬಂಧಿಸಿದಂತೆ, ಈಗಾಗಲೇ ಅರ್ಹ ನೌಕರರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ವರ್ಗಾವಣೆ ಬಯಸುವವರಿಗೆ ಹೊಸ ವರ್ಷ 2026ಕ್ಕೆ ಗುಡ್ ನ್ಯೂಸ್ ನೀಡಿದ್ದು, ಜನವರಿ 1ರಿಂದಲೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯ ಸರ್ಕಾರದ ಟಿಡಿ 45 ಟಿಸಿಎಸ್ 2020 ಅಡಿ 2021 ಮಾರ್ಚ್ 23 ಮತ್ತು 2025ರ ಜನವರಿಯಂದು 18ರಂದು ಹೊರಡಿಸಿದ ಆದೇಶದ ಅನ್ವಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMT), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ನಿಗಮಗಳ ದರ್ಜೆ 3 ಮೇಲ್ವಿಚಾರಕರು ಹಾಗೂ ದರ್ಜೆ 4ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಸರ್ಕಾರ ಸಾರಿಗೆ ನೌಕರರ ವರ್ಗಾವಣೆ ಎರಡು ಆದೇಶಗಳ ಮೂಲಕ ನಿರ್ದೇಶನಗಳನ್ನು ನೀಡಿತ್ತು. ಅದರನ್ವಯ 2026ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ಹೊಸ ವರ್ಷದ ಮೊದಲ ದಿನ ಜನವರಿ 01ರಿಂದಲೇ ಆರಂಭವಾಗುತ್ತಿದೆ. ಗುರುವಾರ ಬೆಳಗ್ಗೆ 11:00 ಗಂಟೆಯಿಂದ ವರ್ಗಾವಣೆ ಪ್ರಕ್ರಿಯೆ ಪ್ರಾರಂಭವಾಗಿ, ಜನವರಿ 31ರ ಸಂಜೆ 5:30 ರವರೆಗೆ ನಡೆಯಲಿದೆ. ಅರ್ಹ ನೌಕರರು ಆನ್-ಲೈನ್ ಮೂಲಕ (ಅಧಿಕೃತ ಜಾಲತಾಣ www.ksrtc.org/transfer) ಸಾಮಾನ್ಯ ವರ್ಗಾವಣೆ, ಪತಿ-ಪತ್ನಿ/ ಶೇಕಡಾ 40 ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು/ ತೀವ್ರತರಹದ ಅನಾರೋಗ್ಯ (ಹೆಚ್.ಐ.ವಿ, ಹೃದಯರೋಗ, ಕ್ಯಾನ್ಸರ್, ಸ್ಟೈನಲ್‌ ಕಾರ್ಡ್, ಕಿಡ್ನಿ ವೈಪಲ್ಯ ಹಾಗೂ ಮೆದಳು ಸಂಬಂಧಿಸಿದ ಖಾಯಿಲೆಗಳು) ಹೊಂದಿರುವ ನೌಕರರು ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.



  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *