ಬಾಬಾಸಾಹೇಬರ ಆಶಯದಂತೆ ಸಮಾನತೆಯ ಸಮಾಜ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: “ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯಗಳನ್ನು ಜಾರಿಗೆ ತರುವ ಮೂಲಕ ಸಮಾನತೆಯ ಸಮಾಜವನ್ನು ನಿರ್ಮಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿಲ್ಲಿ ಘೋಷಿಸಿದರು.

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಇಂದು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ವರ್ಷದ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸಾಧಕರಿಗೆ ಅಂಬೇಡ್ಕರ್ ಪ್ರಶಸ್ತಿ ಗೌರವ

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ರಾಜ್ಯ ಮಟ್ಟದ ‘ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಪ್ರಶಸ್ತಿ ವಿಜೇತರಾದ ಸಿ.ಎಂ. ಮುನಿಯಪ್ಪ (ಪತ್ರಿಕೋದ್ಯಮ/ಸಂಘಟನೆ), ಹೆಚ್.ಎನ್. ಅಣ್ಣಯ್ಯ (ಸಂಘಟನೆ), ಹನುಮಂತರಾವ್ ದೊಡ್ಡಮನಿ (ಸಾಹಿತ್ಯ), ಶೋಭಾ ಗಸ್ತಿ (ದೇವದಾಸಿ ವಿಮೋಚನೆ) ಸೇರಿದಂತೆ ಇತರರಿಗೆ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು.

ಶಾಸಕ ರಿಜ್ವಾನ್ ಅರ್ಷದ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯ ಮೇಲೆ ಸಚಿವರುಗಳಾದ, ಡಾ. ಹೆಚ್.ಸಿ. ಮಹದೇವಪ್ಪ (ಸಮಾಜ ಕಲ್ಯಾಣ ಸಚಿವರು), ಕೆ.ಹೆಚ್. ಮುನಿಯಪ್ಪ (ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು), ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಮಾಜಿ ಸಚಿವ ಹೆಚ್. ಆಂಜನೇಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್.

ಸೇರಿದಂತೆ ಹಲವು ಪ್ರಮುಖರು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆಯ ಈ ಕಾರ್ಯಕ್ರಮವು ಸಾವಿರಾರು ಜನರ ಸಮ್ಮುಖದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಜರುಗಿತು.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *