ಚೀನಾ ಮಾಂಜಾ(ದಾರ)ಗೆ ಬಲಿಯಾದ ಬೈಕ್ ಸವಾರ: ಮೃತರ ಕುಟುಂಬಕ್ಕೆ ಸಚಿವ ಈಶ್ವರ ಖಂಡ್ರೆ ಸಾಂತ್ವನ

ಬೀದರ್: ಮಕರ ಸಂಕ್ರಾಂತಿ ಹಬ್ಬದ ಸಂಭ್ರಮದ ನಡುವೆಯೇ ನಿಷೇಧಿತ ಚೀನಾ ಮಾಂಜಾ ದಾರ ಅಮಾಯಕ ಜೀವವೊಂದನ್ನು ಬಲಿ ಪಡೆದಿದೆ. ರಾಷ್ಟ್ರೀಯ ಹೆದ್ದಾರಿ–65ರ ನಿರ್ಣಾ ಕ್ರಾಸ್ ಸಮೀಪ ಗಾಳಿಪಟ ಹಾರಿಸುವ ವೇಳೆ ನಿಷೇಧಿತ ಚೀನಾ ತಯಾರಿಕೆಯ ಮಾಂಜಾ ದಾರ ಬಳಕೆಯಿಂದ ದ್ವಿಚಕ್ರ ವಾಹನ ಸವಾರ ಸಂಜುಕುಮಾರ್ ಗುಂಡಪ್ಪ ಹೊಸಮನಿ (ಬಂಬುಳಗಿ ಗ್ರಾಮ) ಅವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಸಚಿವರ ಭೇಟಿ ಮತ್ತು ಧನಸಹಾಯ:

ಈ ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಇಂದು ಮೃತರ ನಿವಾಸಕ್ಕೆ ಭೇಟಿ ನೀಡಿದರು. ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಸಚಿವರು, ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ ಧನಸಹಾಯ ಹಸ್ತಾಂತರಿಸಿದರು. ಅಲ್ಲದೆ, ಸರ್ಕಾರದ ವತಿಯಿಂದಲೂ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ದೊರಕಿಸುವ ಭರವಸೆ ನೀಡಿದರು.

ಮಾನವ ಜೀವಕ್ಕೆ ಅಪಾಯಕಾರಿ:

ನಂತರ ಮಾತನಾಡಿದ ಸಚಿವರು, “ನಿಷೇಧಿತ ಚೀನಾ ಮಾಂಜಾ ದಾರ ಮಾನವ ಜೀವಕ್ಕೆ ಅತ್ಯಂತ ಅಪಾಯಕಾರಿ. ಇಂತಹ ದುರ್ಘಟನೆಗಳು ಮರುಕಳಿಸದಂತೆ ಜನಜಾಗೃತಿ ಹಾಗೂ ಕಟ್ಟುನಿಟ್ಟಿನ ಕ್ರಮ ಅಗತ್ಯ. ಸಾರ್ವಜನಿಕರು ಈ ಬಗ್ಗೆ ಹೆಚ್ಚಿನ ಎಚ್ಚರ ವಹಿಸಬೇಕೆಂದು ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

ಜಾಗೃತಿ ಮೂಡಿಸಲು ಕರೆ:

ಹಬ್ಬದ ನೆಪದಲ್ಲಿ ನಿಷೇಧಿತ ವಸ್ತುಗಳನ್ನು ಬಳಸಿ ಇತರರ ಪ್ರಾಣಕ್ಕೆ ಸಂಚಕಾರ ತರುವುದು ಖಂಡನೀಯ. ಇಂತಹ ಕಾನೂನುಬಾಹಿರ ಮಾರಾಟದ ಮೇಲೆ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *