ಜಮೀರ್ ಅಹ್ಮದ್‌ಗೆ ಐಟಿ ಸಂಕಷ್ಟ: ₹25 ಲಕ್ಷ ನಗದು ಹಂಚಿಕೆ ಪ್ರಕರಣದ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು

ಬಳ್ಳಾರಿ/ಬೆಂಗಳೂರು: ಬಳ್ಳಾರಿ ಬ್ಯಾನರ್ ಗಲಭೆಯಲ್ಲಿ ಮೃತಪಟ್ಟ ರಾಜಶೇಖರ್ ರೆಡ್ಡಿ ಅವರ ಕುಟುಂಬಕ್ಕೆ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರು ನಿಯಮ ಬಾಹಿರವಾಗಿ ₹25 ಲಕ್ಷ ನಗದು ನೀಡಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಸಂಬಂಧ ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೇಸರಿ ಪಡೆ ಒತ್ತಾಯಿಸಿದೆ.

ಹಣದ ಚೀಲ ಹಸ್ತಾಂತರ: ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ

ಬಿಜೆಪಿ ವಕ್ತಾರ ಪ್ರಕಾಶ್ ಶೇಷಾರಾಘವಾಚಾರ್ ಅವರು ಫೇಸ್‌ಬುಕ್‌ನಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದು, ಸಚಿವ ಜಮೀರ್ ಅಹ್ಮದ್ ಅವರು ಮೃತರ ಕುಟುಂಬಕ್ಕೆ ಹಣವಿತ್ತು ಎನ್ನಲಾದ ಚೀಲವನ್ನು ಹಸ್ತಾಂತರಿಸುತ್ತಿರುವುದು ಕಂಡುಬಂದಿದೆ.

ಮೂಲದ ಪ್ರಶ್ನೆ: ಇಷ್ಟೊಂದು ದೊಡ್ಡ ಮೊತ್ತದ ನಗದು ಸಚಿವರಿಗೆ ಎಲ್ಲಿಂದ ಬಂತು ಎಂಬ ಬಗ್ಗೆಯೂ ತನಿಖೆಯಾಗಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಕಾನೂನು ಉಲ್ಲಂಘನೆ ಆರೋಪ: “ಕಾನೂನಿನ ಪ್ರಕಾರ ₹20,000 ಕ್ಕಿಂತ ಹೆಚ್ಚಿನ ನಗದು ವಹಿವಾಟು ನಡೆಸುವಂತಿಲ್ಲ. ಆದರೆ ಸಚಿವರು ರಾಜಶೇಖರ್ ರೆಡ್ಡಿ ಅವರ ಕುಟುಂಬಕ್ಕೆ ₹25 ಲಕ್ಷ ನಗದನ್ನು ನೇರವಾಗಿ ನೀಡುವ ಮೂಲಕ ಅಪರಾಧ ಎಸಗಿದ್ದಾರೆ,” ಎಂದು ಬಿಜೆಪಿ ವಕ್ತಾರರು ಆರೋಪಿಸಿದ್ದಾರೆ.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *