ಬೆಂಗಳೂರು: ಮಲಬಾರ್ ಮುಸ್ಲಿಂ ಅಸೋಸಿಯೇಷನ್‌ನ 90ನೇ ವಾರ್ಷಿಕೋತ್ಸವ – ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

ಬೆಂಗಳೂರು: ನಗರದ ಪ್ರತಿಷ್ಠಿತ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಲಬಾರ್ ಮುಸ್ಲಿಂ ಅಸೋಸಿಯೇಷನ್‌ನ 90ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಸಂಸ್ಥೆಯ ಸುದೀರ್ಘ ಸೇವಾ ಪಯಣಕ್ಕೆ ಶುಭ ಹಾರೈಸಿದರು.

ದಶಕಗಳಿಂದಲೂ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಅಸೋಸಿಯೇಷನ್‌ನ ಕಾರ್ಯವೈಖರಿಯನ್ನು ಶ್ಲಾಘಿಸಿದ ಮುಖ್ಯಮಂತ್ರಿಗಳು, ಸಮಾಜದ ಏಕತೆ ಮತ್ತು ಅಭಿವೃದ್ಧಿಯಲ್ಲಿ ಇಂತಹ ಸಂಸ್ಥೆಗಳ ಪಾತ್ರ ಮಹತ್ತರವಾದುದು ಎಂದು ಅಭಿಪ್ರಾಯಪಟ್ಟರು.

ಈ ಐತಿಹಾಸಿಕ ಸಂಭ್ರಮಾಚರಣೆಗೆ ರಾಜ್ಯದ ಪ್ರಮುಖ ರಾಜಕೀಯ ನಾಯಕರು ಸಾಕ್ಷಿಯಾದರು ಯು.ಟಿ. ಖಾದರ್ (ವಿಧಾನಸಭಾಧ್ಯಕ್ಷರು), ಡಿ.ಕೆ. ಶಿವಕುಮಾರ್ (ಉಪಮುಖ್ಯಮಂತ್ರಿಗಳು), ಡಾ. ಎಂ.ಸಿ. ಸುಧಾಕರ್ (ಉನ್ನತ ಶಿಕ್ಷಣ ಸಚಿವರು), ನಸೀರ್ ಅಹ್ಮದ್ (ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ), ಎನ್.ಎ. ಹ್ಯಾರಿಸ್ (ಶಾಸಕರು), ಮೆಹರೂಸ್ ಖಾನ್ (ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು), ಸೇರಿದಂತೆ ಹಲವು ಗಣ್ಯರು ಹಾಗೂ ಅಸೋಸಿಯೇಷನ್‌ನ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

90 ವರ್ಷಗಳ ಸುದೀರ್ಘ ಪಯಣ:

ಮಲಬಾರ್ ಮುಸ್ಲಿಂ ಅಸೋಸಿಯೇಷನ್ ಕಳೆದ ಒಂಬತ್ತು ದಶಕಗಳಿಂದ ಬೆಂಗಳೂರಿನಲ್ಲಿ ಶಿಕ್ಷಣ, ಆರೋಗ್ಯ ಮತ್ತು ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ಬಂದಿದೆ. ಈ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಂಸ್ಥೆಯ ಸಾಧನೆಗಳ ಸ್ಮರಣೆ ನಡೆಯಿತು.

  • Related Posts

    ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಎಚ್ಚರವಹಿಸಿ: ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ

    ಕಲಬುರಗಿ: ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಮುಂಬರುವ ಎರಡು ತಿಂಗಳುಗಳಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.Contentsನೀರಿನ ಸರಬರಾಜಿಗೆ ಆದ್ಯತೆಜೆಜೆಎಂ…

    Continue reading
    ಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

    ಮೈಸೂರು: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಸನ್ನಿಧಿಗೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.Contentsನೀರಿನ ಸರಬರಾಜಿಗೆ ಆದ್ಯತೆಜೆಜೆಎಂ ಕಾಮಗಾರಿ ಹಾಗೂ ವಿದ್ಯುತ್ ಸಂಪರ್ಕಸ್ವಚ್ಛತೆ…

    Continue reading

    Leave a Reply

    Your email address will not be published. Required fields are marked *