ಬಳ್ಳಾರಿ ಫೈರಿಂಗ್‌ ಪ್ರಕರಣ: ಅಧಿಕಾರ ವಹಿಸಿಕೊಂಡ ಮರುದಿನವೇ ಎಸ್‌ಪಿ ಪವನ್ ನೆಜ್ಜೂರ್ ಅಮಾನತು.

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಬ್ಯಾನರ್ ಗಲಾಟೆಯನ್ನು ಸರಿಯಾಗಿ ನಿಭಾಯಿಸಿಲ್ಲ ಮತ್ತು ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿಲ್ಲ ಎಂಬ ಕಾರಣ ನೀಡಿ, ನಿನ್ನೆಯಷ್ಟೇ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅವರನ್ನು ಅಮಾನತುಗೊಳಿಸಲಾಗಿದೆ.

ವಿಜಯನಗರ ಲೋಕಾಯುಕ್ತದಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪವನ್ ನೆಜ್ಜೂರ್ ಅವರನ್ನು ಕಳೆದ ಡಿಸೆಂಬರ್ 31 ರಂದು ಬಳ್ಳಾರಿ ಎಸ್ ಪಿಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು.

ಕಳೆದ ಒಂದೂವರೆ ವರ್ಷದಿಂದ ಬಳ್ಳಾರಿ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಶೋಭಾರಾಣಿ ವಿ.ಜೆ.ಅವರನ್ನು ಮಂಡ್ಯ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಇವರ ಸ್ಥಾನಕ್ಕೆ ಪವನ್ ನೆಜ್ಜೂರ್ ಅವರನ್ನು ವರ್ಗಾಯಿಸಲಾಗಿತ್ತು.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *