2027ರ ಆಗಸ್ಟ್ 15 ರಂದು ಭಾರತ ತನ್ನ ಮೊದಲ ಬುಲೆಟ್ ರೈಲು ಸೇವೆಯನ್ನು ಪಡೆಯುವ ಸಾಧ್ಯತೆಯಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ.
ನವದೆಹಲಿಯಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಹಮದಾಬಾದ್ ಮತ್ತು ಮುಂಬೈ ನಡುವಿನ ಭಾರತದ ಮೊದಲ ಬುಲೆಟ್ ರೈಲು ಯೋಜನೆ ನಿರ್ಮಾಣ ಹಂತದಲ್ಲಿದೆ. ಮೊದಲಿಗೆ ಸೂರತ್‌ನಿಂದ ಬಿಲಿಮೋರಾ ಮತ್ತು ನಂತರ ವಾಪಿಯಿಂದ ಸೂರತ್‌ವರೆಗಿನ ಮೊದಲ ವಿಭಾಗವನ್ನು ಆರಂಭಿಸಲಾಗುವುದು ಎಂದು ಅವರು ಹೇಳಿದರು.
ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಶೀಘ್ರದಲ್ಲೇ ಗುವಾಹಟಿ ಮತ್ತು ಕೋಲ್ಕತ್ತಾ ನಡುವೆ ಕಾರ್ಯನಿರ್ವಹಿಸಲಿದೆ. ಮುಂದಿನ 15 ರಿಂದ 20 ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ರೈಲನ್ನು ಉದ್ಘಾಟಿಸಲಿದ್ದಾರೆ ಎಂದು ಸಚಿವರು ತಿಳಿಸಿದರು.








