ಮಂಗಳೂರಿನಲ್ಲಿ ʻಮರಣ ಮಳೆʼಗೆ ಅಜ್ಜಿ, ಮೊಮ್ಮಕ್ಕಳು ಬಲಿ – 9 ಗಂಟೆಗಳ ಜೀವನ್ಮರಣ ಹೋರಾಟದ ನಂತ್ರ ಬದುಕುಳಿದ ತಾಯಿ!

ಮಂಗಳೂರು: ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿದ ಘಟನೆಯಲ್ಲಿ 9 ಗಂಟೆಗಳ ಜೀವನ್ಮರಣ ಹೋರಾಟದ ನಡೆಸಿದ್ದ 9 ವರ್ಷದ ಮಗು ಚಿಕಿತ್ಸೆಗಾಗಿ ಆಸ್ಪತ್ರೆಗೆ (Hospital) ಕರೆದೊಯ್ಯುವ ವೇಳೆ ಮಾರ್ಗಮಧ್ಯದಲ್ಲೇ ಮೃತಪಟ್ಟಿರುವ ಘಟನೆ ಮಂಗಳೂರಿನ (Mangaluru) ದೇರಳ ಕಟ್ಟೆ ಸಮೀಪದ ಮೊಂಟೆಪದವು ಕೋಡಿ ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಒಂದೇ ಕುಟುಂಬದ ಐವರ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮ (54) ಮಕ್ಕಳಾದ ಮೂರು ವರ್ಷದ ಮಗು ಆರ್ಯನ್, ಎರಡು ವರ್ಷ ಪ್ರಾಯದ ಆರುಷ್ (2) ಮೃತರು. ಆರುಷ್ ನನ್ನು ಮಣ್ಣಿನಡಿಯಿಂದ ತೆಗೆದು ರಕ್ಷಣೆ ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಅಸುನೀಗಿದೆ. ಇನ್ನೂ ತನ್ನ ಮಕ್ಕಳನ್ನು ತೋಳಲ್ಲಿ ಅಪ್ಪಿಕೊಂಡು ಹೋರಾಡಿದ ತಾಯಿಯನ್ನ ರಕ್ಷಣೆ ಮಾಡಲಾಗಿದೆ.

ಗುರುವಾರ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದ ದೇರಳಕಟ್ಟೆ ಸಮೀಪದ ಕಾನಕೆರೆ ಹಾಗೂ ಮೊಂಟೆಪದವು ಕೋಡಿ ಎಂಬಲ್ಲಿ ಈ ಅವಘಡ ಸಂಭವಿಸಿದೆ. ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೊಂದು ಮಗು ಪ್ರಜ್ಞಾನಹೀನ ಸ್ಥಿತಿಯಲ್ಲಿತ್ತು, ಪ್ರಜ್ಞೆ ಬರುತ್ತಿದ್ದಂತೆ ತನ್ನ ತಾಯಿಯ ತೋಳನ್ನು ಬಿಗಿದಪ್ಪಿಕೊಂಡು ಕಾಪಾಡಿ.. ಕಾಪಾಡಿ.. ಎನ್ನುತ್ತಾ ಚೀರತೊಡಗಿತ್ತು. ಸತತ 9 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ್ದ ರಕ್ಷಣಾ ತಂಡಗಳು ತಾಯಿ ಅಶ್ವಿನಿ, ಮಗು ಆರುಷ್‌ ಇಬ್ಬರನ್ನೂ ರಕ್ಷಣೆ ಮಾಡಿದ್ದವು. ಆದ್ರೆ ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದಾಗಲೇ ಮಗುವಿನ ಪ್ರಾಣಪಕ್ಷಿ ಹಾರಿದೆ.

ಏನಿದು ಘಟನೆ?
ಮೊಂಟೆಪದವು ಕೋಡಿಯಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಕಾಂತಪ್ಪ ಪೂಜಾರಿ ಎಂಬುವವರ ಮನೆ ಮೇಲೆ ಬಿದ್ದಿದೆ. ಬೃಹತ್‌ ಮರದ ಸಹಿತ ಸುಮಾರು 30 ಅಡಿ ಮಣ್ಣು ಕುಸಿದು ಬಿದ್ದಿತ್ತು. ಶುಕ್ರವಾರ (ಇಂದು) ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಈ ವೇಳೆ ಮನೆಯಲ್ಲಿದ್ದ ಒಂದೇ ಕುಟುಂಬದ ಐವರು ಸಿಲುಕಿಕೊಂಡಿದ್ದು, ಈ ಪೈಕಿ ಓರ್ವ ಮಹಿಳೆ ಸಾವನ್ನಪ್ಪಿದ್ದರು.

ಸ್ಥಳಕ್ಕೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದವು. ಕಾಂತಪ್ಪ ಪೂಜಾರಿ (65) ಅವರನ್ನು ರಕ್ಷಣೆ ಮಾಡಲಾಗಿತ್ತು. ಆದ್ರೆ ಅಶ್ವಿನಿ (31), ಆರ್ಯನ್ (2.5) ಆರುಷ್‌ (1) ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿತ್ತು. ಆರ್ಯನ್‌ ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದರಿಂದ ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದ ಅಶ್ವಿನಿ, ಆರುಷ್‌ ರಕ್ಷಣೆಗೆ ಹೋರಾಟ ನಡೆದಿತ್ತು. ತಾಯಿ-ಮಕ್ಕಳಿಗೆ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಆದ್ರೆ 9 ಗಂಟೆಗಳ ಕಾರ್ಯಾಚರಣೆ ಬಳಿಕ ಇಬ್ಬರನ್ನೂ ರಕ್ಷಿಸಿ ಹೊರತೆಗೆಯಲಾಗಿತ್ತು. ಈ ವೇಳೆ ಚಿಕಿತ್ಸೆಗಾಗಿ ಆಸ್ಪತ್ರೆಗೆ 1 ವರ್ಷದ ಮಗುವನ್ನು ಕರೆದೊಯ್ಯುವ ವೇಳೆ ಮಾರ್ಗಮಧ್ಯೆಯೇ ಮೃತಪಟ್ಟಿದೆ.

  • Related Posts

    ಮಡಿಕೇರಿ: ಗಾಂಧಿ ಭವನದಲ್ಲಿ ಮೂರು ದಿನಗಳ ‘ಪಾಸ್‌ಪೋರ್ಟ್ ಮೇಳ’ಕ್ಕೆ ಚಾಲನೆ ನೀಡಿದ ಸಂಸದ ಯದುವೀರ್

    ಮಡಿಕೇರಿ: ಕೊಡಗು ಜಿಲ್ಲೆಯ ಸಾರ್ವಜನಿಕರ ಅನುಕೂಲಕ್ಕಾಗಿ ಮಡಿಕೇರಿಯ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿರುವ ವಿಶೇಷ **’ಪಾಸ್‌ಪೋರ್ಟ್ ಮೇಳ’**ಕ್ಕೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಾಲನೆ ನೀಡಿದರು. ದಿನಾಂಕ: ಈ ವಿಶೇಷ ಮೇಳವು ಏಪ್ರಿಲ್ 8, 9…

    Continue reading
    ನೇಮಮ್‌ನಲ್ಲಿ ಎನ್‌ಡಿಎ ಪರ ಅಲೆ: ರಾಜೀವ್ ಚಂದ್ರಶೇಖರ್ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಶೋಭಾ ಕರಂದ್ಲಾಜೆ

    ತಿರುವನಂತಪುರಂ (ಕೇರಳ): ಕೇರಳದ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ನೇಮಮ್‌ನಲ್ಲಿ ಎನ್‌ಡಿಎ ಪರವಾಗಿ ಜನಬೆಂಬಲದ ಅಲೆ ಎದ್ದಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.Contentsರಾಜೀವ್ ಚಂದ್ರಶೇಖರ್ ಪರ ಭರ್ಜರಿ ಪ್ರಚಾರ:ಡಬಲ್ ಎಂಜಿನ್ ಸರ್ಕಾರದ ಆಶಯ:ಮತದಾರರ…

    Continue reading

    Leave a Reply

    Your email address will not be published. Required fields are marked *