ಯಡ್ರಾಮಿಯಲ್ಲಿ ನಾಳೆ ಅಭಿವೃದ್ಧಿ ಹಬ್ಬ: ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಆಗಮನ – ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಸಿದ್ಧತಾ ಪರಿಶೀಲನೆ

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಯಡ್ರಾಮಿಯಲ್ಲಿ ನಾಳೆ (ಜನೆವರಿ 12, ಸೋಮವಾರ) ನಡೆಯಲಿರುವ ಬಹುನಿರೀಕ್ಷಿತ ‘ಪ್ರಜಾಸೌಧ’ಗಳ ಅಡಿಗಲ್ಲು ಸಮಾರಂಭ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನಾ ಕಾರ್ಯಕ್ರಮದ ಪೂರ್ವಸಿದ್ಧತೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಅಧ್ಯಕ್ಷರಾದ ಡಾ. ಅಜಯ್ ಧರಂ ಸಿಂಗ್ ಇಂದು ಜಂಟಿಯಾಗಿ ಪರಿಶೀಲಿಸಿದರು.

ಗಣ್ಯಾತಿಗಣ್ಯರ ಆಗಮನ

ನಾಳೆಯ ಐತಿಹಾಸಿಕ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಹಲವು ಸಚಿವರು ಹಾಗೂ ರಾಜ್ಯ ಮಟ್ಟದ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಏನೇನು ಕಾಮಗಾರಿಗಳ ಚಾಲನೆ?

  • ಪ್ರಜಾಸೌಧಗಳ ಅಡಿಗಲ್ಲು: ಸಾರ್ವಜನಿಕರಿಗೆ ಆಡಳಿತಾತ್ಮಕ ಸೌಲಭ್ಯಗಳನ್ನು ಒಂದೇ ಸೂರಿನಡಿ ಒದಗಿಸಲು ನಿರ್ಮಿಸುತ್ತಿರುವ ‘ಪ್ರಜಾಸೌಧ’ಗಳ ಅಡಿಗಲ್ಲು ಸಮಾರಂಭ.
  • ಕೆಪಿಎಸ್ ಶಾಲೆಗಳು: ಗುಣಮಟ್ಟದ ಶಿಕ್ಷಣಕ್ಕಾಗಿ ಮಂಜೂರಾಗಿರುವ ನೂತನ ಕರ್ನಾಟಕ ಪಬ್ಲಿಕ್ ಶಾಲೆಗಳ (KPS) ಉದ್ಘಾಟನೆ.
  • ವಿದಿಧ ಕಾಮಗಾರಿಗಳು: ತಾಲ್ಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಹಲವು ಶಂಕುಸ್ಥಾಪನೆಗಳು.

ಸಮಗ್ರ ಸಿದ್ಧತೆಗಳ ಪರಿಶೀಲನೆ

ಸಚಿವರು ಮತ್ತು ಕೆಕೆಆರ್‌ಡಿಬಿ ಅಧ್ಯಕ್ಷರು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ, ವೇದಿಕೆ ವ್ಯವಸ್ಥೆ, ವಿಐಪಿ ಮತ್ತು ಸಾರ್ವಜನಿಕ ವಾಹನಗಳ ಪಾರ್ಕಿಂಗ್, ಹೆಲಿಪ್ಯಾಡ್ ಸೌಲಭ್ಯ, ಊಟದ ವ್ಯವಸ್ಥೆ ಹಾಗೂ ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದರು.

ಸಾರಿಗೆ ವ್ಯವಸ್ಥೆ ಮತ್ತು ಅಧಿಕಾರಿಗಳಿಗೆ ಸೂಚನೆ

ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (KKRTC) ವತಿಯಿಂದ 100 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಬಸ್ ನಿಲುಗಡೆ ಸ್ಥಳಗಳಿಗೆ ಭೇಟಿ ನೀಡಿದ ಸಚಿವರು, ಸಂಚಾರ ನಿರ್ವಹಣೆಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಗಣ್ಯರ ಉಪಸ್ಥಿತಿ: ಈ ಸಂದರ್ಭದಲ್ಲಿ ಶಾಸಕ ಅಲ್ಲಂ ಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಹಾಗೂ ಜೇವರ್ಗಿ ತಾಲ್ಲೂಕಿನ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಈ ಬೃಹತ್ ಸಮಾವೇಶವು ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೊಸ ವೇಗ ನೀಡುವ ನಿರೀಕ್ಷೆಯಿದೆ.

  • Related Posts

    ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಎಚ್ಚರವಹಿಸಿ: ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ

    ಕಲಬುರಗಿ: ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಮುಂಬರುವ ಎರಡು ತಿಂಗಳುಗಳಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.Contentsನೀರಿನ ಸರಬರಾಜಿಗೆ ಆದ್ಯತೆಜೆಜೆಎಂ…

    Continue reading
    ಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

    ಮೈಸೂರು: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಸನ್ನಿಧಿಗೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.Contentsನೀರಿನ ಸರಬರಾಜಿಗೆ ಆದ್ಯತೆಜೆಜೆಎಂ ಕಾಮಗಾರಿ ಹಾಗೂ ವಿದ್ಯುತ್ ಸಂಪರ್ಕಸ್ವಚ್ಛತೆ…

    Continue reading

    Leave a Reply

    Your email address will not be published. Required fields are marked *