ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅವಾಚ್ಯ ಪದ ಬಳಕೆ: ಇಬ್ಬರು ಇಂಜಿನಿಯರ್‌ಗಳ ಬಂಧನ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಪ್ರಕಟಿಸಿ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಪೊಲೀಸರು ತನಿಖೆಯಲ್ಲಿ ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತಷ್ಟು ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಅಶ್ಲೀಲ ಪದ ಬಳಸಿ ಕಮೆಂಟ್

ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ಹೆಸರನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ, ನಿಂದನಾತ್ಮಕ ಹಾಗೂ ಮಾನಹಾನಿಕರ ಸಂದೇಶಗಳನ್ನು ನಿರಂತರವಾಗಿ ಹರಡಲಾಗುತ್ತಿತ್ತು. ಈ ಸಂದೇಶಗಳು ಮಹಿಳೆಯ ಗೌರವಕ್ಕೆ ಧಕ್ಕೆ ತರುವಂತಿದ್ದು, ಸಾರ್ವಜನಿಕವಾಗಿ ಅವಮಾನ ಮಾಡುವ ಉದ್ದೇಶದಿಂದಲೇ ಪೋಸ್ಟ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಇದರಿಂದ ಬೇಸರಗೊಂಡ ವಿಜಯಲಕ್ಷ್ಮೀ ಸೈಬರ್ ಪೊಲೀಸ್ ಠಾಣೆ ಮೆಟ್ಟಲೇರಿದ್ದರು.

ದೂರು ದಾಖಲಿಸಿಕೊಂಡ ಬಳಿಕ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸೈಬರ್ ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿದರು. ಸಾಮಾಜಿಕ ಜಾಲತಾಣಗಳ ಖಾತೆಗಳು, ಮೊಬೈಲ್ ಸಂಖ್ಯೆ, ತಾಂತ್ರಿಕ ಮಾಹಿತಿಗಳನ್ನು ಪರಿಶೀಲಿಸಿದ ವೇಳೆ ಈ ಕೃತ್ಯದಲ್ಲಿ ಚಂದ್ರು ಮತ್ತು ನಿಖಿಲ್ ಎಂಬ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಓರ್ವ ದಾವಣಗೆರೆ, ಮತ್ತೋರ್ವ ಬೆಂಗಳೂರು

ಇಬ್ಬರು ಆರೋಪಿಗಳ ಬಂಧನದಲ್ಲಿ ಓರ್ವ ದಾವಣಗೆರೆ ಮೂಲದ ನಿತಿನ್ ಮತ್ತೊಬ್ಬ ಬೆಂಗಳೂರಿನ ಚಿಕ್ಕಬಾಣಾವರ ಮೂಲದ ಚಂದ್ರು ಎಂಬವರಾಗಿದ್ದಾರೆ. ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದ ನಿತಿನ್, ಅಶ್ಲೀಲ ಪದ ಬಳಸಿ ನಿಂದಿಸಿದ್ದ. ಮತ್ತೊಬ್ಬ ಆರೋಪಿ ಚಂದ್ರು ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದಾನೆ. ಸದ್ಯ ಇಬ್ಬರನ್ನ ಬಂಧಿಸಿ ಸೈಬರ್ ಕ್ರೈಮ್ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅಶ್ಲೀಲ ಪದಗಳಿಂದ ನಿಂದನೆ ಬಳಿಕ ಪೋಸ್ಟ್ ಡಿಲಿಟ್ ಮಾಡಲಾಗಿದ್ದು, ಐಪಿ ಅಡ್ರೆಸ್ ಟ್ರೇಸ್ ಮಾಡಿ ಬಂಧನವಾಗಿದೆ.

ಆರೋಪಿಗಳು ಸಾಮಾಜಿಕ ಜಾಲತಾಣಗಳ ದುರುಪಯೋಗ ಮಾಡಿಕೊಂಡು ಅಶ್ಲೀಲ ಹಾಗೂ ಅವಹೇಳನಕಾರಿ ಪದಗಳನ್ನು ಬಳಸಿ ನಿಂದನೆ ನಡೆಸಿರುವುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಆರೋಪಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಇನ್ನೂ ಹಲವರನ್ನು ಸೈಬರ್ ಪೊಲೀಸರು ಬಂಧಿಸಲು ಬಲೆ ಬೀಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಗಳ ಗೌರವಕ್ಕೆ ಧಕ್ಕೆ ತರುವ, ಅಶ್ಲೀಲ ಹಾಗೂ ನಿಂದನಾತ್ಮಕ ಸಂದೇಶಗಳನ್ನು ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೈಬರ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

  • Related Posts

    ನವದೆಹಲಿಯಲ್ಲಿ ಮಂಡ್ಯದ ರೈತರಿಗೆ ಹೆಚ್.ಡಿ. ಕುಮಾರಸ್ವಾಮಿ ಆತಿಥ್ಯ: ಕೃಷಿ ವಿಚಾರಗಳ ಬಗ್ಗೆ ಆತ್ಮೀಯ ಚರ್ಚೆ

    ನವದೆಹಲಿ: ಉತ್ತರ ಭಾರತ ಪ್ರವಾಸ ಕೈಗೊಂಡಿರುವ ಮಂಡ್ಯ ತಾಲೂಕಿನ ಮಂಗಳ ಗ್ರಾಮದ ರೈತ ಕುಟುಂಬಗಳಿಗೆ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ದೆಹಲಿ ನಿವಾಸದಲ್ಲಿ ಆತ್ಮೀಯ ಆತಿಥ್ಯ ನೀಡಿದರು.Contentsರೈತರೊಂದಿಗೆ ಸಂವಾದಸುಖಕರ ಪ್ರಯಾಣಕ್ಕೆ ಹಾರೈಕೆ ಮಂಗಳ ಗ್ರಾಮದ ಸುಮಾರು 48ಕ್ಕೂ ಹೆಚ್ಚು…

    Continue reading
    ತಮಿಳುನಾಡು ಚುನಾವಣೆ: ಊಟಿಯ ಟೀ ಎಸ್ಟೇಟ್‌ಗಳಲ್ಲಿ ಛಲವಾದಿ ನಾರಾಯಣಸ್ವಾಮಿ ಅವರಿಂದ ಬಿರುಸಿನ ಪ್ರಚಾರ

    ಊಟಿ (ತಮಿಳುನಾಡು): ತಮಿಳುನಾಡಿನ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಕರ್ನಾಟಕದ ಹಿರಿಯ ನಾಯಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ ಅವರು ಇಂದು ಊಟಿಯ ವಿವಿಧ ಭಾಗಗಳಲ್ಲಿ ಪಕ್ಷದ ಅಭ್ಯರ್ಥಿಯ ಪರವಾಗಿ ಮತಯಾಚನೆ ನಡೆಸಿದರು.Contentsಪ್ರಚಾರದ ಪ್ರಮುಖ ವಿವರಗಳು:ಕಾರ್ಮಿಕರೊಂದಿಗೆ ಸಂವಾದ ಪ್ರಚಾರದ ಪ್ರಮುಖ…

    Continue reading

    Leave a Reply

    Your email address will not be published. Required fields are marked *