ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ “ಮಾಧ್ಯಮ ಹಬ್ಬ-2026” ಕಾರ್ಯಾಗಾರಕ್ಕೆ ಇಂದು ಚಾಲನೆ ದೊರೆಯಿತು. ಸಮಾಜದ ಮುಖವಾಣಿಯಾಗಿರುವ ಮಾಧ್ಯಮ ರಂಗದ ಇಂದಿನ ಸವಾಲುಗಳು ಮತ್ತು ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. “ಬದಲಾಗುತ್ತಿರುವ ತಂತ್ರಜ್ಞಾನದ ಯುಗದಲ್ಲಿ ಮಾಧ್ಯಮದ ಜವಾಬ್ದಾರಿ ಹೆಚ್ಚಿದೆ. ಪತ್ರಿಕೋದ್ಯಮದ ಮೌಲ್ಯಗಳನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಯುವ ಪೀಳಿಗೆಗೆ ಇಂತಹ ಹಬ್ಬಗಳು ಪ್ರೇರಣೆ ನೀಡುತ್ತವೆ,” ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಮಾಧ್ಯಮ ಮತ್ತು ಶೈಕ್ಷಣಿಕ ಕ್ಷೇತ್ರದ ಪ್ರಮುಖರು ಭಾಗವಹಿಸಿ ಮಾರ್ಗದರ್ಶನ ನೀಡಿದರು, ಹಿರಿಯ ಪತ್ರಕರ್ತರು: ದಿನೇಶ್ ಅಮಿನ್ ಮಟ್ಟು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ: ಅಧ್ಯಕ್ಷರಾದ ಶಿವಾನಂದ ತಗಡೂರು,ರ್ನಾಟಕ ಮಾಧ್ಯಮ ಅಕಾಡೆಮಿ: ಅಧ್ಯಕ್ಷೆ ಆಯೆಷಾ ಖಾನುಂ. ವಿಶ್ವವಿದ್ಯಾಲಯದ ಪರವಾಗಿ: ಕುಲಪತಿ ಪ್ರೊ. ರಮೇಶ್ ಬಿ. ಮತ್ತು ಕುಲಸಚಿವ ನವೀನ್ ಜೋಸೆಫ್. ವಾರ್ತಾ ಇಲಾಖೆ: ಉಪನಿರ್ದೇಶಕರಾದ ಪಲ್ಲವಿ ಹೊನ್ನಾಪುರ.







