ಬಳ್ಳಾರಿಯ ಘಟನೆಗಳಿಂದ ಮನಸ್ಸಿಗೆ ನೋವಾಗಿದೆ: ಗಲಭೆ ಕುರಿತು ಹೆಚ್.ಡಿ. ದೇವೇಗೌಡ ವಿಷಾದ

ಬೆಂಗಳೂರು:     ಬಳ್ಳಾರಿಯಲ್ಲಿ ನಡೆದಿರುವ ಗುಂಡಿನ ದಾಳಿ, ಗಲಭೆ ಪ್ರಕರಣದ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು  ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿಯಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಳ್ಳಾರಿ ಘಟನೆಯನ್ನು  ಟಿವಿಯಲ್ಲಿ ನೋಡಿದ್ದೇನೆ. ಗುಂಪು ಘರ್ಷಣೆ ಆಗಿದೆ. ಶಾಸಕರು, ಇನ್ನೂ ಯಾರು ಯಾರು ಭಾಗಿ ಆಗಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು ತಿಳಿಸಿದರು.

     ಗಲಭೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಗುಂಡು ಹೊಡೆದವರು ಯಾರು ಎಂದು ಗೊತ್ತಿಲ್ಲ. ಜನಾರ್ದನ ರೆಡ್ಡಿ ಅವರು ಮನೆಯಲ್ಲಿ ಇದ್ದಿದ್ದರೆ ಅಪಾಯ ಆಗ್ತಿತ್ತು ಎನ್ನುವ ಸುದ್ದಿ ನೋಡಿದೆ. ಎಲ್ಲಾ ವರದಿ ಬಂದ ಮೇಲೆ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಈಗಾಗಲೇ ನಾಲ್ಕು FIR ಗಳು ಆಗಿವೆಯಂತೆ. ಖಾಸಗಿ ವ್ಯಕ್ತಿ ಹೊರಗಡೆಯಿಂದ ಗುಂಡು ಹೊಡೆದಿದ್ದು ಎಂದು ಸುದ್ದಿ ನೋಡಿದೆ. ನಿಖರವಾಗಿ ಹೀಗೆ ಎಂದು ಹೇಳಲು ನನಗೆ ಕಷ್ಟ. ಶ್ರೀರಾಮುಲು ಅವರು ಜನಾರ್ದನ ರೆಡ್ಡಿ ಅವರಿಗೆ ಗೆ ರಕ್ಷಣೆ ಕೊಡಬೇಕು ಎಂದು ಹೇಳಿದ್ದನ್ನು ಕೇಳಿದ್ದೇನೆ ಎಂದು ಮಾಜಿ ಪ್ರಧಾನಿಗಳು ಹೇಳಿದರು. 

    ಗನ್ ಸಂಸ್ಕೃತಿ ರಾಜ್ಯಕ್ಕೂ ಬಂತು ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ, ಈ ಬಗ್ಗೆ ನಾನೇನೂ ಹೇಳಲ್ಲ. ಕುಮಾರಸ್ವಾಮಿ ಎರಡು ಸಲ ಸಿಎಂ ಆಗಿ ಸಾಕಷ್ಟು ಕ್ರಮ ತಗೊಂಡಿದ್ದಾರೆ. ವಿಪಕ್ಷ‌ನಾಯಕನಾಗಿಯೂ ಹೋರಾಟ ಮಾಡಿದ್ದಾರೆ. ಬಳ್ಳಾರಿ ಘಟನೆ ಬಗ್ಗೆ ನಾನು ಏನೂ ಮಾತಾಡಲ್ಲ. ಗೃಹ ಸಚಿವರು ಸಮಯಕ್ಕೆ ಸರಿಯಾಗಿ ಕ್ರಮ ತಗೋತಾರೆ. ಅವಕಾಶ ಕೊಟ್ರೆ ಸಿಎಂ ಆಗ್ತಿನಿ ಎಂದು ಪರಮೇಶ್ವರ್ ಅವರು ಹೇಳಿದ್ದಾರೆ. ಆ ಕಡೆ ಜಾಸ್ತಿ ಗಮನ ಕೊಡ್ತಿದಾರೆ ಎಂದು ದೇವೇಗೌಡರು ಹೇಳಿದರು. 

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *