ಧಾರವಾಡ: ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭಾಂಗಣದಲ್ಲಿ ಇಂದು ಮಕ್ಕಳ ವಿಶೇಷ ಪೊಲೀಸ್ ಘಟಕಗಳ (Special Juvenile Police Units – SJPU) ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅಧಿಕಾರಿಗಳು, ಜಿಲ್ಲೆಯಲ್ಲಿ ಮಕ್ಕಳ ರಕ್ಷಣೆ ಮತ್ತು ಅವರ ಹಕ್ಕುಗಳ ಜಾರಿಯ ಕುರಿತು ಕೈಗೊಂಡಿರುವ ಕ್ರಮಗಳನ್ನು ಪರಾಮರ್ಶಿಸಿದರು.
ಮಕ್ಕಳ ವಿರುದ್ಧದ ಅಪರಾಧಗಳನ್ನು ತಡೆಗಟ್ಟುವಲ್ಲಿ ಮತ್ತು ಸಂಕಷ್ಟದಲ್ಲಿರುವ ಮಕ್ಕಳಿಗೆ ತಕ್ಷಣದ ಸ್ಪಂದನೆ ನೀಡುವಲ್ಲಿ ವಿಶೇಷ ಘಟಕಗಳ ಪಾತ್ರ ನಿರ್ಣಾಯಕವಾಗಿದೆ. ಸಭೆಯಲ್ಲಿ ಮಕ್ಕಳ ಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ವಿವಿಧ ಇಲಾಖೆಗಳ ನಡುವಿನ ಸಮನ್ವಯದ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.
ಈ ಮಹತ್ವದ ಸಭೆಯಲ್ಲಿ ಜಿಲ್ಲಾ ಮಟ್ಟದ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು, ಶಿವಾನಂದ ಕಟಗಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು., ವಿಜಯಕುಮಾರ್ ವಿ. ಜಿ., ಸಹಾಯಕ ಪೊಲೀಸ್ ಆಯುಕ್ತರು., ವಿನೋದ್ ಮುಕ್ತೆದಾರ್, ಡಿವೈಎಸ್‌ಪಿ. ಶ್ರೀಮತಿ ದೀಪಾ ಜಾವುರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು (DCPO). ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದು, ಮಕ್ಕಳ ಕಲ್ಯಾಣಕ್ಕಾಗಿ ರೂಪಿಸಲಾದ ಯೋಜನೆಗಳ ಅನುಷ್ಠಾನದ ವರದಿಯನ್ನು ಮಂಡಿಸಿದರು. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಪೊಲೀಸ್ ಘಟಕಗಳು ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು.







