ಬಡವರು, ದಲಿತರು, ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ವಿಶೇಷ ಕಾಳಜಿಯಿಂದ ಕಾರ್ಯ ನಿರ್ವಹಿಸಿ – ಮುಖ್ಯಮಂತ್ರಿ ಮಾತುಗಳು

ಬೆಂಗಳೂರು: ರಾಜ್ಯದಲ್ಲಿನ ಬಡವರು, ದಲಿತರು, ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ವಿಶೇಷ ಕಾಳಜಿಯಿಂದ ಹಾಗೂ ಹೊಸ ಉತ್ಸಾಹದಿಂದ ಎಲ್ಲರೂ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು..

ಎಲ್ಲರಿಗೂ ಸಮಾನ ಅವಕಾಶ ದೊರೆತು, ಸಮಾಜದ ಮುಖ್ಯವಾಹಿನಿಗೆ ಬರುವಂತಾದಾಗ ಮಾತ್ರವೇ ಸಮಾನತೆ ಬರಲು ಸಾಧ್ಯ. ನಮ್ಮ ಸಮಾಜ ಜಾತಿ ವ್ಯವಸ್ಥೆಯಿಂದ ಕೂಡಿದೆ. ಜಾತಿ ಮತ್ತು ವರ್ಗ ವ್ಯವಸ್ಥೆ ಅಳಿಯಬೇಕಾದರೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಗಲೇಬೇಕು ಎಂದು ತಿಳಿಸಿದರು.

ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದರೂ ಇನ್ನೂ ಜಾತಿ ವ್ಯವಸ್ಥೇ ನಿರ್ಮೂಲನೆಯಾಗಿಲ್ಲ. ಎಲ್ಲಾ ಅಧಿಕಾರಿಗಳು ಜಾತ್ಯತೀತವಾಗಿ ಕಾರ್ಯ ನಿರ್ವಹಿಸಬೇಕು. ನಮ್ಮ ದೃಷ್ಟಿಕೋನ ಜಾತ್ಯತೀತವಾಗಿರಬೇಕು. ಯಾವುದೇ ಕಾರಣಕ್ಕೂ ಸ್ವಜಾತಿ ಪಕ್ಷಪಾತ ಮಾಡಬಾರದು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ.

ಬಡವರ ಒಳಿತಿಗೆ ಕರ್ತವ್ಯ ನಿರ್ವಹಿಸುವಾಗ ಅಧಿಕಾರಿಗಳು ಪ್ರಾಮಾಣಿಕವಾಗಿರಬೇಕಲ್ಲದೆ, ವ್ಯವಸ್ಥೆಯನ್ನು ಸರಿ ಮಾಡುವ ಪ್ರಯತ್ನವನ್ನು ಮಾಡಬೇಕು. ತಹಶೀಲ್ದಾರ್, ಸಹಾಯಕ ಆಯುಕ್ತರು ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಎಲ್ಲರಿಗೂ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು. ಬಡವರ ಬಗ್ಗೆ ಕರುಣೆಯಲ್ಲ, ಸಂವಿಧಾನ ನೀಡಿರುವ ಅವರ ಹಕ್ಕುಗಳ ರಕ್ಷಣೆ ಮಾಡುವ ಪ್ರಯತ್ನ ಮಾಡಬೇಕು. ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡ ಪೂರ್ಣಗೊಳಿಸಲು ಹೆಚ್ಚುವರಿ ಅನುದಾನ ಒದಗಿಸಲಾಗುವುದು. ಪದೋನ್ನತಿ ಸೇರಿದಂತೆ ಸಂಘದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು..

ಈ ಸಂದರ್ಭದಲ್ಲಿ ಸಚಿವರಾದ ಈಶ್ವರ ಖಂಡ್ರೆ, ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *