ಕೊಡಗು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ಅವರು ಗುರುವಾರ ಸಂಜೆ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ನಿರ್ಗಮಿತ ಅಧಿಕಾರಿ ರಾಮರಾಜನ್ ಅವರು ನೂತನ ಅಧಿಕಾರಿಗಳಿಗೆ ಶುಭ ಕೋರಿ ಅಧಿಕಾರ ಹಸ್ತಾಂತರಿಸಿದರು.
ಕೊಡಗು ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ಅವರು ಗುರುವಾರ ಸಂಜೆ ರಾಮರಾಜನ್ ಅವರಿಂದ ಅಧಿಕಾರ ಸ್ವೀಕರಿಸಿದ್ದಾರೆ.
ಬಿಂದುಮಣಿ ಅವರು ಬೆಂಗಳೂರಿನ ನಿವಾಸಿ. ಇವರ ತಂದೆ ನಾಗರಾಜು ಅವರು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಪಡೆಯ 4ನೇ ಪಡೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕೊಡಗಿಗೆ ಬರುವ ಮುನ್ನ ಇವರು ಮೈಸೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ (DCP) ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಅದಕ್ಕೂ ಮೊದಲು ಬೆಂಗಳೂರಿನಲ್ಲಿ ಇಂಟಲಿಜೆನ್ಸ್ (Intelligence-1) ವಿಭಾಗದಲ್ಲಿ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು.







