ಯಮಕನಮರಡಿಯಲ್ಲಿ ಅತ್ಯಾಧುನಿಕ ಪೊಲೀಸ್ ಫೈರಿಂಗ್ ರೇಂಜ್ ಉದ್ಘಾಟಿಸಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಯಮಕನಮರಡಿ ಕ್ಷೇತ್ರದ ಪಾಶ್ಚಾಪೂರ ಗ್ರಾಮದ ಸಮೀಪದಲ್ಲಿ ಇಂದು ಕರ್ನಾಟಕ ಪೊಲೀಸ್ ಇಲಾಖೆಯ ಶೂಟಿಂಗ್ ತರಬೇತಿ ಕೇಂದ್ರವನ್ನು (ಫೈರಿಂಗ್ ರೇಂಜ್) ಉದ್ಘಾಟಿಸಲಾಯಿತು.

ನಮ್ಮ ಯಮಕನಮರಡಿ ಕ್ಷೇತ್ರದಲ್ಲಿ ಪೊಲೀಸ್ ಇಲಾಖೆಯ ಮಹತ್ವದ ತರಬೇತಿ ಕೇಂದ್ರ ಸ್ಥಾಪನೆಯಾಗಿರುವುದು ಸಂತಸವನ್ನು ತಂದಿದೆ.

ಈ‌ ವೇಳೆ ಬೆಳಗಾವಿ‌‌‌ ಜಿಲ್ಲೆ ಪೊಲೀಸ್ ಅಧಿಕ್ಷಕರಾದ ಡಾ. ಭೀಮಾಶಂಕರ ‌ಎಸ್. ಗುಳೇದ್, ಹೆಚ್ಚುವರಿ ಪೋಲಿಸ್ ಅಧಿಕ್ಷಕರು ಶ್ರೀ ಆರ್.ಬಿ. ಬಸರಗಿ, ಶ್ರೀ ಅಶೋಕ ಝಂಜರವಾಡ ಅವರು ಸೇರಿದಂತೆ ‌ಪೊಲೀಸ್‌ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಯಬಾಗ ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಕೈಗೊಳ್ಳಲಾದ, ರಾಯಬಾಗ ತಾಲೂಕಿನ 19 ಗ್ರಾಮಗಳ 39 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಏತ ನೀರಾವರಿ ಯೋಜನೆಯ ಕಾಮಗಾರಿ ಪ್ರಾಯೋಗಿಕವಾಗಿ ಚಾಲನೆಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಹುಬ್ಬರವಾಡಿ, ಬೂದಿಹಾಳ, ಮೇಖಳಿ ಹಾಗೂ ಮಾಡಲಗಿ ಗ್ರಾಮಗಳಿಗೆ ಭೇಟಿ ನೀಡಿ ಕೆರೆಗಳ ಪರಿಶೀಲನೆ ನಡೆಸಲಾಯಿತು.

ಬೇಸಿಗೆಯಲ್ಲಿ ತೀವ್ರ ನೀರಿನ ಅಭಾವವನ್ನು ಎದುರಿಸುತ್ತಿದ್ದ ರಾಯಬಾಗ ತಾಲೂಕಿನ 19 ಗ್ರಾಮಗಳಿಗೆ ಈ ಯೋಜನೆ ಜಾರಿಗೊಳಿಸಿರುವುದು ಅತ್ಯಂತ ಹೆಮ್ಮೆಯ ವಿಷಯ. ಈ ಯೋಜನೆಯಿಂದ ಗ್ರಾಮೀಣ ಪ್ರದೇಶಗಳ ಕೃಷಿ, ಕುಡಿಯುವ ನೀರು ಮತ್ತು ಪರಿಸರಕ್ಕೆ ಶಾಶ್ವತ ಪರಿಹಾರ ದೊರೆಯಲಿದೆ.

ಈ ಸಂದರ್ಭದಲ್ಲಿ ಗ್ರಾಮಸ್ಥರು ತುಂಬಿದ ಕೆರೆಗಳಿಗೆ ಬಾಗಿನ ಅರ್ಪಿಸಿ ಸಂತಸ ವ್ಯಕ್ತಪಡಿಸಿದರು. ಜೊತೆಗೆ ನನ್ನನ್ನು ಆತ್ಮೀಯವಾಗಿ ಸತ್ಕರಿಸಿ ಗೌರವಿಸಿದರು. ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ಮಹಾವೀರ ಮೋಹಿತೆ, ಡಿಸಿಸಿ ಬ್ಯಾಂಕ್ ನಿರ್ದೇಶಕ ಶ್ರೀ ಅಪ್ಪಾಸಾಹೇಬ ಕುಲಗುಡೆ, ಮುಖಂಡರಾದ ಶ್ರೀ ಅಮಿತ ಘಾಟಗೆ ಸೇರಿದಂತೆ ಅನೇಕ ಸ್ಥಳೀಯ ನಾಯಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *