ಹುಬ್ಬಳ್ಳಿ: ಸ್ವಾಮಿ ವಿವೇಕಾನಂದರ ಜಯಂತಿ – ಉಣಕಲ್‌ ಕೆರೆಯಲ್ಲಿ ವಿವೇಕಾನಂದರ ಪ್ರತಿಮೆಗೆ ಶೋಭಾ ಕರಂದ್ಲಾಜೆ ಗೌರವ ನಮನ

ಹುಬ್ಬಳ್ಳಿ: ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಜಯಂತಿಯ (ರಾಷ್ಟ್ರೀಯ ಯುವ ದಿನ) ಅಂಗವಾಗಿ ಹುಬ್ಬಳ್ಳಿಯ ಪ್ರಸಿದ್ಧ ಉಣಕಲ್‌ ಕೆರೆಗೆ ಭೇಟಿ ನೀಡಿದ ಕೇಂದ್ರ ಸಚಿವೆ ಶ್ರೀಮತಿ ಶೋಭಾ ಕರಂದ್ಲಾಜೆ ಅವರು, ಅಲ್ಲಿನ ವಿವೇಕಾನಂದರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಕ್ತಿಯ ಗೌರವ ನಮನ ಸಲ್ಲಿಸಿದರು.

ಯುವಶಕ್ತಿಗೆ ವಿವೇಕಾನಂದರೇ ಸ್ಫೂರ್ತಿ

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ವಿಶ್ವಕ್ಕೆ ಭಾರತದ ಅಧ್ಯಾತ್ಮ ಮತ್ತು ಸಂಸ್ಕೃತಿಯ ಶಕ್ತಿಯನ್ನು ಪರಿಚಯಿಸಿದ ಮಹಾನ್ ಚೇತನ ಸ್ವಾಮಿ ವಿವೇಕಾನಂದರು. ಅವರ ವಿಚಾರಧಾರೆಗಳು ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಿದ್ದು, ದೇಶದ ಪ್ರಗತಿಯಲ್ಲಿ ಯುವಶಕ್ತಿ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು,” ಎಂದು ಕರೆ ನೀಡಿದರು.

ಶ್ರೀ ಮಹೇಶ್‌ ಟೆಂಗಿನಕಾಯಿ: ಶಾಸಕರು, ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರ, ಶ್ರೀಮತಿ ಜ್ಯೋತಿ ಪಾಟೀಲ್‌: ಮಹಾಪೌರರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಶ್ರೀ ಸಂತೋಷ್‌ ಚೌಹಾಣ್‌: ಉಪ ಮಹಾಪೌರರು, ಶ್ರೀ ನಿಂಗಪ್ಪ ಸುತ್ತಗಟ್ಟಿ: ಅಧ್ಯಕ್ಷರು, ಧಾರವಾಡ ಜಿಲ್ಲಾ ಬಿಜೆಪಿ, ಶ್ರೀ ತಿಪ್ಪಣ್ಣ ಮಜ್ಜಿಗೆ: ಅಧ್ಯಕ್ಷರು, ಹುಬ್ಬಳ್ಳಿ-ಧಾರವಾಡ ಮಹಾನಗರ ಬಿಜೆಪಿ, ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರು ಹಾಗೂ ಜನಪ್ರತಿನಿಧಿಗಳು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲದೆ, ಪ್ರಮುಖ ಮುಖಂಡರುಗಳಾದ ಶ್ರೀ ರಾಜಣ್ಣ ಕೊರವಿ, ಶ್ರೀ ಮಲ್ಲಿಕಾರ್ಜುನ್‌ ಗುಂಡೂರ್‌, ಶ್ರೀ ಉಮೇಶ್‌ ಗೌಡ ಕೌಜಗಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ವಿವೇಕಾನಂದರ ಜಯಂತಿಯನ್ನು ಸಂಭ್ರಮದಿಂದ ಆಚರಿಸಿದರು.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *