ನವದೆಹಲಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ವಿನೋದ್ ತಾವ್ಡೆ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಹಿನ್ನೆಲೆಯಲ್ಲಿ, ನವದೆಹಲಿಯ ನರ್ಮದಾ ಅಪಾರ್ಟ್‌ಮೆಂಟ್ಸ್‌ನಲ್ಲಿ ಇಂದು ಅವರನ್ನು ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಲಾಯಿತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ಈ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಹಿರಿಯ ನಾಯಕರು ಮತ್ತು ಸಂಸದರು ಭಾಗವಹಿಸಿ ತಾವ್ಡೆ ಅವರ ಸಂಘಟನಾ ಚಾತುರ್ಯ ಮತ್ತು ಪಕ್ಷಕ್ಕೆ ಅವರು ನೀಡುತ್ತಿರುವ ಕೊಡುಗೆಯನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಕೇರಳ ಮತ್ತು ರಾಷ್ಟ್ರೀಯ ಮಟ್ಟದ ಪ್ರಮುಖ ಬಿಜೆಪಿ ನಾಯಕರು ಸಾಕ್ಷಿಯಾದರು, ರಾಜೀವ್ ಚಂದ್ರಶೇಖರ್: ಬಿಜೆಪಿ ಕೇರಳ ರಾಜ್ಯ ಅಧ್ಯಕ್ಷರು, ಪ್ರಕಾಶ್ ಜಾವಡೇಕರ್: ಬಿಜೆಪಿ ಕೇರಳ ಉಸ್ತುವಾರಿ ಹಾಗೂ ಮಾಜಿ ಕೇಂದ್ರ ಸಚಿವರು, ವಿ. ಮುರುಳೀದರನ್: ಮಾಜಿ ಕೇಂದ್ರ ಸಚಿವರು, ಶ್ರೀಮತಿ ಅಪರಾಜಿತೆ ಸಾರಂಗಿ: ಸಂಸತ್ ಸದಸ್ಯರು, ಪಿ.ಕೆ. ಕೃಷ್ಣದಾಸ್: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು, ಕುಮ್ಮನಮ್ ರಾಜಶೇಖರನ್: ಹಿರಿಯ ನಾಯಕರು, ರಾಜ್ಯಸಭೆಯ ಸದಸ್ಯರಾಗಿ ಆಯ್ಕೆಯಾಗಿರುವ ವಿನೋದ್ ತಾವ್ಡೆ ಅವರು ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಈ ಸಂದರ್ಭದಲ್ಲಿ ಗಣ್ಯರು ಹಾರೈಸಿದರು.









