ಬಳ್ಳಾರಿ ಫೈರಿಂಗ್: ಹೊಸ ಬಾಂಬ್ ಸಿಡಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಹೊಸ ವರ್ಷದ ದಿನದಂದು ಬಳ್ಳಾರಿಯಲ್ಲಿ ನಡೆದ ಗುಂಡಿನ ದಾಳಿ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅತ್ಯಂತ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ.

“ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ದೀರ್ಘಕಾಲ ಆಡಳಿತ ನಡೆಸಿರುವುದಾಗಿ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ ರಾಜ್ಯದ ಬಳ್ಳಾರಿ ಘಟನೆ ಬಗ್ಗೆ ಹರಿಕೆ ಉತ್ತರ ಕೊಡುವುದನ್ನು ಕಟುವಾಗಿ ಟೀಕಿಸಿದರು” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಹೇಳಿಕೆಗಳಿಗೆ ತಿರುಗೇಟು: ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದರೂ ಮುಖ್ಯಮಂತ್ರಿಯವರು ನೀಡುತ್ತಿರುವ ಬೇಜವಾಬ್ದಾರಿ ಪತ್ರಿಕಾ ಹೇಳಿಕೆಗಳನ್ನು ಉಲ್ಲೇಖಿಸಿ ಕುಮಾರಸ್ವಾಮಿ ಅವರು ತೀವ್ರವಾಗಿ ಚಾಟಿ ಬೀಸಿದರು.

ಡಿ.ಕೆ. ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಕಿಡಿ: ಬಳ್ಳಾರಿಯ ಘರ್ಷಣೆಗಳ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿದ್ದ ಹೇಳಿಕೆಯನ್ನು ಕಟುವಾಗಿ ಟೀಕಿಸಿದ ಹೆಚ್.ಡಿ. ಕುಮಾರಸ್ವಾಮಿ, “ಜನಾರ್ಧನ ರೆಡ್ಡಿ ಬಳ್ಳಾರಿಗೆ ಬಂದ ಮೇಲೆಯೇ ಘರ್ಷಣೆಗಳು ಹೆಚ್ಚಾಗಿವೆ ಎಂದು ಡಿ.ಕೆ. ಶಿವಕುಮಾರ್ ಹೇಳುತ್ತಿದ್ದಾರೆ. ಆದರೆ, ರೆಡ್ಡಿಯವರು ಬಳ್ಳಾರಿಗೆ ಬಂದು ಈಗಾಗಲೇ ಒಂದೂವರೆ ವರ್ಷ ಕಳೆದಿದೆ. ಇಷ್ಟು ದಿನಗಳ ನಂತರ ಇಂತಹ ಬಾಲಿಶ ಹೇಳಿಕೆ ನೀಡುವುದು ನಿಮ್ಮ ಉಪಮುಖ್ಯಮಂತ್ರಿ ಸ್ಥಾನಕ್ಕೆ ಶೋಭೆ ತರುವುದಿಲ್ಲ,” ಎಂದು ಕಿವಿಹಿಂಡಿದರು.

ತಮ್ಮ ಸರ್ಕಾರದ ವೈಫಲ್ಯವನ್ನು ಮುಚ್ಚಿಕೊಳ್ಳಲು ಬೇರೆಯವರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಬೇಡಿ ಎಂದು ಅವರು ಇದೇ ಸಂದರ್ಭದಲ್ಲಿ ಎಚ್ಚರಿಸಿದರು.

ಗೃಹ ಸಚಿವರ ಕರ್ತವ್ಯ ಲೋಪ: “ಗೃಹ ಸಚಿವರು ಕೇವಲ ಮುಖ್ಯಮಂತ್ರಿಯವರ ತುಷ್ಟೀಕರಣದ ಮಾತುಗಳನ್ನೇ ಪಾಲಿಸುತ್ತಿದ್ದಾರೆ. ಪೊಲೀಸ್ ಇಲಾಖೆಯು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಬಿಡದೆ, ಕೇವಲ ಸಿಎಂ ಆಶಯದಂತೆ ನಡೆಯುತ್ತಿರುವುದು ಇಲಾಖೆಯ ಕರ್ತವ್ಯ ಲೋಪಕ್ಕೆ ಸಾಕ್ಷಿ,” ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಸುದೀರ್ಘ ಆಡಳಿತದ ದಾಖಲೆಯನ್ನು ಮುರಿಯುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅರಸು ಅವರ ಕಾಲದ ಉತ್ತಮ ಆಡಳಿತಕ್ಕೂ ಇಂದಿನ ಅದಕ್ಷ ಆಡಳಿತಕ್ಕೂ ಹೋಲಿಕೆಯೇ ಇಲ್ಲ ಎಂದು ಟೀಕಿಸಿದರು.

“ಅರಸು ಎಲ್ಲಿ? ಇವರೆಲ್ಲಿ?”

ಸಿದ್ದರಾಮಯ್ಯ ಅವರ ಆಡಳಿತವನ್ನು ಕಟುವಾಗಿ ಟೀಕಿಸಿದ ಕುಮಾರಸ್ವಾಮಿ ಅವರು:

ಅರಸು ಅವರೊಂದಿಗೆ ಹೋಲಿಕೆ ಬೇಡ: “ದೇವರಾಜ ಅರಸು ಅವರಂತಹ ಮಹಾನ್ ನಾಯಕರ ದಾಖಲೆ ಮುರಿಯುವ ಮಾತಾಡುತ್ತಿದ್ದಾರೆ. ಅರಸು ಅವರ ಆಡಳಿತಕ್ಕೂ ಇವರ ಆಡಳಿತಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ರಾಜ್ಯದಲ್ಲಿ ಇವರೇ ಕಾಂಗ್ರೆಸ್ ಪಕ್ಷದ ಕೊನೆಯ ಮುಖ್ಯಮಂತ್ರಿ ಆಗಲಿದ್ದಾರೆ,” ಎಂದು ಭವಿಷ್ಯ ನುಡಿದರು.

ಕೆಟ್ಟ ಆಡಳಿತದ ನಿದರ್ಶನ: ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯದಲ್ಲಿ ಭ್ರಷ್ಟಾಚಾರ, ಕೊಲೆ, ಸುಲಿಗೆ, ಮತ್ತು ಡ್ರಗ್ಸ್ ಮಾಫಿಯಾ ಮಿತಿಮೀರಿದೆ. ಸಿದ್ದರಾಮಯ್ಯ ಅವರು ಕೇವಲ ದಾಖಲೆಗೋಸ್ಕರ ಆಡಳಿತ ನಡೆಸುತ್ತಿದ್ದಾರೆಯೇ ಹೊರತು ಜನಪರ ಕೆಲಸಗಳಿಗಾಗಿ ಅಲ್ಲ ಎಂದು ದೂರಿದರು.

ಅಧಿಕಾರಿಗಳ ಸ್ಥಿತಿ: ಇವರ ಆಡಳಿತದಲ್ಲಿ ಅಧಿಕಾರಿಗಳು ಗುಲಾಮರಂತೆ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬ್ಯಾಟರಿ ಹಾಕಿ ಹುಡುಕಿದರೂ ಒಬ್ಬ ಪ್ರಾಮಾಣಿಕ ಅಧಿಕಾರಿ ಸಿಗದಂತಹ ವಾತಾವರಣ ನಿರ್ಮಾಣವಾಗಿದೆ ಎಂದರು.

ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದ ಅವರು, “ಮುಖ್ಯಮಂತ್ರಿ ಮತ್ತು ಗೃಹ ಸಚಿವರು ನಕಲಿಶ್ಯಾಮರಂತೆ ವರ್ತಿಸುತ್ತಿದ್ದಾರೆ. ಯಾವುದೇ ಘಟನೆ ನಡೆದರೂ ಎಸ್‌ಐಟಿ (SIT) ರಚಿಸಿ ಕೈತೊಳೆದುಕೊಳ್ಳುವುದು ಇವರಿಗೆ ಅಭ್ಯಾಸವಾಗಿದೆ. ಗೃಹ ಸಚಿವರಿಗೆ ಅಧಿಕಾರದ ಗತ್ತೇ ಗೊತ್ತಿಲ್ಲ,” ಎಂದು ಕಿಡಿಕಾರಿದರು.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *