ಬಳ್ಳಾರಿ ಫೈರಿಂಗ್ ಪ್ರಕರಣ: ಕೈ ಕಾರ್ಯಕರ್ತನ ಮೇಲೆ ಗುಂಡು ಹಾರಿಸಿದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್‌ಪಿ

G.Janardhana Reddy: ಬಳ್ಳಾರಿಯಲ್ಲಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್ ಅಳವಡಿಕೆ ವಿಚಾರವಾಗಿ ಗುರುವಾರ (ಜನವರಿ 1) ರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಗುಂಡು ತಗುಲಿ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್ (28) ಸಾವವನ್ನಪ್ಪಿದ್ದಾರೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭಂಡಾರ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಬಳ್ಳಾರಿಯಲ್ಲಿ ನಡೆದ ಗಲಭೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವು ಪೊಲೀಸರ ಗುಂಡಿನಿಂದ ಸಂಭವಿಸಿದ್ದಲ್ಲ. ಬದಲಾಗಿ ಖಾಸಗಿ ವ್ಯಕ್ತಿಯ ರಿವಾಲ್ವಾರ್‌ನಿಂದ ಹಾರಿದ ಗುಂಡು ತಗುಲಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭಂಡಾರ ಅವರು ಹೇಳಿದ್ದಾರೆ.

ವಾಲ್ಮೀಕಿ ಪ್ರತಿಮೆ ಪ್ರತಿಷ್ಠಾಪನೆ ವಿಚಾರವಾಗಿ ನಾರಾ ಭರತ್ ರೆಡ್ಡಿ ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ನಡೆದ ಸಂಘರ್ಷ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ವಾಲ್ಮೀಕಿ ಪ್ರತಿಮೆ ಪ್ರತಿಷ್ಠಾಪನೆಗೆ ಬ್ಯಾನರ್ ಕಟ್ಟುವ ವಿಚಾರದಲ್ಲಿ ಭರತ್ ರೆಡ್ಡಿ ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದು ಅದು ವಿಕೋಪಕ್ಕೆ ತಿರುಗಿತ್ತು. ಕೊನೆಗೆ ಕೈಕೈ ಮಿಲಾಯಿಸುವ ಹಂತಕ್ಕೂ ಹೋಗಿದೆ. ಬಳಿಕ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಈ ನಡುವೆ ಗುಂಡಿನ ಸದ್ದು ಕೇಳಿಬಂದಿತ್ತು. ಘಟನೆ ವೇಳೆ ತೀವ್ರವಾಗಿ ಗಾಯಗೊಂಡಿದ್ದ ರಾಜಶೇಖರ್ ವಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

ಆರಂಭದಲ್ಲಿ ಪೊಲೀಸರ ಫೈರಿಂಗ್‌ನಿಂದ ಸಾವು ಸಂಭವಿಸಿದೆ ಎಂಬ ವದಂತಿ ಹಬ್ಬಿತ್ತು. ಆದರೆ, ಇದನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಅವರು ಒಪ್ಪಿಕೊಳ್ಳದೇ ನಿರಾಕರಿಸಿದ್ದಾರೆ. ಎಸ್‌ಪಿ ಹೇಳಿದ್ದೇನು?: “ಘಟನಾ ಸ್ಥಳದಲ್ಲಿ ಖಾಸಗಿ ವ್ಯಕ್ತಿಯೊಬ್ಬ ಗುಂಡು ಹಾರಿಸಿರುವ ಬಗ್ಗೆ ಮಾಹಿತಿ ಇದೆ. ಮೃತನ ದೇಹ ಸೇರಿರುವುದು ಖಾಸಗಿ ರಿವಾಲ್ವಾರ್ ಗುಂಡು. ಈ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ,” ಎಂದು ಎಸ್‌ಪಿ ರಂಜಿತ್ ಕುಮಾರ್ ಭಂಡಾರ ಅವರು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *