ಮರ್ಯಾದೆ ಹತ್ಯೆ ಮಾಡಿದವರ ವಿರುದ್ಧ ಸರ್ಕಾರ ಕಠಿಣ ಕ್ರಮ-ಗೃಹ ಸಚಿವ ಡಾ. ಜಿ ಪರಮೇಶ್ವರ್

ಧಾರವಾಡ: ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ದಲಿತ ಸಮುದಾಯದ ಯುವಕನನ್ನು ವಿವಾಹವಾಗಿದ್ದಕ್ಕೆ ಗರ್ಭಿಣಿ ಮಾನ್ಯಳನ್ನು ಹತ್ಯೆ ಮಾಡಿ ಮತ್ತು ಅವರ ಪತಿಯ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಸಂತ್ರಸ್ತರನ್ನು ಖುದ್ದು ಭೇಟಿ ಮಾಡಿ ಸಾಂತ್ವಾನ ಹೇಳಿದರು.

ಯುವಕನ ತಂದೆ ಮತ್ತು ಆತನ ಕುಟುಂಬಸ್ಥರು ಘಟನೆಯ ಕುರಿತು ತಮ್ಮ ನೋವನ್ನು ಹೇಳಿದರು. ಜಾತಿಯ ಕ್ರೂರತ್ವಕ್ಕೆ ಬದುಕಿ ಬಾಳಬೇಕಿದ್ದ ಗರ್ಭಿಣಿಯನ್ನು ಧಾರುಣವಾಗಿ ಹತ್ಯೆ ಮಾಡಿರುವುದು ಅತ್ಯಂತ ನೋವಿನ‌ ಮತ್ತು ಇಡೀ ಸಮಾಜವೇ ತಲೆ ತಗ್ಗಿಸುವ ಕೃತ್ಯ.

ಗ್ರಾಮದಲ್ಲಿ ನಡೆದ ಘಟನೆಯಿಂದ ಕುಟುಂಬದವರೆಲ್ಲ ಭಯ ಭೀತರಾಗಿದ್ದು, ಕೆಲವು ಬೇಡಿಕೆಗಳನ್ನು ಮುಂದಿಟ್ಟರು. ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ, ಸರ್ಕಾರಿ ಉದ್ಯೋಗ ಹಾಗೂ ಆರ್ಥಿಕ ಪರಿಹಾರ ಮುಖ್ಯವಾಗಿದ್ದು, ಶೀಘ್ರವಾಗಿ ಪರಿಶೀಲನೆ ನಡೆಸಲಾಗುವುದು. ಈ ಪ್ರಕರಣದ ವಿಚಾರಣೆಗೆ ತ್ವರಿತ ನ್ಯಾಯಾಲಯ ರಚನೆ ಮಾಡಲಾಗುವುದು.

ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ, ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವ ಕುರಿತು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ಪ್ರಸಾದ್ ಅಬ್ಬಯ್ಯ, ಎನ್.ಹೆಚ್.ಕೋನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಎಫ್‌.ಹೆಚ್.ಜಕ್ಕಪ್ಪನವರ್, ಜಿಲ್ಲಾಧಿಕಾರಿ ದಿವ್ಯಪ್ರಭು, ಉತ್ತರ ವಲಯ ಐಜಿಪಿ ಚೇತನ್ ಸಿಂಗ್ ರಾಥೋಡ್, ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಮುಂತಾದವರು ಇದ್ದರು.

  • Related Posts

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಇನ್ನು ಮುಂದೆ ಡಿಜಿಲಾಕರ್‌ನಲ್ಲೇ ಲಭ್ಯ ಅಂಕಪಟ್ಟಿ!

    ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲ್ ಕ್ರಾಂತಿಗೆ ಹೊಸ ಮುನ್ನುಡಿ ಬರೆದಿರುವ ಕರ್ನಾಟಕ ಸರ್ಕಾರ, ಈಗ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾದ ಸೌಲಭ್ಯವೊಂದನ್ನು ಜಾರಿಗೆ ತಂದಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ, ವಿದ್ಯಾರ್ಥಿಗಳು ತಮ್ಮ ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಡಿಜಿಲಾಕರ್ (Digilocker)…

    Continue reading
    ಮಾರ್ಟಳ್ಳಿ: ಅರಣ್ಯ ಅಂಚಿನ ಗ್ರಾಮದಲ್ಲಿ ನೀರಿನ ಹಾಹಾಕಾರ; ಟ್ಯಾಂಕರ್ ನೀರಿಗಾಗಿ ಶಾಲಾ ಮಕ್ಕಳ ಹಕ್ಕೊತ್ತಾಯ

    ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಟು ಕೊವಿಲ್ ಭಾಗದ ನಿವಾಸಿಗಳು ಭೀಕರ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದು, ಜನ ಮತ್ತು ಜಾನುವಾರುಗಳು ಬಿಸಿಲಿನ ಬೇಗೆಗೆ ತತ್ತರಿಸಿ ಹೋಗಿವೆ. ಅರಣ್ಯ ಸಮೀಪದ ಈ ಗ್ರಾಮದಲ್ಲಿ ನೀರಿನ…

    Continue reading

    Leave a Reply

    Your email address will not be published. Required fields are marked *