ಬಳ್ಳಾರಿ ಬ್ಯಾನರ್ ವಿವಾದ: ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲುಗೆ ಹೆಚ್ಚಿನ ಭದ್ರತೆ ನೀಡಲು ಬಿ.ವೈ. ವಿಜಯೇಂದ್ರ ಆಗ್ರಹ

ಬೆಂಗಳೂರು: ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ನಿನ್ನೆಯ ಘಟನೆ ಕಾಂಗ್ರೆಸ್ ‌ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕೃತ್ಯವಾಗಿದೆ, ಸದರಿ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ. ಈ ಕೂಡಲೇ ಶಾಸಕ ಜನಾರ್ಧನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಅವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಒತ್ತಾಯಿಸುವೆ. ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ತನಿಖೆ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.


ಈ ಕುರಿತು ಎಕ್ಸ್‌ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರು ಬಿ ವೈ ವಿಜಯೇಂದ್ರ ಅವರು, ಜನಾರ್ಧನ ರೆಡ್ಡಿ ಮತ್ತವರ ಕುಟುಂಬವನ್ನು ಗುರಿಯನ್ನಾಗಿಸಿಕೊಂಡು ನಡೆದಿರುವ ಈ ಘಟನೆಗೆ ಮಹರ್ಷಿ ವಾಲ್ಮೀಕಿ ಪ್ರತಿಮೆಯ ಉದ್ಘಾಟನೆಯ ಕಾರ್ಯಕ್ರಮದ ಬ್ಯಾನರ್‌ ಅಳವಡಿಸುವುದನ್ನು ನೆಪವಾಗಿಸಿಕೊಳ್ಳಲಾಗಿದೆ. ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿದಿಲ್ಲ. ನಾಗರಿಕ ಸಮಾಜ ನೆಮ್ಮದಿಯಾಗಿ ಬದುಕುವ ವಾತಾವರಣವನ್ನು ವಿಚಲಿತಗೊಳಿಸಿ, ಭಯಗ್ರಸ್ಥ ನಗರವನ್ನಾಗಿಸಲು ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ಅವರ ಬೆಂಬಲಿಗರು ದುಷ್ಕೃತ್ಯಕ್ಕೆ ಇಳಿದಂತಿದೆ.


ಜನಾರ್ದನ ರೆಡ್ಡಿಯವರು ಬಿಜೆಪಿಗೆ ಮರು ಸೇರ್ಪಡೆಯಾದನಂತರ ಸ್ಥಳೀಯವಾಗಿ ಪಕ್ಷಸಂಘಟನೆ ಪ್ರಬಲವಾಗುತ್ತಿರುವುದು, ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಅವರ ನಡುವಿನ ಬಾಂಧವ್ಯ ಹಿಂದಿನಂತೆ ಬೆಸೆದಿರುವುದು ರಾಜಕೀಯ ದುಷ್ಟರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ವಿಪರ್ಯಾಸವೆಂದರೆ ಸ್ಥಳೀಯ ಪೊಲೀಸ್‌ ಠಾಣೆಗಳು ಕಾಂಗ್ರೆಸ್ ‌ಕಛೇರಿಗಳಾಗಿ ಮಾರ್ಪಟ್ಟಿವೆ. ಸ್ಥಳೀಯ ಪೊಲೀಸರು ಕಾಂಗ್ರೆಸ್ ಕೈಗೊಂಬೆಯಾಗಿದ್ದಾರೆ, ಪೊಲೀಸರು ಮುನ್ನೆಚ್ಚರಿಕೆ ಕ್ರಮ ವಹಿಸಿದ್ದರೆ ಈ ದುಷ್ಕೃತ್ಯವನ್ನು ತಡೆಯಬಹುದಿತ್ತು.

ಜನಾರ್ದನ ರೆಡ್ಡಿ ಭದ್ರತಾ ವ್ಯವಸ್ಥೆ:

ಸುಧಾಕರ ರೆಡ್ಡಿ ಆಗ್ರಹ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಶಾಸಕ ಜನಾರ್ದನ ರೆಡ್ಡಿಯವರಿಗೆ ಸಮರ್ಪಕ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ಆಗ್ರಹಿಸಿದ್ದಾರೆ. ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಕಾಪಾಡುವಲ್ಲಿ ಈ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ಆಕ್ಷೇಪಿಸಿದ್ದಾರೆ. ಜನಾರ್ದನ ರೆಡ್ಡಿಯವರ ಮೇಲೆ ನಡೆದ ಹಲ್ಲೆಯನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ. ಕರ್ನಾಟಕದಲ್ಲಿ ಮಾದಕವಸ್ತು (ಡ್ರಗ್) ಮಾಫಿಯ ಹೆಚ್ಚಾಗಿದೆ. ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಕರ್ನಾಟಕದಲ್ಲಿ ಗೂಂಡಾರಾಜ್ಯ ತಾಂಡವವಾಡುತ್ತಿದೆ. ಕಾಂಗ್ರೆಸ್ ಪ್ರೇರಿತ ಗೂಂಡಾ ವ್ಯವಸ್ಥೆಯಿಂದ ಸಮಸ್ಯೆ ಉಂಟಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.


ಕಾಂಗ್ರೆಸ್ ಶಾಸಕರೇ ಪೊಲೀಸ್ ಠಾಣೆಗೆ ತೆರಳಿ ಬೆದರಿಸಿ ಕಾನೂನನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ. ಜನಾರ್ದನ ರೆಡ್ಡಿಯವರ ಮೇಲೆ ನಡೆದ ಹಲ್ಲೆಯನ್ನು ತೀವ್ರವಾಗಿ ಖಂಡಿಸುವುದಾಗಿ ಅವರು ತಿಳಿಸಿದ್ದಾರೆ. ಹಲ್ಲೆ ಆರೋಪಿಗಳನ್ನು ಮತ್ತು ಇದರ ಹಿಂದಿರುವ ದುಷ್ಟ ಶಕ್ತಿಗಳನ್ನು ತಕ್ಷಣವೇ ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಪರಮೇಶ್ವರ್ ಅವರನ್ನು ಆಗ್ರಹಿಸಿದ್ದಾರೆ. ಈ ಸಮಸ್ಯೆಯನ್ನು ಸಿದ್ದರಾಮಯ್ಯನವರು ತಕ್ಷಣವೇ ಬಗೆಹರಿಸಬೇಕು. ಇದಕ್ಕಾಗಿ ಜನಾರ್ದನ ರೆಡ್ಡಿಯವರಿಗೆ ಭದ್ರತಾ ವ್ಯವಸ್ಥೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. ಇಲ್ಲವಾದರೆ ಮುಂದೆ ಆಗುವ ಸಮಸ್ಯೆಗಳಿಗೆ ಸಿದ್ದರಾಮಯ್ಯರ ನೇತೃತ್ವದ ಸರಕಾರವೇ ಹೊಣೆ ಹೊರಬೇಕು ಎಂದು ಎಚ್ಚರಿಸಿದ್ದಾರೆ.

  • Related Posts

    ಬೆಳ್ಳೋಡಿ ಕನಕ ಗುರುಪೀಠದಲ್ಲಿ ತ್ರಿವಿಧ ದಾಸೋಹದ ಸಂಭ್ರಮ: ಪೂಜ್ಯ ಶ್ರೀಗಳ ಜನ್ಮದಿನದ ಅಂಗವಾಗಿ ಬಿ.ವೈ. ವಿಜಯೇಂದ್ರ ಶುಭ ಹಾರೈಕೆ

    ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೋಡಿಯ ಶ್ರೀ ಕನಕ ಗುರುಪೀಠದ ಶಾಖಾ ಶ್ರೀಮಠದ ದಶಮಾನೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಇಂದು ಬಿಜೆಪಿ ರಾಜ್ಯ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಪಾಲ್ಗೊಂಡಿದ್ದರು. ಪರಮಪೂಜ್ಯ ಜಗದ್ಗುರು ಶ್ರೀ ನಿರಂಜನಾನಂದಪುರಿ…

    Continue reading
    ಬೆಂಗಳೂರು-ಮೈಸೂರು ರೈಲ್ವೆ ಮಾರ್ಗ ಪರಿವೀಕ್ಷಣೆ: ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿ. ಸೋಮಣ್ಣ ಜಂಟಿ ಸುದ್ದಿಗೋಷ್ಠಿ

    ಮೈಸೂರು: ಬೆಂಗಳೂರು ಮತ್ತು ಮೈಸೂರು ನಡುವಿನ ರೈಲ್ವೆ ಸಂಪರ್ಕ ಹಾಗೂ ಮೂಲಸೌಕರ್ಯಗಳ ಕುರಿತು ಇಂದು ಕೇಂದ್ರ ಸಚಿವರುಗಳ ತಂಡ ಮಹತ್ವದ ಪರಿಶೀಲನೆ ನಡೆಸಿತು. ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ…

    Continue reading

    Leave a Reply

    Your email address will not be published. Required fields are marked *