ಮಧುಗಿರಿಗೆ ‘ಜಲಭಾಗ್ಯ’: 29.50 ಕೋಟಿ ರೂ. ವೆಚ್ಚದ 3 ಬೃಹತ್ ಚೆಕ್ ಡ್ಯಾಂ ನಿರ್ಮಾಣಕ್ಕೆ ಸಚಿವ ಎನ್.ಎಸ್. ಬೋಸರಾಜು ಶಂಕುಸ್ಥಾಪನೆ

ಮಧುಗಿರಿ: ಮಳೆ ಅವಲಂಬಿತ ಪ್ರದೇಶವಾದ ಮಧುಗಿರಿ ತಾಲ್ಲೂಕಿನ ಅಂತರ್ಜಲ ಮಟ್ಟ ಹೆಚ್ಚಿಸಲು ಹಾಗೂ ರೈತರ ಕೃಷಿ ಚಟುವಟಿಕೆಗಳಿಗೆ ಬಲ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್.ಎಸ್. ಬೋಸರಾಜು ಅವರು ಇಂದು ಸುಮಾರು 29.50 ಕೋಟಿ ರೂ. ವೆಚ್ಚದ 3 ಪ್ರಮುಖ ಚೆಕ್ ಡ್ಯಾಂ ಕಂ ಬ್ಯಾರೇಜ್ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಮಧುಗಿರಿ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಕೆ.ಎನ್. ರಾಜಣ್ಣ ಅವರ ಸಮ್ಮುಖದಲ್ಲಿ, ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಮುದ್ದೇನಹಳ್ಳಿಯಲ್ಲಿ ಈ ಕಾರ್ಯಕ್ರಮ ಜರುಗಿತು.

ಯೋಜನೆಯ ವಿವರಗಳು (PMKSY ಅಡಿಯಲ್ಲಿ):

ಕೇಂದ್ರ ಸರ್ಕಾರದ ‘ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ’ (PMKSY-HKKP-SMI) ಹಾಗೂ ರಾಜ್ಯದ ಸಣ್ಣ ನೀರಾವರಿ ಇಲಾಖೆಯ ಸಹಯೋಗದಲ್ಲಿ ಈ ಕೆಳಗಿನ ಮೂರು ಪ್ರಮುಖ ನದಿಗಳಿಗೆ ಅಡ್ಡಲಾಗಿ ಬ್ಯಾರೇಜ್‌ಗಳನ್ನು ನಿರ್ಮಿಸಲಾಗುತ್ತಿದೆ:

ಜಯಮಂಗಲಿ ನದಿ: ಮುದ್ದೇನಹಳ್ಳಿ-ಶಾನಗಾನಹಳ್ಳಿ ಬಳಿ 18.50 ಕೋಟಿ ರೂ. ವೆಚ್ಚದಲ್ಲಿ ಚೆಕ್-ಡ್ಯಾಂ ಕಂ ಬ್ರಿಡ್ಜ್.

ಕುಮುದ್ವತಿ ನದಿ: ತಿಂಗಳೂರು-ಕಲಿದೇವಪುರ ಬಳಿ 8 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ.

ಸುವರ್ಣಮುಖಿ ನದಿ: ಜಕ್ಕೇನಹಳ್ಳಿ-ಶಂಕರಪುರ ನಡುವೆ 3 ಕೋಟಿ ರೂ. ವೆಚ್ಚದ ಕಾಮಗಾರಿ.

    ಅಂತರ್ಜಲ ವೃದ್ಧಿಯಲ್ಲಿ ಹೊಸ ಮುನ್ನುಡಿ: ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಎನ್.ಎಸ್. ಬೋಸರಾಜು ಅವರು, “ಮಧುಗಿರಿಯಂತಹ ಗಡಿಭಾಗದ ತಾಲ್ಲೂಕುಗಳಲ್ಲಿ ಕುಡಿಯುವ ನೀರು ಮತ್ತು ಕೃಷಿಗೆ ಅಂತರ್ಜಲವೇ ಆಧಾರ. ನಮ್ಮ ಸರ್ಕಾರ ಕಳೆದ 3 ವರ್ಷಗಳಲ್ಲಿ ಜಿಲ್ಲೆಯಲ್ಲಿ 399.86 ಕೋಟಿ ರೂ. ವೆಚ್ಚದಲ್ಲಿ 199 ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಇಂದಿನ ಈ 3 ಬ್ಯಾರೇಜ್‌ಗಳು ಭವಿಷ್ಯದಲ್ಲಿ ರೈತರ ಬದುಕಿಗೆ ಆಸರೆಯಾಗಲಿವೆ,” ಎಂದು ತಿಳಿಸಿದರು.

    ಶಾಸಕ ಕೆ.ಎನ್. ರಾಜಣ್ಣ ಅವರು ಮಾತನಾಡಿ, ಈ ಯೋಜನೆಗಳಿಂದ ಮಧುಗಿರಿ ಭಾಗದ ರೈತರ ಕೃಷಿ ಚಟುವಟಿಕೆಗಳಿಗೆ ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀ ಬಿ.ಕೆ. ಪವಿತ್ರ, ತುಮಕೂರು ಜಿಲ್ಲಾ ಪಂಚಾಯಿತಿಯ ಸಿಇಓ ಶ್ರೀ ಪ್ರಭು.ಜಿ, ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

  1. Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *