ನಂಜನಗೂಡು: ಗರಳಪುರಿ ಉತ್ಸವಕ್ಕೆ ಅದ್ಧೂರಿ ಚಾಲನೆ; ಜಾನಪದ ಕಲೆ ಸಂಸ್ಕೃತಿಯ ಪ್ರತಿಬಿಂಬ – ದರ್ಶನ್ ಧ್ರುವನಾರಾಯಣ್

ನಂಜನಗೂಡು: ಐತಿಹಾಸಿಕ ಪ್ರಸಿದ್ಧ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವದ ಅಂಗವಾಗಿ, ನಂಜನಗೂಡಿನಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ‘ಗರಳಪುರಿ ಉತ್ಸವ – 2026’ ಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ನಗರದ ಎ.ಪಿ.ಎಂ.ಸಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾನಪದೋತ್ಸವ ಸ್ಪರ್ಧೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ದರ್ಶನ್ ಧ್ರುವನಾರಾಯಣ್ ಅವರು ಉದ್ಘಾಟಿಸಿ, ಸ್ಪರ್ಧಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ದರ್ಶನ್ ಧ್ರುವನಾರಾಯಣ್ ಅವರು, “ಜಾನಪದ ಕಲೆಗಳು ಕೇವಲ ಮನೋರಂಜನೆಯಲ್ಲ, ಅವು ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುವ ಅಮೂಲ್ಯ ಸಂಪತ್ತು. ಇಂತಹ ವೇದಿಕೆಗಳು ಗ್ರಾಮೀಣ ಪ್ರತಿಭೆಗಳನ್ನು ಉತ್ತೇಜಿಸಿ, ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಮುಂದಿನ ಪೀಳಿಗೆಗೆ ಸಾಗಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ,” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ದೇವೀರಮ್ಮನಹಳ್ಳಿ ಮಠದ ನಾಗರಾಜ್ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿದ್ದರು. ವೇದಿಕೆಯ ಮೇಲೆ ಪ್ರಮುಖ ಗಣ್ಯರ ದಂಡೇ ಇತ್ತು, ಕಳಲೆ ಕೇಶವಮೂರ್ತಿ: ಮಾಜಿ ಶಾಸಕರ, ಮಳವಳ್ಳಿ ಮಹದೇವಸ್ವಾಮಿ: ರಾಜ್ಯ ಪ್ರಶಸ್ತಿ ವಿಜೇತ ಜಾನಪದ ಗಾಯಕರು, ನಾಗೇಶ್ ರಾಜ್: ಮಾಜಿ ತಾ.ಪಂ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು: ಕುರಹಟ್ಟಿ ಮಹೇಶ್ (ನಂಜನಗೂಡು), ಸಿ.ಎಂ. ಶಂಕರ್ (ನಗರ), ಶ್ರೀಕಂಠ ನಾಯಕ (ಹುಲ್ಲಹಳ್ಳಿ), ಲತಾ ಸಿದ್ದಶೆಟ್ಟಿ: ಜಿಲ್ಲಾ ಮಹಿಳಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷರು, ಇವರ ಜೊತೆಗೆ ಮಾಜಿ ನಗರಸಭಾ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ, ಶಶಿರೇಖಾ, ಸೌಭಾಗ್ಯ, ಗಾಯತ್ರಿ ಮೋಹನ್, ಗಿರೀಶ್, ಶ್ರೀಧರ್, ದೊರೆಸ್ವಾಮಿ ನಾಯಕ, ಶಿವಪ್ಪ ದೇವರು ಹಾಗೂ ಹೆಜ್ಜಿಗೆ ನಾರಾಯಣಸ್ವಾಮಿ ಸೇರಿದಂತೆ ಅನೇಕ ಮುಖಂಡರು ಮತ್ತು ನೂರಾರು ಕಲಾವಿದರು ಭಾಗವಹಿಸಿದ್ದರು.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *