Kodagu | ಕಾಲೇಜು ಹಾಸ್ಟೆಲ್‌ನಲ್ಲಿ ರಾಯಚೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

ಮಡಿಕೇರಿ: 6 ಸಬ್ಜೆಕ್ಟ್ ಬ್ಯಾಕ್‌ಲಾಗ್ ಇರುವ ಕಾರಣ ರಾಯಚೂರು (Raichur) ಮೂಲದ ವಿದ್ಯಾರ್ಥಿನಿ ಕಾಲೇಜು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ಪೊನ್ನಂಪೇಟೆಯಲ್ಲಿ (Ponnampet) ನಡೆದಿದೆ.

ತಾಲೂಕಿನ ಹಳ್ಳಿಗಟ್ಟು ಕಾಲೇಜುವೊಂದರಲ್ಲಿ ಪ್ರಥಮ ವರ್ಷದ ಎಐಎಂಎಲ್ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿನಿ (19) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ರಾಯಚೂರಿನ ಮಹಾಂತಪ್ಪ ಎಂಬವರ ಏಕೈಕ ಪುತ್ರಿಯಾಗಿದ್ದು, ಮೂರು ದಿನಗಳ ಹಿಂದೆ ತನ್ನ ಹುಟ್ಟುಹಬ್ಬ ಆಚರಿಸಿಕೊಂಡಿದ್ದಳು. ಅಂದು ಬಾರದವರಿಗೆ ಇಂದು ಕೂಡ ಸಿಹಿ ಹಂಚಿದ್ದಳು. ಇಂದು ತರಗತಿಗೆ ಆಗಮಿಸಿದ ನಂತರ ಸಂಜೆ 4 ಗಂಟೆಗೆ ಹಾಸ್ಟೆಲ್ ಸೇರಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಸಂಜೆ 4:30ರ ಸುಮಾರಿಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಒಳಗಿನಿಂದ ಬಾಗಿಲು ಹಾಕಿಕೊಂಡಿತ್ತು. ಎಷ್ಟೇ ಕೂಗಿದರು ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿದ್ದಾಳೆ. ನಂತರ ಬಾಗಿಲು ತೆಗೆದು ನೋಡಿದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಈಕೆ ಸಾಯುವ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಆರು ವಿಷಯ ಬ್ಯಾಕ್‌ಲಾಗ್ ಇರುವ ಕಾರಣ ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಪೋನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

  • Related Posts

    ಮಡಿಕೇರಿ: ಗಾಂಧಿ ಭವನದಲ್ಲಿ ಮೂರು ದಿನಗಳ ‘ಪಾಸ್‌ಪೋರ್ಟ್ ಮೇಳ’ಕ್ಕೆ ಚಾಲನೆ ನೀಡಿದ ಸಂಸದ ಯದುವೀರ್

    ಮಡಿಕೇರಿ: ಕೊಡಗು ಜಿಲ್ಲೆಯ ಸಾರ್ವಜನಿಕರ ಅನುಕೂಲಕ್ಕಾಗಿ ಮಡಿಕೇರಿಯ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿರುವ ವಿಶೇಷ **’ಪಾಸ್‌ಪೋರ್ಟ್ ಮೇಳ’**ಕ್ಕೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಾಲನೆ ನೀಡಿದರು. ದಿನಾಂಕ: ಈ ವಿಶೇಷ ಮೇಳವು ಏಪ್ರಿಲ್ 8, 9…

    Continue reading
    ನೇಮಮ್‌ನಲ್ಲಿ ಎನ್‌ಡಿಎ ಪರ ಅಲೆ: ರಾಜೀವ್ ಚಂದ್ರಶೇಖರ್ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಶೋಭಾ ಕರಂದ್ಲಾಜೆ

    ತಿರುವನಂತಪುರಂ (ಕೇರಳ): ಕೇರಳದ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ನೇಮಮ್‌ನಲ್ಲಿ ಎನ್‌ಡಿಎ ಪರವಾಗಿ ಜನಬೆಂಬಲದ ಅಲೆ ಎದ್ದಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.Contentsರಾಜೀವ್ ಚಂದ್ರಶೇಖರ್ ಪರ ಭರ್ಜರಿ ಪ್ರಚಾರ:ಡಬಲ್ ಎಂಜಿನ್ ಸರ್ಕಾರದ ಆಶಯ:ಮತದಾರರ…

    Continue reading

    Leave a Reply

    Your email address will not be published. Required fields are marked *