ತುಮಕೂರು ಜಿಲ್ಲೆಯ ಕ್ರೀಡಾ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವ ಉದ್ದೇಶದಿಂದ ಇಂದು ವಿವಿಧ ಕ್ರೀಡಾ ಸೌಲಭ್ಯಗಳ ಉದ್ಘಾಟನೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
ಕ್ರೀಡಾ ಸೌಲಭ್ಯಗಳ ಲೋಕಾರ್ಪಣೆ:
ತುಮಕೂರು ವಿವಿ ಕ್ಯಾಂಪಸ್: ನೂತನ ಟೆನ್ನಿಸ್ ಅಭ್ಯಾಸ ಅಂಕಣದ ಉದ್ಘಾಟನೆ.
ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ: ಅತ್ಯಾಧುನಿಕ ಶೂಟಿಂಗ್ ಕೇಂದ್ರ, ಕೆನೋಯಿಂಗ್ ಮತ್ತು ಕಯಾಕಿಂಗ್ ಕೇಂದ್ರಗಳ ಉದ್ಘಾಟನೆ.
ಜಿಲ್ಲಾ ಒಳಾಂಗಣ ಕ್ರೀಡಾಂಗಣ: ನೂತನ ಬಾಸ್ಕೆಟ್ ಬಾಲ್ ಅಂಕಣದ ಸಮರ್ಪಣೆ.
ಕೊರಟಗೆರೆ ಪಟ್ಟಣ: ರಾಜೀವ್ ಗಾಂಧಿ ಒಳಾಂಗಣ ಕ್ರೀಡಾಂಗಣದ ಲೋಕಾರ್ಪಣೆ.
ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ:
ಕೊರಟಗೆರೆ ತಾಲ್ಲೂಕು ಪಂಚಾಯಿತಿ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ.
ಕ್ಷೇತ್ರದ ವಿವಿಧ ರಸ್ತೆಗಳ ನಿರ್ಮಾಣ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಅಧಿಕೃತ ಚಾಲನೆ.
“ನಮ್ಮ ಯುವ ಸಮೂಹಕ್ಕೆ ಅತ್ಯುತ್ತಮ ಕ್ರೀಡಾ ಸೌಲಭ್ಯಗಳನ್ನು ಒದಗಿಸುವುದು ಮತ್ತು ಸುಸಜ್ಜಿತ ಮೂಲಸೌಕರ್ಯದ ಮೂಲಕ ಜಿಲ್ಲೆಯ ಸರ್ವತೋಮುಖ ಪ್ರಗತಿ ಸಾಧಿಸುವುದು ನಮ್ಮ ಗುರಿ.”
ಗೌರವಾನ್ವಿತ ಉಪಸ್ಥಿತಿ: ಈ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ್, ಜಿ.ಪಂ ಸಿಇಒ ಬಿ.ವಿ. ಅಶ್ವಿಜಾ, ಎಸ್ಪಿ ಅಶೋಕ್, ಬಿಎಂಟಿಸಿ ಉಪಾಧ್ಯಕ್ಷರಾದ ನಿಕೇತ್ ರಾಜ್ ಮೌರ್ಯ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.







