ಸಾರ್ವಜನಿಕರ ಕ್ಷಮೆ ಕೋರಿದ ಭರತ್ ರೆಡ್ಡಿ: ನನ್ನಿಂದ ತೊಂದರೆಯಾಗಿದ್ದರೆ ವಿಷಾದಿಸುತ್ತೇನೆ ಎಂದ ಶಾಸಕ

ಬಳ್ಳಾರಿ: ನನ್ನಿಂದ ಸಾರ್ವಜನಿಕರ ಶಾಂತಿಗೆ ಭಂಗವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆ ಯಾರಿಂದಲೇ ನಡೆದಿರಲಿ. ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ. ಆದರೆ, ನಿನ್ನೆ ತಡರಾತ್ರಿವರೆಗೆ ನಡೆದ ಬೆಳವಣಿಗೆಯಲ್ಲಿ ನನ್ನಿಂದ ಜನರಿಗೆ ತೊಂದರೆಯಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಇದೊಂದು ಆಕಸ್ಮಿಕ ಘಟನೆಯಾಗಿದೆ. ಶಾಸಕನಾಗಿ ನಾನು ಜನರ ಕ್ಷಮೆ ಕೇಳುತ್ತೇನೆ ಎಂದರು.

ಶಾಸಕ ನಾಗೇಂದ್ರ ಮಾತನಾಡಿ, ಬಳ್ಳಾರಿಯಲ್ಲಿ ಶನಿವಾರ ನಡೆಯಬೇಕಿದ್ದ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಭರತ್ ರೆಡ್ಡಿ ಅವರ ಮನವೊಲಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಇದಕ್ಕಾಗಿ ಬಳ್ಳಾರಿಗೆ ನನ್ನನ್ನು ಕಳಿಸಿಕೊಟ್ಟಿದ್ದಾರೆ. ಹೀಗಾಗಿ, ಸಿಎಂ ಹಾಗೂ ಡಿಸಿಎಂ ಅವರ ಸೂಚನೆಯಂತೆ ಕಾರ್ಯಕ್ರಮ ಮುಂದೂಡಿಕೆಯಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ; ಸಂಸದ ತುಕಾರಾಂ

ಬಳ್ಳಾರಿಯಲ್ಲಿ ನಡೆದ ಬ್ಯಾನರ್‌ ಗಲಾಟೆ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಾಗಿದ್ದರೂ ಅವರ ವಿರುದ್ಧ ಕಾನೂನುಬದ್ಧವಾಗಿ ಸೂಕ್ತ ಹಾಗೂ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಂಸದ ಇ.ತುಕಾರಾಂ ಸ್ಪಷ್ಟಪಡಿಸಿದ್ದಾರೆ. ಕಂಪ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಾಟೆ ಅನಿರೀಕ್ಷಿತವಾಗಿ ನಡೆದ ದುರ್ಘಟನೆಯಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯ ಕಾರ್ಯದರ್ಶಿ ಈಗಾಗಲೇ ಸೂಕ್ತ ನಿರ್ದೇಶನಗಳನ್ನು ನೀಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಐಜಿಪಿ ವರ್ತಿಕಾ ಕಾಟೀಯಾರ್, ಪೊಲೀಸ್ ವರಿಷ್ಠಾಧಿಕಾರಿ ರಂಜಿತ್‌ಕುಮಾರ್ ಬಂಡಾರು, ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಬಳ್ಳಾರಿ ಜಿಲ್ಲೆಯನ್ನು ಭಯಮುಕ್ತವಾಗಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಬಳ್ಳಾರಿ ಬಂಗಾರದ ತಟ್ಟೆಯಂತಹ ಮಹತ್ವದ ಪ್ರದೇಶವಾಗಿದ್ದು, ಇಲ್ಲಿ ಶಾಂತಿ, ಸೌಹಾರ್ದ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *