ನನ್ನ ಮಗ ಆತ್ಮಹತ್ಯೆಗೆ ಯತ್ನಿಸಿಲ್ಲ”: ಸುಳ್ಳು ವದಂತಿಗಳಿಗೆ ತೆರೆ ಎಳೆದ ಎಸ್ಪಿ ಪವನ್ ನೆಜ್ಜೂರ್ ತಂದೆ

ತುಮಕೂರು: ಬಳ್ಳಾರಿಯ ಬ್ಯಾನರ್ ಗಲಾಟೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಎಸ್ ಪಿ ಪವನ್ ನೆಜ್ಜೂರ್ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ದೊರೆತಿದ್ದು, ಆತ್ಮಹತ್ಯೆ ಪ್ರಯತ್ನದ ಕುರಿತು ಅವರ ತಂದೆ ಪ್ರತಿಕ್ರಿಯೆ ನೀಡಿದ್ದಾರೆ.

ಬಳ್ಳಾರಿ ಗಲಾಟೆ ನಿಭಾಯಿಸುವಲ್ಲಿ ವಿಫಲವಾಗಿದ್ದಾರೆ ಅಂತಾ ಬಳ್ಳಾರಿಗೆ 24 ಗಂಟೆಗಳ ಹಿಂದಷ್ಟೇ ನೇಮಕವಾಗಿದ್ದ ಎಸ್​ಪಿ ಪವನ್ ನೆಜ್ಜೂರ್ ಅವರನ್ನ ಸಸ್ಪೆಂಡ್ ಮಾಡಲಾಗಿತ್ತು. ಆ ಬೆನ್ನಲ್ಲೇ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿತ್ತು.

ಸದ್ಯ ಈ ಬಗ್ಗೆ ಖುದ್ಧು ಎಸ್​ಪಿ ಪವನ್ ನೆಜ್ಜೂರ್ ಅವರ ತಂದೆ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ನನ್ನ ಪುತ್ರ ಆತ್ಮಹತ್ಯೆಯ ಪ್ರಯತ್ನ ಮಾಡಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪವನ್ ನೆಜ್ಜೂರ್ ಅವರ ತಂದೆ ಉದಯ್ ಶಂಕರ್ ನೆಜ್ಜೂರ್ ಅವರು, ‘ನನ್ನ ಮಗ 2016ನೇ ಸಾಲಿನ ಕರ್ನಾಟಕ ಕೇಡರ್​​ ಐಪಿಎಸ್ ಅಧಿಕಾರಿ. ಅವರ ತಂದೆಯಾಗಿ ಕೆಲ ವಿಷಯಗಳನ್ನು ತಮ್ಮ ಗಮನಕ್ಕೆ ತರಬಯಸುತ್ತೇನೆ.

ಐಪಿಎಸ್ ಅಧಿಕಾರಿಯಾಗಿರುವ ನನ್ನ ಪುತ್ರ ಪವನ್​ ನೇಜ್ಜೂರು ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಶಿಸ್ತು, ಕಾರ್ಯಕ್ಷಮತೆ ಹಾಗೂ ಕಾನೂನು ಪಾಲನೆಗೆ ಬದ್ಧನಾಗಿ ಕೆಲಸ ಮಾಡುತ್ತಿದ್ದಾನೆ ಎಂಬ ಹೆಮ್ಮೆ ನಮಗಿದೆ. ಆದರೆ ಬಳ್ಳಾರಿಯಲ್ಲಿ ನಡೆದ ಗಲಭೆಯ ಘಟನೆ ನಂತರ ನನ್ನ ಪುತ್ರನ ಬಗ್ಗೆ ಸುಳ್ಳು ವದಂತಿಗಳನ್ನು ಹರಡಿಸುತ್ತಿರುವುದು ಬೇಸರ ಮೂಡಿಸಿದೆ’ ಎಂದು ಹೇಳಿದ್ದಾರೆ.

  • Related Posts

    ನಾರಿ ಶಕ್ತಿ ವಂದನಾ ಅಧಿನಿಯಮ: ಇಂಡಿ ಒಕ್ಕೂಟದ ವಿರುದ್ಧ ಅನುರಾಗ್ ಸಿಂಗ್ ಠಾಕೂರ್ ವೀರೋಧ

    ಬೆಂಗಳೂರು: ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ‘ನಾರಿ ಶಕ್ತಿ ವಂದನಾ ಅಧಿನಿಯಮ’ವನ್ನು ಲೋಕಸಭೆಯಲ್ಲಿ ವಿರೋಧಿಸಿದ ಕಾಂಗ್ರೆಸ್ ನೇತೃತ್ವದ ಇಂಡಿ (I.N.D.I.A) ಒಕ್ಕೂಟದ ಧೋರಣೆಯನ್ನು ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಅನುರಾಗ್ ಸಿಂಗ್ ಠಾಕೂರ್ ಕಟುವಾಗಿ ಟೀಕಿಸಿದರು.…

    Continue reading
    ಮೈಸೂರು: ಅಂಬೇಡ್ಕರ್ ಜೀವನ ಚರಿತ್ರೆ ನಾಟಕ ಪ್ರದರ್ಶನ; ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ

    ಮೈಸೂರು: ನಗರದ ಗಾಂಧಿ ನಗರದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಚರಿತ್ರೆ ಕುರಿತ ನಾಟಕ ಪ್ರದರ್ಶನ ಕಾರ್ಯಕ್ರಮಕ್ಕೆ ಮೈಸೂರು ರಾಜವಂಶಸ್ಥರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ…

    Continue reading

    Leave a Reply

    Your email address will not be published. Required fields are marked *