ಹೆಚ್.ಡಿ. ಕೋಟೆ: ರೇಣುಕಾ ಎಲ್ಲಮ್ಮ ತಾಯಿಯ 19ನೇ ವರ್ಷದ ಪೂಜಾ ಮಹೋತ್ಸವ; ಶಾಸಕ ಅನಿಲ್ ಚಿಕ್ಕಮಾದು ಕುಟುಂಬಸ್ಥರಿಂದ ವಿಶೇಷ ಪೂಜೆ

ಹೆಚ್.ಡಿ. ಕೋಟೆ: ಪಟ್ಟಣದ ಆರ್ಯ ಈಡಿಗ ಸಮಾಜದ ವತಿಯಿಂದ ಅತ್ಯಂತ ಭಕ್ತಿ ಸಭಾವದೊಂದಿಗೆ ಆಯೋಜಿಸಲಾಗಿದ್ದ ಶ್ರೀ ರೇಣುಕಾ ಎಲ್ಲಮ್ಮ ತಾಯಿಯ 19ನೇ ವರ್ಷದ ಪೂಜಾ ವಾರ್ಷಿಕೋತ್ಸವ ಕಾರ್ಯಕ್ರಮವು ಇಂದು ಅದ್ದೂರಿಯಾಗಿ ನೆರವೇರಿತು.

ಈ ಪವಿತ್ರ ಧಾರ್ಮಿಕ ಕಾರ್ಯಕ್ರಮದಲ್ಲಿ ಶಾಸಕರಾದ ಅನಿಲ್ ಚಿಕ್ಕಮಾದು ಅವರ ಅನಿವಾರ್ಯ ಅನುಪಸ್ಥಿತಿಯಲ್ಲಿ, ಅವರ ಕುಟುಂಬಸ್ಥರು ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.

ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕರ ಕುಟುಂಬ

ಶಾಸಕರ ತಾಯಿಯವರಾದ ನಾಗಮ್ಮ ಚಿಕ್ಕಮಾದು ಹಾಗೂ ಧರ್ಮಪತ್ನಿ ಶ್ರೀಮತಿ ಸೌಮ್ಯ ಅನಿಲ್ ಚಿಕ್ಕಮಾದು ಅವರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ದೇವಿಗೆ ವಿಶೇಷ ಅರ್ಚನೆ ಮತ್ತು ಪೂಜೆ ಸಲ್ಲಿಸಿದರು. ಕ್ಷೇತ್ರದ ಜನರ ಅಭಿವೃದ್ಧಿ ಮತ್ತು ಶಾಂತಿಗಾಗಿ ಪ್ರಾರ್ಥಿಸಿದ ಅವರು, ಬಳಿಕ ಸರತಿ ಸಾಲಿನಲ್ಲಿ ಭಕ್ತಾದಿಗಳೊಂದಿಗೆ ಕುಳಿತು ಪ್ರಸಾದ ಸೇವನೆ ಮಾಡುವ ಮೂಲಕ ಸರಳತೆ ಮೆರೆದರು.

ಗಣ್ಯರ ಉಪಸ್ಥಿತಿ

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಅಧ್ಯಕ್ಷರಾದ ಸೌಮ್ಯ ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ವನಸಿರಿ ಶಂಕರ್, ಮಾಜಿ ಪುರಸಭಾ ಸದಸ್ಯರಾದ ಅನಿಲ್ ಸೇರಿದಂತೆ ಆರ್ಯ ಈಡಿಗ ಸಮಾಜದ ಮುಖಂಡರು ಹಾಗೂ ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆದ ಈ ಕಾರ್ಯಕ್ರಮವು ಪಟ್ಟಣದಲ್ಲಿ ಹಬ್ಬದ ವಾತಾವರಣ ನಿರ್ಮಿಸಿತ್ತು.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *