ಬಲಿಷ್ಠ ಭಾರತಕ್ಕೆ ಬಾಬಾಸಾಹೇಬರ ವಿಚಾರಧಾರೆಗಳೇ ದಾರಿದೀಪ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: “ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ತಳಹದಿಯ ಮೇಲೆ ಬಲಿಷ್ಠ ಭಾರತವನ್ನು ಕಟ್ಟಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ನಮ್ಮ ಆಡಳಿತ ಮತ್ತು ಸಮಾಜಕ್ಕೆ ಸದಾ ದಾರಿದೀಪ,” ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ನಾಡಿನ ಜನತೆಗೆ ಶುಭಾಶಯ ಕೋರಿರುವ ಅವರು, ಸಂವಿಧಾನದ ಪಿತಾಮಹನಿಗೆ ಭಕ್ತಿಪೂರ್ವಕ ಪ್ರಣಾಮಗಳನ್ನು ಸಲ್ಲಿಸಿದ್ದಾರೆ.

ಸಮಾನ ಶಿಕ್ಷಣಕ್ಕೆ ಒತ್ತು

ಬಾಬಾಸಾಹೇಬರು ಹಾಕಿಕೊಟ್ಟ ಹಾದಿಯಲ್ಲಿ ಸಮಾಜದ ಪ್ರತಿಯೊಬ್ಬರಿಗೂ ಸಮಾನ ಶಿಕ್ಷಣ ಮತ್ತು ಸಮಾನ ಅವಕಾಶಗಳು ಸಿಗುವಂತಾಗಲಿ ಎಂದು ಅವರು ಆಶಿಸಿದ್ದಾರೆ. ಶಿಕ್ಷಣದ ಮೂಲಕವೇ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ ಎಂಬ ಅಂಬೇಡ್ಕರ್ ಅವರ ಆಶಯವನ್ನು ಸಾಕಾರಗೊಳಿಸಲು ಸರ್ಕಾರ ಬದ್ಧವಾಗಿದೆ ಎಂಬ ಸಂದೇಶವನ್ನು ಅವರು ಈ ಸಂದರ್ಭದಲ್ಲಿ ನೀಡಿದ್ದಾರೆ.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *