ಜೆಪಿ ಭವನದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಾಗಾರ: ನಿಖರ ಪಟ್ಟಿಯಿಂದಲೇ ನ್ಯಾಯಯುತ ಚುನಾವಣೆ ಸಾಧ್ಯ – ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: “ನಿಖರವಾದ ಮತದಾರರ ಪಟ್ಟಿ ಇಲ್ಲದೆ ನ್ಯಾಯಯುತ ಚುನಾವಣೆಗಳು ಅಸಾಧ್ಯ. ಪ್ರಜಾಪ್ರಭುತ್ವದ ಯಶಸ್ಸಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SSR) ಅತ್ಯಗತ್ಯ,” ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಬೆಂಗಳೂರಿನ ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ನಡೆದ 50 ವಿಧಾನಸಭಾ ಕ್ಷೇತ್ರಗಳ BLA-1 (ಬೂತ್ ಮಟ್ಟದ ಏಜೆಂಟ್) ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ 2ನೇ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಒಬ್ಬ ವ್ಯಕ್ತಿ, ಒಂದು ಮತ’ ತತ್ವಕ್ಕೆ ಬಲ

ಈ ಕಾರ್ಯಾಗಾರವನ್ನು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜೆ.ಕೆ. ಕೃಷ್ಣಾರೆಡ್ಡಿ ಹಾಗೂ ನಿಖಿಲ್ ಕುಮಾರಸ್ವಾಮಿ ಜಂಟಿಯಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “SIR (ವಿಶೇಷ ಸಮಗ್ರ ಪರಿಷ್ಕರಣೆ) ಮೂಲಕ ‘ಒಬ್ಬ ವ್ಯಕ್ತಿ, ಒಂದು ಮತ’ ಎಂಬ ಪ್ರಜಾಪ್ರಭುತ್ವದ ಮೂಲ ತತ್ವವನ್ನು ಬಲಪಡಿಸಬಹುದು. ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಸರಿಪಡಿಸುವುದು ಪ್ರತಿಯೊಬ್ಬ ಕಾರ್ಯಕರ್ತನ ಜವಾಬ್ದಾರಿ,” ಎಂದು ಕರೆ ನೀಡಿದರು.

BLAಗಳಿಗೆ ಪಿಪಿಟಿ ಮೂಲಕ ತರಬೇತಿ

ಕಾರ್ಯಾಗಾರದಲ್ಲಿ ಚುನಾವಣಾ ಆಯೋಗವು ಕೈಗೊಳ್ಳಲಿರುವ ಕಾರ್ಯಗಳು ಮತ್ತು ರಾಜಕೀಯ ಪಕ್ಷವಾಗಿ ಪಾಲಿಸಬೇಕಾದ ನಿಯಮಗಳ ಬಗ್ಗೆ ಸವಿಸ್ತಾರವಾಗಿ ಚರ್ಚಿಸಲಾಯಿತು. ಮುಖ್ಯವಾಗಿ ಬೂತ್ ಮಟ್ಟದ ಏಜೆಂಟ್‌ಗಳು (BLA) ನಿರ್ವಹಿಸಬೇಕಾದ ಜವಾಬ್ದಾರಿಗಳ ಬಗ್ಗೆ ಪಿಪಿಟಿ (PPT) ಮೂಲಕ ತರಬೇತಿ ನೀಡಲಾಯಿತು.

ಮಾಜಿ ಎಂಎಲ್‌ಸಿ: ಕೆ.ಎ. ತಿಪ್ಪೇಸ್ವಾಮಿ, ಶಾಸಕರು: ಶಾರದಾ ಪೂರ್ಯನಾಯ್ಕ, ರಾಜುಗೌಡ ಪಾಟೀಲ್, ಮಾಜಿ ಶಾಸಕರು: ರಾಜಾ ವೆಂಕಟಪ್ಪ ನಾಯಕ್, ಕೆ.ಬಿ. ಪ್ರಸನ್ನ ಕುಮಾರ್, ಕೆ.ಎಸ್. ಲಿಂಗೇಶ್, ದೇವಾನಂದ ಚವ್ಹಾಣ್, ಕೆ. ಮಹದೇವ್, ಘಟಕದ ಅಧ್ಯಕ್ಷರು: ರಶ್ಮಿ ರಾಮೇಗೌಡ (ಮಹಿಳಾ ಘಟಕ), ಹೆಚ್.ಎಂ. ರಮೇಶ್ ಗೌಡ (ಬೆಂಗಳೂರು ನಗರ ಅಧ್ಯಕ್ಷರು), ಹಾಗೂ ಪ್ರಮುಖರಾದ ಶಾರದಾ ಅಪ್ಪಾಜಿ, ವಿವಿಧ ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಬೂತ್ ಅಧ್ಯಕ್ಷರು ಭಾಗವಹಿಸಿದ್ದರು.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *