ಅಕ್ರಮ ವಲಸಿಗರಿಗೆ ಬೆಣ್ಣೆ, ಕನ್ನಡಿಗರಿಗೆ ಸುಣ್ಣ – ಸಿ.ಟಿ. ರವಿ

ಬೆಂಗಳೂರು: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಕೋಗಿಲು ಬಡಾವಣೆಯ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಿರುವುದನ್ನು ವಿರೋಧಿಸಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರು ಉತ್ತರ ಜಿಲ್ಲೆಯ ಶ್ರೀನಿವಾಸ ಗಾರ್ಡನ್‌ನಲ್ಲಿ “ಕೋಗಿಲು ಉಳಿಸಿ, ಅಕ್ರಮ ವಲಸಿಗರನ್ನು ತೊಲಗಿಸಿ” ಎಂಬ ಬೃಹತ್ ಪ್ರತಿಭಟನಾ ಕಾರ್ಯಕ್ರಮ ನಡೆಯಿತು.

ಕನ್ನಡಿಗರಿಗೆ ಅನ್ಯಾಯ, ಅಕ್ರಮ ವಲಸಿಗರಿಗೆ ಮಣೆ: ಸರ್ಕಾರದ ವಿರುದ್ಧ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ.ಟಿ. ರವಿ ಆಕ್ರೋಶ

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ರಾಜ್ಯ ಸರ್ಕಾರದ ದ್ವಂದ್ವ ನೀತಿಯನ್ನು ಕಟುವಾಗಿ ಟೀಕಿಸಿದರು. ಕಳೆದ 30 ವರ್ಷಗಳಿಂದ ಸಾವಿರಾರು ನಿವೇಶನ ರಹಿತ ಕನ್ನಡಿಗರು ವಸತಿಗಾಗಿ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಆದರೆ, ಈ ಅರ್ಹ ಫಲಾನುಭವಿಗಳಿಗೆ ನ್ಯಾಯ ನೀಡದ ಕಾಂಗ್ರೆಸ್ ಸರ್ಕಾರ, ಈಗ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ನಿವಾಸಿಗಳಿಗೆ ಸರ್ಕಾರಿ ಜಾಗವನ್ನು ಹಂಚಿಕೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡಿಗರ ಬಗ್ಗೆ ಮರುಕವಿಲ್ಲ. ಕನ್ನಡಿಗರ ಸ್ವಾಭಿಮಾನವನ್ನು ಒತ್ತೆ ಇಟ್ಟು, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಬೆಂಗಳೂರನ್ನು ಬಲಿ ಕೊಡುತ್ತಿದೆ. ಅಕ್ರಮ ವಲಸಿಗರಿಗೆ ಬೆಣ್ಣೆ, ಕನ್ನಡಿಗರಿಗೆ ಸುಣ್ಣ ಎಂಬಂತಾಗಿದೆ ಸರ್ಕಾರದ ನೀತಿ,” ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ಹಂಚಿಕೆಯಾಗಿರುವ ನಿವೇಶನಗಳನ್ನು ತಕ್ಷಣ ರದ್ದುಗೊಳಿಸಬೇಕು.

ಬೆಂಗಳೂರಿನಲ್ಲಿ ಬೀಡುಬಿಟ್ಟಿರುವ ಅಕ್ರಮ ಬಾಂಗ್ಲಾ ವಲಸಿಗರನ್ನು ಕೂಡಲೇ ಪತ್ತೆ ಹಚ್ಚಿ ಗಡಿಪಾರು ಮಾಡಬೇಕು.

ವರ್ಷಗಳಿಂದ ವಸತಿಗಾಗಿ ಕಾಯುತ್ತಿರುವ ಸ್ಥಳೀಯ ನಿವೇಶನ ರಹಿತರಿಗೆ ಆದ್ಯತೆ ನೀಡಬೇಕು.

ಈ ಬೃಹತ್ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಶ್ರೀ ಎನ್. ರವಿಕುಮಾರ್ ಪಾಲ್ಗೊಂಡಿದ್ದರು. ಇವರೊಂದಿಗೆ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ. ಅಶ್ವಥ್ ನಾರಾಯಣ್, ಶಾಸಕರಾದ ಶ್ರೀ ಎಸ್.ಆರ್. ವಿಶ್ವನಾಥ್, ಶ್ರೀ ಕೆ. ಗೋಪಾಲಯ್ಯ, ಶ್ರೀ ಸಿ.ಕೆ. ರಾಮಮೂರ್ತಿ, ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ತಮ್ಮೇಶ್ ಗೌಡ ಹೆಚ್. ಸಿ, ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಭಾರತಿ ಶೆಟ್ಟಿ, ಸತ್ಯಶೋಧನಾ ಸಮಿತಿಯ ಸದಸ್ಯರು ಹಾಗೂ ಪಕ್ಷದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *