ನೇಕಾರರ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತು ಪರಿಶೀಲನೆ: ದೇವಾಂಗ ಸಂಘದ ಶತಮಾನೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: “ನೇಕಾರರು ಸಮಾಜಕ್ಕೆ ಬಟ್ಟೆ ನೀಡುವ ಮೂಲಕ ರೈತರಷ್ಟೇ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದಿರುವ ದೇವಾಂಗ ಸಮುದಾಯವು ಸಂಘಟಿತ ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯಬೇಕು,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ನಗರದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ದೇವಾಂಗ ಸಂಘದ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳಾ ಸಬಲೀಕರಣಕ್ಕೆ ಸರ್ಕಾರದ ಸಾಥ್

ಸಮುದಾಯದ ಶ್ರೇಯೋಭಿವೃದ್ಧಿಗೆ ಸಂಘವು ನೂರು ವರ್ಷ ಪೂರೈಸಿರುವುದು ಐತಿಹಾಸಿಕ ಮೈಲಿಗಲ್ಲು ಎಂದ ಸಿಎಂ, ಮಹಿಳಾ ಸಬಲೀಕರಣದ ಬಗ್ಗೆ ವಿಶೇಷ ಒತ್ತು ನೀಡಿದರು. “ಹಿಂದೆ ಮಹಿಳೆಯರು ಮತ್ತು ಶೋಷಿತರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಈಗ ಲಿಂಗ ತಾರತಮ್ಯ ನೀಗುತ್ತಿದೆ. ಸಂಘವು ನಿರ್ಮಿಸಲಿರುವ ಮಹಿಳಾ ವಸತಿನಿಲಯಕ್ಕೆ ಸರ್ಕಾರದಿಂದ ಅಗತ್ಯ ಸಹಾಯ ಮಾಡಲಾಗುವುದು,” ಎಂದು ಅವರು ಭರವಸೆ ನೀಡಿದರು.

ನೇಕಾರರಿಗಾಗಿ ವಿಶೇಷ ಸವಲತ್ತುಗಳು

ತಮ್ಮ ಆಡಳಿತಾವಧಿಯಲ್ಲಿ ನೇಕಾರರಿಗೆ ನೀಡಿದ ಸವಲತ್ತುಗಳನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಸಮುದಾಯಕ್ಕೆ ದೊರೆಯುತ್ತಿರುವ ಸೌಲಭ್ಯಗಳನ್ನು ಪಟ್ಟಿ ಮಾಡಿದರು:

  • ವಿದ್ಯುತ್ ರಿಯಾಯಿತಿ: 20 ಹೆಚ್‌ಪಿ ವರೆಗೆ ರಿಯಾಯಿತಿ ದರದಲ್ಲಿ ವಿದ್ಯುತ್ ಒದಗಿಸಲಾಗುತ್ತಿದೆ.
  • ಸಾಲ ಸೌಲಭ್ಯ: ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂ.ವರೆಗೆ ಸಾಲದ ವ್ಯವಸ್ಥೆ.
  • ನೇಕಾರ ಸಮ್ಮಾನ: ನೇಕಾರ ಸಮ್ಮಾನ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತಿದೆ.
  • ಜಮೀನು ಹಂಚಿಕೆ: ಹಿಂದುಳಿದ ಜಾತಿಗಳಿಗೆ ಜಮೀನು ನೀಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ.

ಉಪಜಾತಿಗಳ ಭೇದ ಮರೆತು ಒಂದಾಗಿ

“ಸಮಾಜದಲ್ಲಿ ಸಾಕ್ಷರತೆ ಹೆಚ್ಚಾಗಬೇಕಿದೆ, ವಿಶೇಷವಾಗಿ ಮಹಿಳೆಯರಲ್ಲಿ ಶಿಕ್ಷಣದ ಪ್ರಮಾಣ ಗಣನೀಯವಾಗಿ ಹೆಚ್ಚಬೇಕು. ದೇವಾಂಗ ಸಮುದಾಯದಲ್ಲಿರುವ ಎಲ್ಲ ಉಪಜಾತಿಗಳನ್ನು ಬದಿಗಿಟ್ಟು, ಸಮುದಾಯವು ಒಂದೇ ಶಕ್ತಿಯಾಗಿ ಸಂಘಟಿತವಾಗಬೇಕು. ಸಂಘಟನೆಯ ಮೂಲಕವೇ ಶಕ್ತಿ ಬೆಳೆಯುತ್ತದೆ,” ಎಂದು ಡಾ. ಲೋಹಿಯಾ ಅವರ ವಿಚಾರಗಳನ್ನು ಉಲ್ಲೇಖಿಸಿ ಸಿಎಂ ಕಿವಿಮಾತು ಹೇಳಿದರು.

ನೇಕಾರರ ನಿಗಮ ಸ್ಥಾಪನೆಗೆ ಬೇಡಿಕೆ

ದೇವಾಂಗ ಸಮುದಾಯದ ಪ್ರಮುಖ ಬೇಡಿಕೆಯಾದ ನೇಕಾರರ ಅಭಿವೃದ್ಧಿ ನಿಗಮ ಸ್ಥಾಪಿಸುವ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಈ ಬೇಡಿಕೆಯನ್ನು ಸರ್ಕಾರ ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು.

“ಜಾತಿವ್ಯವಸ್ಥೆಯಿಲ್ಲದ ಸಮಾಜ ನಿರ್ಮಾಣವೇ ಸಂವಿಧಾನದ ಆಶಯ. ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಹಾದಿಯಲ್ಲಿ ಎಲ್ಲರೂ ಸಹಿಷ್ಣುತೆ ಮತ್ತು ಸಹಬಾಳ್ವೆಯನ್ನು ರೂಢಿಸಿಕೊಳ್ಳಬೇಕು.” ಸಿದ್ದರಾಮಯ್ಯ, ಮುಖ್ಯಮಂತ್ರಿಗಳು.

ಹಂಪಿ ಹೇಮಕೂಟ ಮಹಾ ಸಂಸ್ಥಾನದ ಮಠಾಧೀಶರಾದ ದಯಾನಂದಪುರಿ ಮಹಾ ಸ್ವಾಮೀಜಿ, ನಿತ್ಯಾನಂದ ಯೋಗಾಶ್ರಮದ ಯೋಗಾನಂದ ಸರಸ್ವತಿ ಸ್ವಾಮೀಜಿ, ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದ ಸ್ವಾಮೀಜಿ ಅವರುಗಳ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವಾಂಗ ಸಂಘದ ಅಧ್ಯಕ್ಷರಾದ ರಮೇಶ್, ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ, ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಎಂ.ಸಿ.ವೇಣುಗೋಪಾಲ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *