ಸರಗೂರು: ತಾಲ್ಲೂಕಿನ ನರಸೀಪುರ ಗ್ರಾಮದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸಾಮಾಜಿಕ ನಾಟಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅತಿಥಿಗಳು, ಕಲೆ ಮತ್ತು ಸಂಸ್ಕೃತಿಯ ಮಹತ್ವವನ್ನು ಸಾರಿದರು.
ಸಂಸ್ಕೃತಿಯ ಪ್ರತಿಬಿಂಬ ನಾಟಕಗಳು
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗಣ್ಯರು, “ಸಮಾಜದಲ್ಲಿ ಉತ್ತಮ ಸಂದೇಶಗಳನ್ನು ಸಾರುವ ನಾಟಕಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ. ಇಂದಿನ ಆಧುನಿಕ ಯುಗದಲ್ಲಿಯೂ ರಂಗಭೂಮಿ ತನ್ನದೇ ಆದ ವಿಶಿಷ್ಟ ಛಾಪನ್ನು ಹೊಂದಿದೆ,” ಎಂದು ಅಭಿಪ್ರಾಯಪಟ್ಟರು.
ಅಲ್ಲದೆ, ಯುವ ಕಲಾವಿದರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಜನರಲ್ಲಿ ಸಾಮಾಜಿಕ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದು ಕಲಾವಿದರಿಗೆ ಶುಭ ಹಾರೈಸಿದರು.
ರವಿ: ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಗ್ರಾಮದ ಹಿರಿಯ ಮುಖಂಡರು ಹಾಗೂ ಗಣ್ಯರು, ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಗ್ರಾಮಸ್ಥರು ಮತ್ತು ಕಲಾ ಅಭಿಮಾನಿಗಳು ಈ ಸಾಂಸ್ಕೃತಿಕ ಸಂಜೆಗ ಉತ್ತುಂಗದ ಮೆರುಗು ನೀಡಲು ಅನೇಕ ಮುಖಂಡರು ಭಾಗವಹಿಸಿದ್ದರು,
ಕಲಾ ಮೆರುಗು
ಗ್ರಾಮದ ಯುವ ಪ್ರತಿಭೆಗಳು ಅಭಿನಯಿಸಿದ ಈ ಸಾಮಾಜಿಕ ನಾಟಕವು ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಯಿತು. ನಾಟಕದ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪ್ರಯತ್ನ ಮಾಡಲಾಯಿತು. ಕಾರ್ಯಕ್ರಮದುದ್ದಕ್ಕೂ ಗ್ರಾಮಸ್ಥರು ಚಪ್ಪಾಳೆ ತಟ್ಟುವ ಮೂಲಕ ಕಲಾವಿದರನ್ನು ಹುರಿದುಂಬಿಸಿದರು.







