ನಂಜನಗೂಡು: ವಿವಿಧ ಜಯಂತಿ ಹಾಗೂ ಗಣರಾಜ್ಯೋತ್ಸವ ಆಚರಣೆ ಕುರಿತು ಶಾಸಕ ದರ್ಶನ್ ಧ್ರುವನಾರಾಯಣ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ನಂಜನಗೂಡು: ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಆಯೋಜಿಸಲಾಗುವ ವಿವಿಧ ಮಹಾಪುರುಷರ ಜಯಂತಿಗಳು ಹಾಗೂ ಗಣರಾಜ್ಯೋತ್ಸವ ಕಾರ್ಯಕ್ರಮಗಳ ಯಶಸ್ವಿ ಆಚರಣೆ ಕುರಿತು ಶಾಸಕ ದರ್ಶನ್ ಧ್ರುವನಾರಾಯಣ ಅವರ ಅಧ್ಯಕ್ಷತೆಯಲ್ಲಿ ಇಂದು ಪೂರ್ವಭಾವಿ ಸಭೆ ಜರುಗಿತು.

ಸಭೆಯಲ್ಲಿ ಪ್ರಮುಖವಾಗಿ ಈ ಕೆಳಗಿನ ಕಾರ್ಯಕ್ರಮಗಳ ರೂಪುರೇಷೆ ಮತ್ತು ಸಿದ್ಧತೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ತೀರ್ಮಾನಗಳನ್ನು ಕೈಗೊಳ್ಳಲಾಯಿತು:

  • ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ
  • ಶ್ರೀ ಮಹಾಯೋಗಿ ವೇಮನ ಜಯಂತಿ
  • ಶ್ರೀ ಅಂಬಿಗರ ಚೌಡಯ್ಯ ಜಯಂತಿ
  • ಶ್ರೀ ಸವಿತಾ ಮಹರ್ಷಿ ಜಯಂತಿ
  • ಶ್ರೀ ಮಡಿವಾಳ ಮಾಚಿ ದೇವರ ಜಯಂತಿ
  • ಗಣರಾಜ್ಯೋತ್ಸವ ಕಾರ್ಯಕ್ರಮ

ಸಭೆಯ ಮುಖ್ಯಾಂಶಗಳು:

ಶಾಸಕ ದರ್ಶನ್ ಧ್ರುವನಾರಾಯಣ ಅವರು ಮಾತನಾಡಿ, “ಮಹಾನ್ ಪುರುಷರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಅವರ ತತ್ವ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು. ಕಾರ್ಯಕ್ರಮಗಳಲ್ಲಿ ಯಾವುದೇ ಲೋಪದೋಷಗಳಾಗದಂತೆ ಅಧಿಕಾರಿಗಳು ಮತ್ತು ವಿವಿಧ ಸಂಘಟನೆಗಳ ಮುಖಂಡರು ಸಮನ್ವಯತೆಯಿಂದ ಕೆಲಸ ಮಾಡಬೇಕು,” ಎಂದು ಸೂಚನೆ ನೀಡಿದರು. ಗಣರಾಜ್ಯೋತ್ಸವವನ್ನು ತಾಲ್ಲೂಕು ಮಟ್ಟದಲ್ಲಿ ಅತ್ಯಂತ ಸಂಭ್ರಮದಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ತಹಸೀಲ್ದಾರ್ ಶಿವಕುಮಾರ್, ನಗರಸಭೆ ಸದಸ್ಯರುಗಳು, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಮುದಾಯಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

  • Related Posts

    ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಎಚ್ಚರವಹಿಸಿ: ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ

    ಕಲಬುರಗಿ: ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಮುಂಬರುವ ಎರಡು ತಿಂಗಳುಗಳಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.Contentsನೀರಿನ ಸರಬರಾಜಿಗೆ ಆದ್ಯತೆಜೆಜೆಎಂ…

    Continue reading
    ಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

    ಮೈಸೂರು: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಸನ್ನಿಧಿಗೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.Contentsನೀರಿನ ಸರಬರಾಜಿಗೆ ಆದ್ಯತೆಜೆಜೆಎಂ ಕಾಮಗಾರಿ ಹಾಗೂ ವಿದ್ಯುತ್ ಸಂಪರ್ಕಸ್ವಚ್ಛತೆ…

    Continue reading

    Leave a Reply

    Your email address will not be published. Required fields are marked *