ಚಿತ್ರದುರ್ಗ: ರಾಷ್ಟ್ರೀಯ ಪಂಚಾಯತ್ ರಾಜ್ ದಿವಸದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ

ಚಿತ್ರದುರ್ಗ: ರಾಷ್ಟ್ರೀಯ ಪಂಚಾಯತ್ ರಾಜ್ ದಿವಸದ (ಏಪ್ರಿಲ್ 24) ವಿಶೇಷ ಸಂದರ್ಭದಲ್ಲಿ ಇಂದು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಸಾರ್ವಜನಿಕರು ಹಾಗೂ ಸಿಬ್ಬಂದಿಗಳಿಗಾಗಿ ಉಚಿತ ಆರೋಗ್ಯ ತಪಾಸಣಾ ಮತ್ತು ಬೃಹತ್ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆ:

ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ (CEO) ಡಾ. ಆಕಾಶ್ ಎಸ್. ರವರು ಶಿಬಿರವನ್ನು ಉದ್ಘಾಟಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, “ಗ್ರಾಮೀಣಾಭಿವೃದ್ಧಿಯಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳ ಪಾತ್ರ ಎಷ್ಟು ಮುಖ್ಯವೋ, ಅದೇ ರೀತಿ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ರಕ್ತದಾನದಂತಹ ಮಾನವೀಯ ಕಾರ್ಯಗಳು ಅಷ್ಟೇ ಪ್ರಮುಖವಾಗಿವೆ,” ಎಂದು ತಿಳಿಸಿದರು.

ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರಮುಖ ಅಧಿಕಾರಿಗಳು ಹಾಗೂ ಗಣ್ಯರು ಭಾಗವಹಿಸಿದ್ದರು, ಡಾ. ಎಸ್ ರಂಗಸ್ವಾಮಿ, ಉಪ ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್. ಶ್ರೀಮತಿ ಗಾಯತ್ರಿ, ಮುಖ್ಯ ಯೋಜನಾಧಿಕಾರಿಗಳು. ಶ್ರೀಮತಿ ಜಯಲಕ್ಷ್ಮಮ್ಮ, ಯೋಜನಾ ನಿರ್ದೇಶಕರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು (DHO), ಜಿಲ್ಲಾ ಶಸ್ತ್ರಚಿಕಿತ್ಸಕರು (DS). ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರು ಹಾಗೂ ಜಿಲ್ಲಾ ಆಯುಷ್ ಅಧಿಕಾರಿಗಳು. ಶ್ರೀ ಬಸವೇಶ್ವರ ಮೆಡಿಕಲ್ ಕಾಲೇಜಿನ ಮುಖ್ಯಸ್ಥರು. ರಾಜ್ಯ ಮತ್ತು ಜಿಲ್ಲಾ ಮಟ್ಟದ ಪಿಡಿಒ (PDO) ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *