ಶಾಸಕರಿಗೆ ಆಯವ್ಯಯ ನಿರ್ವಹಣೆ ಕುರಿತ ತರಬೇತಿ; ಕಾರ್ಯಾಗಾರ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ವಿಧಾನ ಮಂಡಲದ ವತಿಯಿಂದ ಶಾಸಕರುಗಳಿಗಾಗಿ ಆಯೋಜಿಸಲಾಗಿದ್ದ “ಆಯವ್ಯಯ, ರಾಜಸ್ವ ಸಂಗ್ರಹಣೆ, ಅನುದಾನಗಳ ವರ್ಗೀಕರಣ ಹಾಗೂ ಆಯವ್ಯಯ ಅನುದಾನ ಬಳಕೆ ಮತ್ತು ನಿರ್ವಹಣೆ” ಕುರಿತ ವಿಶೇಷ ಕಾರ್ಯಾಗಾರಕ್ಕೆ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು.

ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಯವರು, ರಾಜ್ಯದ ಆರ್ಥಿಕ ಶಿಸ್ತು ಮತ್ತು ಬಜೆಟ್ ಪ್ರಕ್ರಿಯೆಯ ಬಗ್ಗೆ ಜನಪ್ರತಿನಿಧಿಗಳಿಗೆ ಆಳವಾದ ಜ್ಞಾನವಿರುವುದು ಅತ್ಯಗತ್ಯ. ರಾಜಸ್ವ ಸಂಗ್ರಹಣೆ ಮತ್ತು ಅನುದಾನಗಳ ಸಮರ್ಪಕ ಬಳಕೆಯಿಂದ ಮಾತ್ರ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಆಶಯ ವ್ಯಕ್ತಪಡಿಸಿದರು. ಅಲ್ಲದೆ, ಈ ಕಾರ್ಯಾಗಾರದ ಉದ್ದೇಶ ಯಶಸ್ವಿಯಾಗಲಿ ಎಂದು ಅವರು ಶುಭ ಹಾರೈಸಿದರು.

ಗಣ್ಯರ ಉಪಸ್ಥಿತಿ: ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಭಾಗವಹಿಸಿದ್ದರು. ಸಚಿವರುಗಳಾದ ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಎನ್.ಎಸ್. ಬೋಸರಾಜು, ಡಿ.ಸುಧಾಕರ್, ಮಧು ಬಂಗಾರಪ್ಪ ಸೇರಿದಂತೆ ಆಡಳಿತ ಪಕ್ಷದ ಶಾಸಕರುಗಳು ಹಾಗೂ ವಿಧಾನ ಪರಿಷತ್ ಸದಸ್ಯರುಗಳು ಕಾರ್ಯಾಗಾರದಲ್ಲಿ ಹಾಜರಿದ್ದು, ಆರ್ಥಿಕ ನಿರ್ವಹಣೆಯ ವಿವಿಧ ಆಯಾಮಗಳ ಬಗ್ಗೆ ಮಾಹಿತಿ ಪಡೆದರು.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *