ಬೀದರ್‌ನಲ್ಲಿ ಜನವರಿ 24ರಿಂದ 26ರವರೆಗೆ ರಾಜ್ಯ ಮಟ್ಟದ ‘ವೀರಲೋಕ ಪುಸ್ತಕ ಸಂತೆ’: ಲೋಗೋ ಬಿಡುಗಡೆ ಮಾಡಿದ ಸಚಿವ ಈಶ್ವರ ಖಂಡ್ರೆ

ಬೀದರ್: ಭಾಲ್ಕಿಯ ಹಿರೇಮಠ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಜನೆವರಿ 24, 25 ಮತ್ತು 26 ರಂದು ಬೀದರ್ ನಗರದ ಸಾಯಿ ಸ್ಕೂಲ್ ಮೈದಾನದಲ್ಲಿ ರಾಜ್ಯ ಮಟ್ಟದ ‘ವೀರಲೋಕ ಪುಸ್ತಕ ಸಂತೆ’ ಆಯೋಜಿಸಲಾಗಿದೆ ಎಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ, ಪುಸ್ತಕ ಸಂತೆಯ ಅಧಿಕೃತ ಲೋಗೋ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಜ್ಞಾನದ ದಾಸೋಹಕ್ಕೆ ಪುಸ್ತಕ ಸಂತೆ ವೇದಿಕೆ

“ಬೀದರ್ ಜಿಲ್ಲೆಯಲ್ಲಿ ಸಾಹಿತ್ಯಿಕ ಚಟುವಟಿಕೆಗಳನ್ನು ಉತ್ತೇಜಿಸಲು ಮತ್ತು ಓದುಗರಿಗೆ ಒಂದೇ ಸೂರಿನಡಿ ಲಕ್ಷಾಂತರ ಪುಸ್ತಕಗಳನ್ನು ಲಭ್ಯವಾಗಿಸಲು ಈ ಪುಸ್ತಕ ಸಂತೆಯನ್ನು ಆಯೋಜಿಸಲಾಗಿದೆ. ಮೂರು ದಿನಗಳ ಕಾಲ ನಡೆಯುವ ಈ ಜ್ಞಾನದ ಹಬ್ಬಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಪ್ರಕಾಶಕರು ಮತ್ತು ಸಾಹಿತ್ಯ ಪ್ರೇಮಿಗಳು ಆಗಮಿಸಲಿದ್ದಾರೆ,” ಎಂದು ಸಚಿವರು ವಿವರಿಸಿದರು.

ಧಾರ್ಮಿಕ ಹಾಗೂ ರಾಜಕೀಯ ಗಣ್ಯರ ಸಾಥ್

ಪತ್ರಿಕಾಗೋಷ್ಠಿಯಲ್ಲಿ ಭಾಲ್ಕಿ ಹಿರೇಮಠದ ಪೂಜ್ಯ ಶ್ರೀ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಉಪಸ್ಥಿತರಿದ್ದು ಆಶೀರ್ವಚನ ನೀಡಿದರು. ಪುಸ್ತಕ ಸಂತೆಯಂತಹ ಕಾರ್ಯಕ್ರಮಗಳು ಯುವ ಪೀಳಿಗೆಯಲ್ಲಿ ಓದಿನ ಹವ್ಯಾಸ ಬೆಳೆಸಲು ಪೂರಕವಾಗಿವೆ ಎಂದು ಪೂಜ್ಯರು ಅಭಿಪ್ರಾಯಪಟ್ಟರು.

ಡಾ. ಚಂದ್ರಶೇಖರ ಪಾಟೀಲ: ವಿಧಾನ ಪರಿಷತ್ ಸದಸ್ಯರು, ಶ್ರೀ ಭೀಮರಾವ ಪಾಟೀಲ: ವಿಧಾನ ಪರಿಷತ್ ಸದಸ್ಯರು, ಶ್ರೀ ಸುರೇಶ ಚನ್ನಶೆಟ್ಟಿ: ಜಿಲ್ಲಾಧ್ಯಕ್ಷರು, ಕಸಾಪ ಬೀದರ್, ಶ್ರೀ ಶಿವಶಂಕರ ಟೋಕರೆ: ಕೋಶಾಧ್ಯಕ್ಷರು, ಕಸಾಪ, ಶ್ರೀ ವೀರಪಾಕ್ಷ ಗಾದಗಿ: ವೀರಲೋಕದ, ಮುಖ್ಯಸ್ಥರು ಹಾಗೂ ಯುವ ಉತ್ಸಾಹಿಗಳು ಉಪಸ್ಥಿತರಿದ್ದ ಪ್ರಮುಖರು

ಬೀದರ್ ಜಿಲ್ಲೆಯ ಸಾಹಿತ್ಯ ಇತಿಹಾಸದಲ್ಲಿ ಈ ಪುಸ್ತಕ ಸಂತೆ ಹೊಸ ಮೈಲಿಗಲ್ಲಾಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪುಸ್ತಕ ಪ್ರೇಮಿಗಳು ಭಾಗವಹಿಸುವಂತೆ ಸಮಿತಿ ಮನವಿ ಮಾಡಿದೆ.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *