ಹೊಸ ದ್ವೇಷ ಭಾಷಣ ನಿಯಂತ್ರಣ ಮಸೂದೆಗೆ (2025) ಸಮ್ಮತಿ ಸೂಚಿಸದಂತೆ ಸರ್ಕಾರವನ್ನು ಒತ್ತಾಯಿಸಿದ ಜೆಡಿಎಸ್ ನಿಯೋಗ

ಜೆಡಿಎಸ್ ಪಕ್ಷದ ನಿಯೋಗದೊಂದಿಗೆ ಲೋಕಭವನಕ್ಕೆ ತೆರಳಿ ಗೌರವಾನ್ವಿತ ರಾಜ್ಯಪಾಲರಿಗೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆಗಟ್ಟುವಿಕೆ) ಮಸೂದೆ, 2025ಕ್ಕೆ ಒಪ್ಪಿಗೆ ನೀಡದಂತೆ ಮನವಿ ಸಲ್ಲಿಸಲಾಯಿತು.

ಈ ಮಸೂದೆಯನ್ನು ರಾಜ್ಯ ಸರ್ಕಾರವು ತರಲು ಮುಂದಾದಾಗ, ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಇದನ್ನು ವಿರೋಧಿಸಿತ್ತು

ಅಧಿಕಾರ ದುರುಪಯೋಗದ ಭೀತಿ: ಈ ಕಾಯ್ದೆಯು ಜಾರಿಗೆ ಬಂದಲ್ಲಿ, ಆಡಳಿತಾರೂಢ ಸರ್ಕಾರವು ವಿರೋಧ ಪಕ್ಷದ ನಾಯಕರನ್ನು ಮತ್ತು ಧ್ವನಿ ಎತ್ತುವವರನ್ನು ಗುರಿಯಾಗಿಸಲು ಇದನ್ನು ಬಳಸಿಕೊಳ್ಳುವ ಸಾಧ್ಯತೆಯಿದೆ ಎಂದು ಜೆಡಿಎಸ್ ವಾದಿಸುತ್ತಿದೆ.

ಸಂವಿಧಾನದ ಆಶಯ: ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಇದು ಗಂಭೀರ ಪರಿಣಾಮ ಬೀರಬಹುದು ಎಂದು ಜೆಡಿಎಸ್ ನಾಯಕರು ರಾಜ್ಯಪಾಲರಿಗೆ ಮನವಿ ಸಲ್ಲಿಸುತ್ತಿದ್ದಾರೆ.

ಈ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು ರವರು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶ್ರೀ ಕೃಷ್ಣಾರೆಡ್ಡಿ ರವರು, ಜೆಡಿಎಸ್ ಹಾಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಸದಸ್ಯರುಗಳು ಉಪಸ್ಥಿತರಿದ್ದರು.

  • Related Posts

    ನೇಮಮ್‌ನಲ್ಲಿ ಎನ್‌ಡಿಎ ಪರ ಅಲೆ: ರಾಜೀವ್ ಚಂದ್ರಶೇಖರ್ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಶೋಭಾ ಕರಂದ್ಲಾಜೆ

    ತಿರುವನಂತಪುರಂ (ಕೇರಳ): ಕೇರಳದ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ನೇಮಮ್‌ನಲ್ಲಿ ಎನ್‌ಡಿಎ ಪರವಾಗಿ ಜನಬೆಂಬಲದ ಅಲೆ ಎದ್ದಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.Contentsರಾಜೀವ್ ಚಂದ್ರಶೇಖರ್ ಪರ ಭರ್ಜರಿ ಪ್ರಚಾರ:ಡಬಲ್ ಎಂಜಿನ್ ಸರ್ಕಾರದ ಆಶಯ:ಮತದಾರರ…

    Continue reading
    ಅನಂತ ಪದ್ಮನಾಭಸ್ವಾಮಿ ‘ಆರಟ್ಟು’ ಮಹೋತ್ಸವದಲ್ಲಿ ಶೋಭಾ ಕರಂದ್ಲಾಜೆ ಭಾಗಿ: ದೈವಿಕ ಕ್ಷಣಕ್ಕೆ ಸಾಕ್ಷಿಯಾದ ಕೇಂದ್ರ ಸಚಿವರು

    ತಿರುವನಂತಪುರ: ಕೇರಳದ ತಿರುವನಂತಪುರದಲ್ಲಿ ನಡೆಯುವ ವಿಶ್ವಪ್ರಸಿದ್ಧ ಶ್ರೀ ಅನಂತ ಪದ್ಮನಾಭಸ್ವಾಮಿ ದೇವಸ್ಥಾನದ ಐತಿಹಾಸಿಕ ‘ಆರಟ್ಟು’ ಮೆರವಣಿಗೆಯಲ್ಲಿ ಕೇಂದ್ರ ಸಚಿವರಾದ ಶ್ರೀಮತಿ ಶೋಭಾ ಕರಂದ್ಲಾಜೆ ಅವರು ಇಂದು ಭಕ್ತಿಪೂರ್ವಕವಾಗಿ ಪಾಲ್ಗೊಂಡರು.Contentsರಾಜೀವ್ ಚಂದ್ರಶೇಖರ್ ಪರ ಭರ್ಜರಿ ಪ್ರಚಾರ:ಡಬಲ್ ಎಂಜಿನ್ ಸರ್ಕಾರದ ಆಶಯ:ಮತದಾರರ ಸ್ಪಂದನೆ: ವರ್ಷಕ್ಕೆ…

    Continue reading

    Leave a Reply

    Your email address will not be published. Required fields are marked *